< Mark 5 >
1 Baye ni gran nei u gbu garasinawa.
೧ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು.
2 Niwa, a ye rju ni mi jirgi. Hi hari baye zon tu ba igu ri u meme ruhu asi rju nimi hbei.
೨ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
3 Bubu son ma a hei ni bbei ba ndi wa ani ya ló koni sarka.
೩ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.
4 Ni-ingu gbugbu ball ni sarka ba ma ruruwa asu sarka ba rji rji maruruwa. Ba Indi wa ani ya vu aba.
೪
5 Chachu, chachu ni ble mba ni yalu ani yargro na ni yar kpunma ni tita ni mi hbe ba ni kpah tita.
೫ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.
6 A chu shishi to Yesu ni gbugbama na tsutsu ye kuque gbarju ruwa na nikon ma.
೬ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು,
7 A lu tre gban gban niwu; u mu get niwu? Yesu u vre rji u wawu? me pre ni de rji na tie me yahna.
೭ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.
8 U wa hla niwu's rju ni kpah ma I wu meme ruhu.
೮ಏಕೆಂದರೆ ಯೇಸು, “ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು” ಎಂದು ಆಜ್ಞಾಪಿಸಿದ್ದನು.
9 Amyen bayo nde me ni nha? Wa hla niwu nde ma tuli ama a ki hei gbugbu'u.
೯ಯೇಸು, “ನಿನ್ನ ಹೆಸರು ಏನೆಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ,
10 Abra Yesu dina zu wau ni gbuyina
೧೦ನಮ್ಮನ್ನು ಈ ಪ್ರಾಂತ್ಯದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು.
೧೧ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.
12 Ba bra datre zutarhi need lecleba beri kiri niba.
೧೨ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು.
13 Abri ba meme ruhu ba rju dari ni licleba ba tsutsu gerji ni tie gbuw hau ni mi nei bakede bakai dubuha ba que ni nei.
೧೩ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.
14 Biwa basi kurju ledeba ba tsutsu tu da la ikpe da tsir.
೧೪ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು.
15 Baye ni irvriji Yesu tre da tah iguh u meme want nibawu tuh
೧೫ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.
16 Biwa sahe niki da toh kpe da sitsir ni igu meme ruhu, da la nibawu didime na ta bawu tre leeleba.
೧೬ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು.
17 Ba sawume tsu bre du biri gbua.
೧೭ಆಗ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
18 Asi sou ri ni jirgi iguh meme ruhu bra diwau hu.
೧೮ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.
19 Ama Yesu na kpagmena ama da la ni niwuhi Kon me ni ndi me di la bawu ikpe rji teh u; yada as mashishime.
೧೯ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು.
20 Ahi kpa ma da so ma si la kpi bi keklema wa Yesu teh ni wu ni dikatolis. Kowa ni ndi sisri.
೨೦ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.
21 Nlina Yesu, a rungra ni jirgin. Ri gbala ko rima ndi gbugu Baye gyekle ki niwu.
೨೧ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.
22 Bi ni Kon ri church wa bayo Jairus ye du joku ni zama.
೨೨ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,
23 Asake bra ngari du tree di verwa tsitsa te wiewier que mi bra ye di sawai niwu di sama sikpa nda son divine.
೨೩“ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
24 Bahi bawu; ndi gbugbu bawu nda ni hau nikpa
೨೪ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.
25 Iwari beki wa the ni lol nkayinle is wulon nduha.
೨೫ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು.
26 A shaya brabra ni wa bi nu mua gbugbu it ase kpama peh-phe wu nda ya di sikpa nihe ama lol ka kle.
೨೬ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
27 Awo kpi Yesu the. nda ye mi kuganma ni mi gbugbu ndi nda tuka ingloma
೨೭ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.
28 A tie nda mi taba igloma mike mi samu sikpa.
೨೮
29 Niwa ataba wu; it kukri, ato ni kpa wawu samu sikpa ni lehenma
೨೯ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.
30 Yesu toh nikpa gbegble rju mikpa. A gbaya ni mi bdiba nda tree, aha taba glomu?
೩೦ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲು
31 I miri konma batre u to gbugbu ndiyi tree ndi tre iha tabawu.
೩೧ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.
32 Yesu ni son ya nda to aha taba wu.
೩೨ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ,
33 I wa to kpe asame wu sisitsir vu. Aye ndu joku ni gbui ma nda la wu gerger me.
೩೩ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.
34 Ala wu, iuerwa, isorun didime asa u samu sikpame.
೩೪ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು.
35 Asi tre; ndi bari ba rji ni nikon ie Church nda la, Iverwa me kwi na dane tiche kanam
೩೫ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು.
36 Yesu wo kpe ba si tre, nda ua ni Kon ni church a na te sisri na khir behan gbagba.
೩೬ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.
37 Ana bri druwo diwuna imba Bitrus, Yakubu mba Yohana vayi Yakubu.
೩೭ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ.
38 Baye ni koh was ani anikon church a ato ndi ba si tre gbaba me, basi tsra gre gbagbame.
೩೮ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.
39 Ni rhi ma ni Kon ala bawu agesa bisi lo isoran ndi si gbagro? iverna, na gwuna, asigruna.
೩೯ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು,
40 Ba zahe. A zuba just pepeme ni ra nda mba iteh uer mba yinma ndi babe niwu, nda rhi hi ni iwirji iver ha.
೪೦ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,
41 Avu iwo very nda la wu, Talita kumi wa ala iverwa tsitsa mi la ni wu lude. Ba wuton iver nda tsir (the nise well doha)
೪೧ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.
42 Ba ter sisri pepeme nisorun dedeme.
೪೨ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು.
43 Ala bawu ndi ba na la nidruna. Nda la bawu mu lla rhi.
೪೩ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.