< Yohana 8 >
1 Yesu hi ni gbunlu Zaitun.
೧ಯೇಸು ಎಣ್ಣೆಮರಗಳ ಗುಡ್ಡಕ್ಕೆ ಹೋದನು.
2 Ni mbubele a ka ban ye ni hekeli, indji wawu'u ba kaban ye niwu, aye kuson na si tsoro ba.
೨ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.
3 Se bi nha ni Farisawa ba nji Iwa wandi ba vu asi tie ngyungyu, u ba yo ni tsutsu mba.
೩ಶಾಸ್ತ್ರಿಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ;
4 U ba tre niwu, Malan, Iwa yi ba vu ahe ni mi si ti ngyungyu.
೪ಯೇಸುವಿಗೆ, “ಬೋಧಕನೇ, ಈ ಸ್ತ್ರೀ ವ್ಯಭಿಚಾರ ಮಾಡುತ್ತಿರುವಾಗಲೇ ಸಿಕ್ಕಿಬಿದ್ದಳು.
5 Ni du Musa, a tre ki ta bi indji bi ki, Iwu u tre nigen ni tuma?”
೫ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ?” ಎಂದು ಆತನನ್ನು ಕೇಳಿದರು.
6 U ba tre naki ni ndu sa tre ni ndu ba fe ni ikpe wa ani kpa ndema tie meme (Ko latre), u Yesu sontu grji na si nha ni menme ni vren wo.
೬ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.
7 U ba kamba na kri ti tutu bubu miyen, wa lukri ni ndide na hla bawu, “Indji ri ni mi biwa ato ana latre na, ka guci ta.
೭ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು
8 A la sontu grji na nha ni vren woma.
೮ತಿರುಗಿ ಆತನು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.
9 Ba wo naki na lu shan rju ni yi yir ri ni ninkon, na ka Yesu don ni grjima, mba Iwa wa ba na yo ni tsutsu mba.
೯ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.
10 Yesu lu kir dinde na miyen, “Iwa, bi wa ba nha wu ba he ni tse? Idiori na nhau na?
೧೦ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಸ್ತ್ರೀಯೇ, ಅವರು ಎಲ್ಲಿಗೆ ಹೋದರು? ನಿನ್ನನ್ನು ಖಂಡಿಸುವುದಕ್ಕೆ ಯಾರೂ ಉಳಿಯಲಿಲ್ಲವೋ?” ಎಂದನು.
11 Wa hla ba diori, (Ubangiji), “Yesu tre, imeme mina nhawu na, hi na la latre ganna.
೧೧ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ “ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ” ಎಂದು ಹೇಳಿದನು.
12 Yesu tre niba ganri, andi, “I hi me yi mi kpan u gbungbulu, Indji iwa a hume ana tre ni bwuh na ama ani he ni kpan u re (iviri).”
೧೨ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.
13 Farisawa ba tre niwu, “U zi tre nitu ikpe wa wuto'a nmitu tume, ana njanji na.
೧೩ಫರಿಸಾಯರು ಆತನಿಗೆ “ನಿನ್ನ ವಿಷಯವಾಗಿ ನೀನೇ ಸಾಕ್ಷಿ ಹೇಳುತ್ತಿರುವೆ, ನಿನ್ನ ಸಾಕ್ಷಿಯು ನಿಜವಲ್ಲ” ಎಂದು ಹೇಳಲು
14 Yesu sa nibawu na hla, mi ti sheda tu mu me, ahi njanji, mi to iwurji wa mi rji ni wa mi hi'a, biyi kuko bina to wurji wa mi rji'a na, bina to wurji wa mi hi'a na.
೧೪ಯೇಸು ಅವರಿಗೆ “ನನ್ನ ವಿಷಯವಾಗಿ ನಾನು ಸಾಕ್ಷಿನೀಡಿದರೂ, ನನ್ನ ಸಾಕ್ಷಿ ಸತ್ಯವಾದದ್ದು. ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆ ಎಂದು ನನಗೆ ತಿಳಿದಿದೆ, ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ಎಂಬುದು ನಿಮಗೆ ತಿಳಿಯದು.
15 Bi tron u son tu, ime na tron to ni diori na.
೧೫ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.
16 Ko mina tron ni diori me, itron mu mu'a a u njani nitu ana me kankrji mu na, ki he mbu Iti mu wa a ton me.
೧೬ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಬ್ಬಂಟಿಗನಲ್ಲ, ನನ್ನನ್ನು ಕಳುಹಿಸಿಕೊಟ್ಟ ನನ್ನ ತಂದೆಯೂ ನನ್ನ ಜೊತೆಯಲ್ಲಿ ಇದ್ದಾನೆ.
