< Romawa 5 >
1 Ni wa ki fe Barata, ki fe si ni Irji ni nkon Yesu Kristi.
೧ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.
2 Ki fe nkon ni kpanyime mu nimi tie ndindi wa ki kri, ki ngyiri ni yo suron mbu ni Irji ni kpe wa ani tie ni tawu'a.
೨ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
3 Ana kima migyen na kiga mgban ngame ni ba yambu. Ki toh ndi yah ni nu vu suron.
೩ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.
4 U vu suron nino mgbemgble suron, u mgbemgblen suron ni nno yo suron,
೪ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.
5 u yo suron ana nno shan na nitu waa ba ka ison Irji sru tawu ni mi suron Irji ni tsratsra Ruhu, wa ba nnota wu'a
೫ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
6 Wa kina he bi kunyire'a ri, u Kristi ka Khwu ni bi lah tre tsra ni nton ndindi.
೬ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
7 A he ni dii ndu ri khwu nitu ndji tsratsra, u mi ya indrjo ni ma khwu ni ndji ndindi.
೭ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.
8 Bachi a tsro son ma ni tawu, wa kina rhi he bi lahtre rhi'a, Kristi khwu nitu mbu.
೮ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
9 Zan zizan wa a ngla ta ni yi ma, ani kpata chuwo ni nfu u Irji.
೯ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
10 Kina he bi ka wo tre, ba kata kabi ni Irji nitu khwu vrenma, zizan wa ki fe katu kabi'a, ba kpata chuwo nitu vrhi ma.
೧೦ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
11 A na naki megyen na, ki ngyiri ni Irji nitu Bachi mbu Yesu Kristi, wa nitu ma yi ki kabi yi'a.
೧೧ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.
12 Ni nkon ndji riri lah tre ari ni mgbumbglu, ni nkon kima ikhwu'a ri ni nkon lahtre'a. U khwu rhi ni ndji wawu'u, don ba lahtre wawu mbawuu.
೧೨ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.
13 Ni nton wa bana tie sharia na, lahtre ana he ni mgbumgblu, bana ta tre tre lahtre na ninton wa sharia ana hama'a.
೧೩ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.
14 Ikhwu a he rji ni nton u Adamu ye ri ni nton Musa, nda he nitu bi wa bana lahtre bibi u Adamu'a na, ahi kpe wa a kati u seka se'a.
೧೪ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ.
15 Kyauta na he na lahtre na, a nita he nitu lahtre ndji riri yi'a, ndji gbugbu ba khwu, naki mame, ito tie ma nitu ndji riri ngama Yesu Almasihu, he nitu ndji gbugbuu.
೧೫ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.
16 Innoa na he na lahtre ndji riri na. Itron'a hu lahtre ndji riri, nda nji hukunci, inno hu lahtre gbugbuu nda nji kpa chuwo ye.
೧೬ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.
17 A nita he nitu lahtre ndji riri ikhwu ri, naki ma me bi wa ba kpa to tie gbugbuu ni nno vrhi ndindi ni mi wawu riri, Yesu Kristi.
೧೭ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
18 Nawa lahtre ndji riri nji hukunci ye nitu ndji wawuu, na kimame itie ndindi ndji riri nji wruhle ni vrhi ye ni ndji gbugbuu.
೧೮ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.
19 Na kima me, wa nitu lahtre ndji riri a ndu ndji gbugbuu kati be lahtre'a, na kima me nitu ndji riri ndji gbugbuu ba fe kpa chuwo.
೧೯ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.
20 Wa sharia ye'a, a ndu lahtre babran, ni wa lahtre babran, liheri he gbugbuu ngame.
೨೦ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
21 A tie nayi'a, nawa lahtre a mreh (mallaka) hi ni khwu, na kima me, i tie ndindi mreh suron ni vrhi nitu Yesu Almasihu Bachi mbu. (aiōnios )
೨೧ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. (aiōnios )