< Matiyu 5 >

1 Ni to gbugbu ndi ba, a hon hi ngblu ri ni kuson ma mrli koh ma baka ye ni wu.
ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.
2 Ka bwu nyu ma nda tsro ba nda tre:
ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ,
3 Lulu ahi u bi ya ni brji didi, ikoh shulu ahi u mba.
“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.
4 Lulu ahi u bi yiqu, e ba nno ba sisron.
ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.
5 Bi lulu ba bi wa bana nzu tu na, ba nji meme u ngbugblu.
ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.
6 Bi lulu ba bi tie yon nda tie hlama zizi, e ba wrji.
ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.
7 Bi lulu ba bi lo sron e ba kpa lo sron me.
ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.
8 Bi lulu babi wa isron mba a kheklan me e ba toh rji.
ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.
9 Bi lulu ba bi wa ba wa sonsi, e ba yo ba mrli Rji.
ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.
10 Bi lulu ba ba wa ba tie ba ya nitu zizi mba, e ikoh shulu ahi u mba.
೧೦ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.
11 Bi lulu a biyi wa bati mre yi nda tieyi ya, nda wa meme tre nicece wu yiwu ni tu mu,
೧೧“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.
12 Ngri di briku kpukpome, e bi he ni kickle dii ni shulu, e bati ni anabawa bi sen nakii.
೧೨ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.
13 Bi mah u ngbungblu, u mah nita tie meme u ani la u tie gye garli? Ana la bi utie kpie na, ahi u ka hlega u ndi baka canwu niza.
೧೩“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.
14 Bi kpan u ngbungbu. Igbu wa ba mewu ni tu ngblu'a ana riri na.
೧೪ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.
15 U bana yo lu ni fitila nda kayo ni sisen na di ba kauzi tsame nitu kukron ma wani nno kpan ni ndi bi koha wawuu.
೧೫ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.
16 Ndu kpan me shan tsro ndi, di ndu ba to ibi ndu me nda gbire tieme wa ahe ni shu'a san.
೧೬ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.
17 Na tamre di meye kpa nji tre anabawa ba tie meme na. Mi naye kpa tie meme na, mi ye tie wu tsra.
೧೭“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.
18 Njanjimu, me hla yiwu, shulu mba ngbungblu ba tana kle na, ikpie riri me ni nji tre'a na joku megyen na, ba ku tsra.
೧೮ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.
19 Indi wa a kunyre ni ri u nklekyen nji tre'a nda tsro ba ni ndi, ani vi nklekyen ma ni ikoh u shulu, u iwa ani hu nda tsro ba, ba yo ndi kiekle ni koh u shulu.
೧೯ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
20 To mesi hla yiwu din, zizi me nita na nna' zizi bi nha ni Farisawa na bi na he nkon u ri ni koh u shulu na.
೨೦ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
21 Bi wo ndi ba tre ni ndi bi sen, 'Na wu na, u indi wa a wu-a, ahe ni nyu ya'u shariya.
೨೧“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.
22 Me wa yiwu ndi iwa a tie nfu ni vayi ma hama ni kpie wa anno nfu'a a si gbyen shariya. U indi wa a hla ni vayi ma, 'Racah!' a si gbyen tre ni tuma. Iwa a hla ndi, 'Ruru' asi hi kpentren lu. (Geenna g1067)
೨೨ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು. (Geenna g1067)
23 Uti ye' nno kpie ni tra Rji, ndi taka vayi me ahe ni tre ni tu me'a,
೨೩ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,
24 U ka donme ni nno' kpie'a ni tra Rji, ndi hi mla kpambi tie mbi vayi me rli ndi ye nno' kpiea.
೨೪ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.
25 Mlatie kpa y'me ni ndi wa a nji wu hi ni bi bla tre gbagbla, Ka'bi he nkon sihi mbi wu ni bla tre'a, ni ndu bana lowu na.
೨೫“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.