17 Ee, Ana ki ni du wa ba nha mi tre bitsi, andi sheda indji hari a njanji.
೧೭ಇಬ್ಬರ ಸಾಕ್ಷಿಯು ಸತ್ಯವಾದದ್ದು ಎಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ.
18 Ahi me yi mi sheda itu mu, u Itimu iwa a ton me a sheda mu.”
೧೮ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾನೆ” ಎಂದನು.
19 Ba miyen, “Iti me ahe ni tsen?” Yesu hla ni bawu bina tome na, me bika tre Itimu, bina to me, bina to Iti mu'a me.
೧೯ಅವರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದರು. ಅದಕ್ಕೆ ಯೇಸು, “ನೀವು ನನ್ನನ್ನೂ ತಿಳಿದಿಲ್ಲ ಹಾಗೂ ನನ್ನ ತಂದೆಯನ್ನೂ ತಿಳಿದಿಲ್ಲ. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿದಿರುವಿರಿ” ಎಂದು ಉತ್ತರ ಕೊಟ್ಟನು.
20 A hla tre biyi whirewhir ni bubu wa ba zi kpi wa si tsoro ba tre Rji ni mi hekeli, idiori na vu na nitu iton ma na tsira rina.
೨೦ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.
21 Na hla bawu bru, mi hi biwa bina to me na, bi kwu ni mi latre bi. bubu wa misi hi'a, bina ya hi na.
೨೧ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು.
22 Yahudawa ba tre, ani wutuma mu, na ni tre iwurji wa mi hi'a bina ya hi na?”
೨೨ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು.
23 Yesu hla bawu biyi bi rji ni meme, u me mi rji ni shu. Bi he ni gbungbulu yi, ime mina rji ni yi ni gbungbulu yi na.
೨೩ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ.
24 Iki sa mi hla niyu bi kwu ni mi latre bi. Bitana kpayemmen ni soron bi andi a hi me na, bi kwu ni mi latre bi.
೨೪ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವುನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.
25 U ba tre niwu, awu nha? “Yesu hla ba wu, ikpe mi hla rji ni mumla.
೨೫ಆಗ ಅವರು ಆತನಿಗೆ, “ನೀನು ಯಾರು?” ಎನ್ನಲೂ, ಯೇಸು ಅವರಿಗೆ, “ಮೊದಲಿನಿಂದಲೇನಾನು ನಿಮಗೆ ಹೇಳಿದಂಥದ್ದೇ.
26 Mi he ni kpi gbugbuwu wa mi hla ni yiwu, ni gbi ton ni yiwu ni tuma. Naki me, indji wa a ton ndu, andi u njanji, ikpi wa mi wo niwu'a a baki mi si hla ni gbungbulu ba.”
೨೬ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು.
27 Bana tona ndi asi tre nitu Iti'a.
೨೭ಆತನು ತಂದೆಯ ಕುರಿತಾಗಿ ಅವರೊಂದಿಗೆ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
28 Yesu tre, bita zu Vren Ndji hi ni shu ri bi to ndi a hi me, ndi mi ti kpi ri ni tumu na. Na wa Iti tsoro me, naki mi si ikpi ni yiwu.
೨೮ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.
29 Wawu wa a ton me ndu'a, ana ka me don kan grji mu na, ahe ni me nitu kpi wawu wa me ti'a ani kpa soron ma si.”
೨೯ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.
30 Wa Yesu si hla bi mba, indji gbugbu'u ba kpa yemme ni wu.
೩೦ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
31 Yesu hla biyi ni Yahudawa biwa ba wo na kpayenmen niwu, “Bi ta kli ni mi tre mu ni njanji, bi almajere mu bi nanji.
೩೧ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.
32 Bi to njanji, u njanji ni kpayi chuwo.”
೩೨ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.
33 U ba sa niwu, “Ki mir bi grji ba Ibrahim wa kina ti bre hu diori kan na, iwa tre ni genri, ba kpatachuwo?”
೩೩ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.
34 Yesu hla bawu, “Njani, njanji, mi hla ni yiwu, indji wa ani latre, ahi gran latre.
೩೪ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.
35 Igran, na son ni ko se ka se na, ata son se ka se. (aiōn )
೩೫ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ. (aiōn )
36 Naki, ivren nita kpa yi chuwo, u bi nawo wawu.
೩೬ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.
37 Mi to bi, bi igrji Ibrahim, bi son bi wuma, nitu wa lan tre mu na he ni bubu son ni mi bina.
೩೭ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.
38 Mi hla ikpe wa mi to ni Ti mu, biyi bi ti ikpe wa bi wo ni ba ti bi'a.
೩೮ನಾನುತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ” ಎಂದನು.
