< 2 Timotawus 4 >

1 Me fe u ton ni shishi Rji mba Kristi Yesu wa ani bla tre ni bi vir baba bi wa ba kwu ye'a, domin yema nikohma.
ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,
2 Yo suron di hla tre'a ko iton hei, ko ton na hei na, yar ghan, treba, no ba mre ni vu suron ni tsro ba.
ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.
3 Hon niye wa indi bana vu suron ni tre didi'a na sei de ba wa bi tsro tre wa isuron ba ni kpayeim ni ba, bi wa ba tre kpie wa itoh mba nifa du ba woh ba.
ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
4 Ba kam toh ba rji ni jaji, da hu ni bubu wa bla choloncho.
ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.
5 Naki i'u wuka yo tu me ni bubu ri, di vu suron ni yah, di tidu bi bla tre rji, di ti du me wawu.
ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.
6 Nakima ziza'an basi zo'ome na hadaya u' so itoh mu wa mi don gbugblu'ati.
ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.
7 Me taku didima, di ta kle, di zi jaji.
ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.
8 Ba zi inze u' bi kiklan susron u'bla tre, ani ne ni chachu kima, ana me ni kangrji muna, aman ni biwa ba kpanyiem ni ye ma.
ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
9 Sima gbagbala di yeni me, nati jinkiri na.
ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು,
10 Dimas kame don, dani son gbugbulu u zizan, da hi ni Tassaluniki, Kariskia a hi ni Galatiyawa u Titus ahi ni Dalmatiya. (aiōn g165)
೧೦ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು. (aiōn g165)
11 Luka ni kangrji ma ahei nime, mba Markus di jin tia ni kpame, don ahei ni amfani mu ni bubu tindu.
೧೧ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.
12 Naki, me ton Tikikus hi ni Afisis.
೧೨ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
13 Burgo wa mi don zi taru was ni wo karbus, inde u ye, u ka ban jin ni ben ba
೧೩
14 Iskandari u' la'a ba gbaju a tsra me yah kpukpome, du Bachi ni ha u ni tu meme ndu ma.
೧೪ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.
15 Naki u me u ka mla ya tu me niwu, don ana kpayeim ni tre mbua' na.
೧೫ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.
16 Ni vie u mumla wa me kare tumu, ba ndi wa akrie ni kogon mu, ba kame don ni kangrji mu, du ba na bla lahre mba sur ni ba wu na.
೧೬ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.
17 Naki Bachi ka krie ni me, da ne gbegbenlen wa nime u tre ani kagon, ndi ba, baka wo di ba kpame chuwo ni yeiu chen.
೧೭ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
18 Bachi ni kpame chuwo ni meme du, nakima ani kpa me chuwo har hi ni kohma ni shu, ni u kuma daraja hini gbugbulu ni gbugbulu amin. (aiōn g165)
೧೮ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್. (aiōn g165)
19 Chi ba Biriska mba Akila ni koh Onisifurus.
೧೯ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, ಒನೇಸಿಪೊರನ ಮನೆಯವರಿಗೂ ವಂದನೆಹೇಳು.
20 Arastus a so ni Korintus, naki me don Turufimus ni Militus ana hei ni si kpa na.
೨೦ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು.
21 Sima gbangbla di ye ri du su ti, Afbulus ni chuu ni Budis, Ni Linus ni Kalafidiya ni mir vayi wawu.
೨೧ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ.
22 Bachi ka son ni ruhu me. Didi ka hei ni yi.
೨೨ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.

< 2 Timotawus 4 >