< 1 Pita 1 >
1 Pita, Manzo Yesu Kristi, hi ni bi tsri wawu'u, ni wa ba chu ba ni-gbu Pontus, Galashiya, Kappodosiya, Ashiya ni Bitiniya.
೧ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,
2 A hi tie u Irji - Tietie wa'a toh ko shishi'a, nda tie ndu ni Ruhuma u wo tre mba u iyi Yesu Kristi wa'a ka-vra. Ndu Zizih hu'yi, u'si suron mbi ndu babrahn.
೨ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.
3 Irji ni'tti Bachi mbu ndu kpa gbre-san. Ni Khikle llo suron ma, a nnota ingrji să ma ni yo suron ni tashimme Yesu Kristi.
೩ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
4 Gado yi a wa ana gla na, ana tie memme na, nda na khle na. Ba mlau zi ni yiwu ni shulu.
೪ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.
5 Irji hrawu ni gbengble ma ni'wa wu nyime ni kpa chuwo wa ba tsoro ni'nton bi khle.
೫ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
6 Bi ngiri kpukpo me ni wu, duk ni wa a mla bi, na he wiye me nitu gbugbu ya-a.
೬ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
7 Iwayi tsro suron kpa nyime mbi, a bi zan zinariya wa ani tie meme'a, ko ba goun ni llu. A tie to'mba dun suron'mbi dun fe gbire-san, daraja mba nzu suron ivi wa ba tsuro Yesu Kristi'a.
೭ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
8 Bi rihen towu, u bi sonwu. Bina towu zizan na, u bi kpa nyime niwu ndi ngiri wa'a zan wa bana tre-e na.
೮ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
9 Bi ki kpa ɖï mbi zizahn yi wa'ahe nitu yo'suron mbi, wa ani kpa yi chuwo.
೯
10 Ni tu chu'chuwo mbi'a, Anabawa ba bă hla tre alheri wa ani ye ni yi'a, ba frowa nda froya sren-me,
೧೦ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
11 Ba wá ba toh ka ba nha u ntoh wa Ruhu Kristi nimi mba sia tre ni ba-a. U wayi asi ti ka wa asi hla ni bawu nitu iya u Kristi ni kikkle kpi wa ba ye ni gohn.
೧೧ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.
12 Ba nhara-a bawu ndi bana ki ti ndu'a u mba na, amma bi yi, wa ba tre nitu kpi wa ba hla yiwu'a ni nyu biwa ba bla tre Irji ni yiwu ni zo Ruhu Irji wa a rji shu'a - ikpi wa Malaiku ba wa to'a.
೧೨ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
13 U bi ka lo suron mbi nji. Sohn nchen meh. Yo suron nitu Aleri wa ba njiye ni yiwu ni ntoh wa ba bwu ni yiwu Yesu Kristi.
೧೩ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
14 Na immri bi woh-tre, na yo tu-mbi ti kpe wa bi si ta ti ni ntoh wa bina toh Irji na.
೧೪ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,
15 Na wawu wa a yo yi son ni nkinklah suron, biyi ngameh ban nkinklah suron'a ni-ti-mbi.
೧೫ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
16 Ba nha ndi, son ni nkinklah suron, u Me ngameh mi he ni nkinklah suron.
೧೬ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.
17 U to bi yo “iti” wawu yi ni yi sheriya ni ko-nha nda na ya shishi njo na, njiu mgbamgbah ni zren meh.
೧೭ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
18 Bi to ndi ana ni silva ko gold wa ani gla mba A kpa yi chuwo rji ni memme ti nkprah wa bi vu-rji ni ba ti-mbi na.
೧೮ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
19 Naki, A kpa yi chuwo ni iyi u Kristi, wa-a na he ni lla-tre mpempe meh na.
೧೯ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
20 Irji chu Kristi rji ni memmle wa-a yo nchi u ti mgbumgblu'a, u a bwu ni yiwu ni ntoh bi wa ba kle yi.
೨೦ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
21 Wawu yi bwu nkoh u kpa Irji ni tawu, wa A nzuw rji nimi biwa ba kyu u nda nu ruron u chu, nitu kii yo suron mbi ni he tu-nkoh Irji.
೨೧ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
22 Bi kpa suron mbi du kpan nitu bi wo tre njanji'a. Wayi he nitu son u njanji u mmri vayi; bi ka son kpa-mbi rji nimi suron mbi.
೨೨ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
23 Ba ngrji yi ngari, ana rji ni bi wa-ani ti memme na, a rji ni bi wa-ana ti memme na, ni kii bi kpa vri mba imbru tre Irji'a. (aiōn )
೨೩ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. (aiōn )
24 U “ikpa yi he na giga, ibi ngame he na u flawa u giga. Giga ba ba kyu, u flawa ba kuhle,
೨೪ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
25 U tre Irji na kle na. Wayi ahi tre njanji wa ba hla ni yiwu. (aiōn )
೨೫ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. (aiōn )