39 U ba sa niwu, “Ibrahim mba a timbu, Yesu hla bawu, “Bina mir Ibrahim bina ti ikpe wa Ibrahim a ti'a.
೩೯ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.
40 U, zizan bi son wume, indji wa a hla njani ni yiwu wa a wo rji ni Rji. Ibrahim na ti naki na.
೪೦ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ.
41 Bi ti na Iti mbi, u ba hla niwu, “Bana grji ta ni mi gyugyu na, ki he ni Iti riri, Irji.”
೪೧ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ” ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು.
42 Yesu hla bawu, “Irji ana Iti bi bi na son me, u mi rji ni Irji i mi he ni yi zizan, ana ni tumu mi ye na, a wawu yi ton me.
೪೨ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.
43 Ahi genri sa bina ya to wo tre mu na? e bina wo tre mu na.
೪೩ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.
44 Bi u Ti bi, Ibrji, bi son bi hu iza ma Iti bi, ani wu ndi rji ni mumla mu ana kri ni njanji na he ni wuna, anita ni hla ice, asi hla Iti ma (isoron ma) rji ni mu a indji u ce na Iti u ce ngari.
೪೪ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.
45 Wa mi si hla njanji ni yiwu u bi na kpa yenme ni kpe wa mi si hla na.
೪೫ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ.
46 Ahi nha ni ri mbi a vu me ni latre? Mi ta hla njanji u bi ka na kpayemme na?
೪೬ನನ್ನಲ್ಲಿ ಪಾಪವಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ, ನೀವು ನನ್ನನ್ನು ಯಾಕೆ ನಂಬುವುದಿಲ್ಲ?
47 Indji wa a u Rji ani wo tre Rji, biyi bina wo tre Irji na, nitu wa bina u Rji na.
೪೭ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.
48 Yahudawa ba sa niwu, natre, “Kina hla njanji na nitu wa ki hla andi u indji u Samariya ni he ni meme brji?”
೪೮ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.
49 Yesu sa bawu, “ime mi na he ni Ibrji na, mi to ninkon u Timu, biyi bina to ninkon mu na.”
೪೯ಅದಕ್ಕೆ ಯೇಸು; “ನನಗೆ ದೆವ್ವ ಹಿಡಿದಿಲ್ಲ. ನಾನು ನನ್ನ ತಂದೆಯನ್ನು ಗೌರವಿಸುತ್ತೇನೆ, ಆದರೆ ನೀವು ನನಗೆ ಅವಮಾನಪಡಿಸುತ್ತೀದ್ದಿರಿ.
50 Mina wa to tu mu ti kperi u tu mu na, Indji ri he wa ani wa na ni gbi ton.
೫೦ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ, ಮಹಿಮೆಯನ್ನು ಹುಡುಕುವಾತನು ಒಬ್ಬನಿದ್ದಾನೆ, ಆತನೇ ನ್ಯಾಯಾಧಿಪತಿ.
51 Njanji, njanji, mi hla ni yiwu, indji wa a hu tre mu, ana to kwu na.” (aiōn )
೫೧ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು. (aiōn )
52 U Yahudawa ba tre, zizan yi ki to u he ni brji. Ibrahim ni ana bawa ba kwu, iwu u tre, indji wa a hu tre me ana to kwu na.' (aiōn )
೫೨ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ? (aiōn )
53 Ee, u na zan Iti mbu Ibrahim ni ninkon na wa kwu, ka u zan? anabawa me ba kwu, u ban tu ndi u nha?”
೫೩ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.
54 Yesu sa, “Mita ban tumu ti kperi u tu mu, ani u migyen, ahi Iti mu mba ban ti kperi iwa bi tre ahi wawuyi a Irji bi.
೫೪ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,
55 Bi mebina tou na, ime mi tou, mi ta tre mina tou na, ka mi kati iriri ni yi me, indji u ce, se me, mi to ni ni hu tre ma.
೫೫ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.
56 Iti bi Ibrahim a gir ni to ivi mu, a tou na gir.”
೫೬ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು” ಎಂದು ಹೇಳಿದನು.
57 Yahudawa ba hla niwu, “Una ti hamsi rina, una to Ibrahim?”
೫೭ಅದಕ್ಕೆ ಯೆಹೂದ್ಯರು, “ನಿನಗೆ ಇನ್ನೂ ಐವತ್ತು ವರ್ಷವಾಗಿಲ್ಲ, ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಅಂದರು.
58 Yesu hla bawu, “Njanji, njanji, mi si hla ni yiwu, mi heri, ban grji Ibrahim.
೫೮ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.
59 U ba vu tita ndi ba tau, u Yesu ri tuma, na rju ni mi hekeli'a.
೫೯ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.