< Luke 14 >
1 Ni vi u chachu sati ri, wa a ri ni koh bi ninkon Farisawa ri du rhi biri, ndji ba sru shishi ni wu.
೧ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.
2 se ga ndi “U” lilo huk kpa.
೨ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ,
3 Yesu ya da mye bihan vuvu baba Farisawa, abi du ba chu lilo rju ni chachu sati ko an an?
೩“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
4 U ba sun ngbangbi, Yesu ka vu ni wo lunde da chu lilo rju niwu, da du hi kpama.
೪ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ,
5 Yesu mye ba, ahi nha ni mi-mbi, inde vren ma, ko napron ma aku ni juju ni chachu sati, wa ana chu na?
೫“ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು.
೬ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು.
7 Da Yesu si ya ba da toh bi wa ba you ba ye, ba wa bubu sun bi ni koh, watre kayiyi, nda tre.
೭ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು.
8 Inde ba you hi ni bubu gan u gran na kuson ni bubu bi ninkon na, ani yiwu ba you ndi wa a zawu.
೮ಅದೇನೆಂದರೆ, “ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು
9 Inde ndji wa a you yi ha bi, aye, a ni tre no bubu sun me, “u shan ni ti'u, u” wu kma hi ni bubu bi kalachu.
೯ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.
10 Inde ndji wa a you, a tre kpamu hon ye ni wayi, nakima, u ndji ba, ba no ninkoh, bana kpa wu tsri na. biwa bi son baba ni tebru'a.
೧೦ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು.
11 Indji wa a nzu tuma, baka ka tuma grji, wu wa u katu me grji, ba nzutu me hi shu.
೧೧ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
12 Yesu hla ni ndji wa you ye, inde wu ta ni yo ndji ye ri biri, ko ni gan, u ka na yo kpukpan me na, ko mri vary me na, ko malan me na, ko bi kutra kahlan mena bi nklen na, baba me ba you ngame, wandi ba njiye niwu.
೧೨ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.
13 Ba tie lulu yo don bana ban ni wu na,
೧೩ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ,
14 inde wu yo ndji ye ni gan me, u ka yo bi kalanchu, ni bi wa bana he ni gbengblen na, ni bi kple zah, ni bi fie, ba tie lulu you don bana he ni kpe wa ba han wu na. Don ba tie lulu yo ni chachu wu lunde bi kinklan suron.
೧೪ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”
15 Da indji ri wa a son ni tie bru ni Yesu awoh tre a, nda tre, ba tie lulu yo ni ndji wa ani rhi biri ni koh Irji.
೧೫ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,
16 Yesu woh da tre ndi ndji ri atie gan rigra ma nda yo ndji gbugbu-u.
೧೬ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.
17 Da inton wu gan a tie, wa a ton ivren koh ma du hi hla ni bawu du ba ye, biri a we ye.
೧೭ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.
18 Wa wu bawu, bana yena, u mumla a tre ndi wawu le rju, wawu ni bi toh wru hle ni mu.
೧೮ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
19 U na tre wawu le lando bi zran ton, mi yi tsra ba toh, mi bre wu, du wru hle ni mu.
೧೯ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
20 U tra a tre ndi wawu gran wa, naki mina ye na.
೨೦ಇನ್ನೊಬ್ಬನು, ‘ನಾನು ಮದುವೆಮಾಡಿಕೊಂಡಿದ್ದೇನೆ, ಆದುದರಿಂದ ನಾನು ಬರುವುದಕ್ಕಾಗುವುದಿಲ್ಲ’ ಅಂದನು.
21 Da vren koh aye hla ni ti-koh ma ikpe biyi, u ti koh ma ka tie nfu, nda hla ni vren koh ma du hi gbagbla ninkon bi gbu i, ni kosan gbu, nda yo biwa bana he ni gbengblen na, ni bi chiche, ni bi fie baba bi kple zah.
೨೧ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.
22 Vren koh a tre, iti koh, ikpie wa u tre a kle hra zizan bubu a na shu na.
೨೨ಬಳಿಕ ಆ ಆಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಆದರೂ ಇನ್ನೂ ಸ್ಥಳ ಉಳಿದಿದೆ’ ಅಂದನು.
23 Se ndji u koh ka hla ni vre koh ma hi nikoh ni kosan gbu ndi yo gbugbu ndji du ba ye du koh mu shu.
೨೩ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.
24 Mi hla ni yiwu, biwa mi you ba ni mumla ba na ye kpe ni iye u muna
೨೪ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು.
25 Basi zren ndji gbugbu basi hu, wa hla ni bawu,
೨೫ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ,
26 Du ndji wa ani ye nime, ndana kama ni tima na, mba iyima, ni iwa ma na, ni mri ma, ni mri vayi ma, mri lon baba mri mba ba, hra ni dri ma na, ana ya zama vren koh muna.
೨೬“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
27 Indji wa ana he ni suron u ban giciye nda ye hu me na, ana ya son u vren koh mu na.
೨೭ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.
28 Ahi nha nimi mbi wa ani son be koh wu shu, nda na bla inklen wa ahe ni wu, ko ani tsra u, u me koh, ko ana tsra na.
೨೮ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?
29 Inde a zi nchi koh'a, kana kle meh na, u biwa ba meh baba ba ka nza'u,
೨೯ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು,
30 Ba ta tre toh ndji ani son meh koh, ana ya meh kle na.
೩೦‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು.
31 A chu rime ani hi taku ni chu ri nda na son nda bla bi taku ma toh ni mumla, ko soja ma bi gbengblen ba kai dubu wulon wa ani ya kbu tu ni chu rima mu wa a he ni bi gbengblen dubu shirin.
೩೧ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?
32 To inde an ya na, ka wa sun si ni chu rima.
೩೨ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.
33 Naki ba ndi wa ni mibi wandi ana ka kpe wa a he ni chu wo na, da ani ya k'ma tie vren koh mu.
೩೩ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.
34 Ima a kpie ndindima, inde imma a sa ba mla tie ni ni ngyen?
೩೪“ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?
35 Ana labi gana, sei baka ka hlega, ka kma tie toki ni meme, ndji wa ahe ni ton ka wo.
೩೫ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.