< 1 Yohana 5 >

1 Indi wa akpa yiem di yesu a kristi bagrji u rji ni Irji inde di wa a kpayiem ni ti'a naki ani yiem ni vre wa ba grji ni u.
ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.
2 Ahe naki ki toh di ki kpayiem mri Irji inde ki yiem ni Irji di zi tre ma.
ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
3 Naki wa yi a yiem u'Irji: wa ki yiem ni tre ma kuma itre ma ba na u' di'na.
ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.
4 Du ndi wa ba grji rji ni Irji ani zan gbengbenlen gbugbulu. Nakima hi nasara wa a zan gbengbenlen gbugbulu wato jaji bu.
ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.
5 Ahi wu han wa a zan gbengbenlen gbugbulu'a? Ahi ndi wa a kpa yeim di yesu a vre Irji.
ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?
6 Wa yi i, hi wa aye ni ma mba yin Yesu kristi aye ni ma ni kangrji na, ama ni ma ba yin.
ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.
7 A baba tra wa ba kpa yiem:
ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.
8 Ni Ruhu ni ma u ni yin. Bi yi tra ba ti yaje jeniya ni kpa mba. Ifiift Greek bi sen ba han kpi didima.
ಆತ್ಮ, ನೀರು, ರಕ್ತ ಎಂಬ ಮೂರು ಸಾಕ್ಷಿಗಳುಂಟು. ಈ ಮೂರು ಒಂದೇ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತವೆ.
9 Inde ki kpa jaji u ndi, jaji u Irji a zan wayi hi testimony u' Irji wa a kpa yeim ni vre ma.
ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.
10 Du ndi wa a kpayeim ni vre Irji ahei ni testimony ni suron ma indi wa ana kpayeim ni Irji na a kma u'ti ndi u' che don ana kpayeim ni testimony wa Irji no nitu vre ma na.
೧೦ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
11 Testimony a wa yi, Irji nota son u'tutrun u rei ki hei ni mi vre ma. (aiōnios g166)
೧೧ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. (aiōnios g166)
12 Indi wa ahei ni vre'a ahei ni rei. Indi wa ana hei ni vre Irji na ana hei ni rei na.
೧೨ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.
13 Mi han kpie bi i ni yu'u du yi toh di bi hei ni rei u' tutrun ni ndi wa kpa yeim ni de vre Irji. (aiōnios g166)
೧೩ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ. (aiōnios g166)
14 Wa yi hi gbengbenlen wa ki hei ni u, du ikpie wa ki miye wa hei di di ni mere ma ani woh ta.
೧೪ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
15 Naki inde ki toh dani wota ko ahi gye ki miye, ki ka toh di ikpie wa ki miye ki kpa ye.
೧೫ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
16 Inde ndi'a atoh vayi si ti latre wa ana tsra u' que na, wa ka bre Irji ni no rei, me gomace ni bi wa latre mba na kai u que na, Lahtre ri hei wa atsra u que, mina tre di du bre nitu kima na.
೧೬ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.
17 Dukikpie u' meme ma a lahtre na ki lahtre wa ana tsra'u que na.
೧೭ನೀತಿಗೆ ವಿರುದ್ಧವಾದದ್ದೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.
18 Kitoh du ndi wa ba grji'u rji ni Irji ana ti lahtre na. Naki u wa ba grji rji ni Irji gyegyere u bi ibrji na iya da ti u meme na.
೧೮ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
19 Ki toh di kita ki rji ni Irji kuma kitoh di gbugbulu wawu ahei ni mi gbengbenlen bi brji.
೧೯ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.
20 Na ki ki to di ver Rji ye buh shishi ni ta u di wa yi hi jaji, ki hei ni wu wa wu hi hi jaji ni mi ver ma Yesu kristi. Iwayi yi a Rji u jaji u son kibo (tutrun). (aiōnios g166)
೨೦ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ. (aiōnios g166)
21 Imir na cib hi ni bi birji na
೨೧ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.

< 1 Yohana 5 >