26 Njanjinmu, me hla yiwu, biti hanwu kle wawuu rliko ka kayi cuwo.
೨೬ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
27 “Biwo' din ba hla ni bi sen, 'una tsi wa lilon ko wa mba tankpan na'.
೨೭“‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ.
28 Mi wa yiwu, indi wa ani kaya wa' ni mew u tohwu ka a kruu ye ni mi sron ma.
೨೮ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.
29 Shishi ko rli anita ni ndu latre, uka krewu rju taga; a bi ndu nhama kpa ri ndu tiw meme niwa ikpa'a wawuu ndu tie memela. (Geenna g1067)
೨೯ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. (Geenna g1067)
30 U iwo me koeli nita ni ndu latre, uka sren wurju kpame; abi nna ndu nhama kpa ri ndu tie meme niwa ikpa'a wawuu ndu rii ni lu'. (Geenna g1067)
೩೦ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. (Geenna g1067)
31 A kru hi me, ba hla di ndi wa a wuugran ni wama'a, ka nno imbe u wu gran a.
೩೧ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.
32 To, mi hla yiwu di indi wa wu gran wamaa, wana he ni tu tie tankpan na, to a yo wu ni latre tie tankpan, u ndi wa a gran wa bi wa ki a latre u kru tankpan.
೩೨ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.
33 “Ganli, biwo ikpie wa ba hla ni ndi bi sen a, 'Bi na' shi' rji' uce na, ndu tre mbi ta he u Rji'.
೩೩“ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.
34 Mi hla yiwu, na shi rji memle muna ko ni shulu iki ahi ruron (kpanci) u Rji;
೩೪ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.
35 Ko ni meme, iki ahe ni ndaza ma; ko ni Urushalima, wa ahi kiekle gbu u Ichu rligra.
೩೫ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ; ಅದು ಆ ಮಹಾ ರಾಜನ ಪಟ್ಟಣವಾಗಿದೆ.
36 Ko Bina shi'rji' ni tuh' mbi na, e na to tie nfu tuh mbi ndu kinklan ko shinji na.
೩೬ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.
37 Ndu 'e mbi ndu'e u a'an mbi ndu a'an ani ta zan towa, ka hi u brji.
೩೭ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.
38 Bi wo wa ba hla shishi ni rjuhla shishi u ba rjula inyren ni nyren.
೩೮“‘ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು’ ಎಂದು ಹೇಳಿರುವುದು ಕೇಳಿದ್ದೀರಷ್ಟೆ.
39 To, mi hla yiwu na gbi sron ni meme ndi na to ba tana wruu ni nhma korli, uka kma irima nno ngame.
೩೯ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.
40 Iri mbi ni ta ni son mrlen yi nda kpa klon mbi ri, mbi ka nno wu ri nhatia.
೪೦ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.
41 U indi wa a vuyi ndu yi zren mili rii mbi ka zren hu tie mir harli.
೪೧ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.
42 Nno biwa ba mye yia, u waa mye yi hlaa mbi ka na ka ngon tie wu na.
೪೨ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.
43 Biwo wa ba' hla, 'U son vayi me ndi kame ni wa a kranwu'.
೪೩“‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.
44 To me hla yiwu, son bi kran yi, tie lulu ni bi wa ba tie nyu yiwu a tie zizi ni bi wa ba fu' sron niyi a, din bre Rji ni bi wa ba tie yi meme ni ya'.
೪೪ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.
45 Di ndu yi he mrli tie mbi wa he shu a: waa ani ndu rji ma kpan ni meme ndi mba indi didi, nda ndu ilu kuh ni ndi wa a to Rji ni wa ama to Rjia na.
೪೫ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
46 To, uti son bi sonwu, a ngye didi utie? Bi kpa ban bana tie toki me na?
೪೬ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.
47 U bita ci mrli vayi mbi me gyen, u bi tie ngyeri wa a nna u ba ri a? Bi kpa ban bana tie toki me na?
೪೭ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.
48 Naayi, bi he tsartsar me na tie mbi u shulu wa a tsartsar me a.
೪೮ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.

< Matiyu 5 >