< Romawa 9 >
1 Mi hla njanji ni Kristi, mina si tie chena, imre mu si tsro me ni mi Brji Tsratsra,
೧ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.
2 ndi mi he ni kpon yi ni low sron u kakle ni sronmu.
೨ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.
3 Ba ndi na tre ndi ba tie nyu nimu nda cume ni kan ni Yesu ni tu mri vayi mu, ni ba mla mu u kpa.
೩ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.
4 Ahi baba yi ba Israilawa, ba fe kpanyme, ni gbire san, ni yo nyun mbe dede, ni toh turon, da gbire Irji san ni tara kuma, ni yo nyu ma.
೪ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.
5 Mba tiba mba ndi nimi Almasihu u no niko u kpa wawu wa a hi Irji u koge, du mba gbirasa u saika sai sai du he naki. (aiōn )
೫ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. (aiōn )
6 U ana nitu itere Irji wa a joku na, ana hi kohan ni Israilawa a hi Israilawa u njanji na.
೬ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.
7 Nakima ana duka grji Ibrahim mba hi iriri Ibrahim na. “Mba yo mba be grji Ishaku.”
೭ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.
8 Mba ki mba he imiri be kpa mba na imiri be he imiri be Irji na. Mba imiri be yo nyu wa mba bla ba suru ni grji ba.
೮ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.
9 U wayi hi itere u yo nyu a “nzizayi me ye de ye no Saraya ivire.
೯“ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ.
10 Ana he iwayi me ngana, niwaa Rifkatu a ban nne ni lonma itimbu Ishaku.
೧೦ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.
11 Ba rihe ngrji myri ba u mbana ti kpi dede ma ko meme ma na. Ni tu naki Irji a chu ana bi ni kpi wa mba ti ana amma nitu idi wa a yo.
೧೧ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.
12 U mba hla ni wa “Nikon ani kwba ti gra ni tsitsama.” A na kima mba tere.
೧೨
13 Naki mba han zi “Me son Yakubu de kamu ni Isuwa.”
೧೩ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದದೆ.
14 U khi tere de naki? Irji na ti bina naki? Ah ah.
೧೪ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.
15 U a hla ni Musa me lo sonro niwa mi losonro, mi losonron ni wa nimi no si sonro ni wa ani si sonron a.
೧೫“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.
16 Ni tu na ki ana he ni tu idi wa a yo sonron. Ko kuma ni idi wa ani ri shishi, na a he ni nitu Irji wa ani losonro ni ta.
೧೬ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.
17 U lan tre Baci'a hla ni Firauna, “Ani tu wayi yi me nzuu lunde ni ndu me tsoro ngbengblen mu ni mi me ni ndu b d'bu nde mu ni ngbungblu'a wawuu.”
೧೭ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.
18 Naki, Irji ni tsro low sron ni wa a son'a nda tie wa a son sen tu.
೧೮ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.
19 Khita mla ya u khi tere ade ni tuge ani son toh joku? Ahi ihan yi ni ya kukri ni gbegble u tuma.
೧೯“ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.
20 Khi ta ya i u idi u hi han wa u san yun ni Irji? Ko idi u me a ani ya miye idi u me de ge sa a me wawu naki?
೨೦ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?
21 U idi u me iri ana he ni gbegbegle ni tu itama iri wa ani meri iri u dedema iriri a hi u daraja, iriri a hi u tidu mege?
೨೧ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
22 U ida Irji ani so tsoro ifu ma ni gbegble mba toh, ssai a vu sonron gbugbuu ni mba iri u fu wa mlati is gbi sutu mba.
೨೨ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
23 E ati naki da tsoro gbira san ma gbugbu wa a he nimi dede u ma, wa a mla ti du mba gbirasan?
೨೩ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
24 Amma tie wa ni tu mbuyi ita wa aye ta'a, ana Yahudawa ni nklen mba megyen na u ni bi kohra ngame.
೨೪ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.
25 Towa a tre ni mi nvunvu u Yunusa a, “Ani yo ndji wa bana bimu na ndi ndji mu, ni biwa ana son ba naa, biwa mi son ba.”
೨೫ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.
26 Ani he naki wa mba na tre “ndi ba hi indi mana, u mba yo mba imiri Irji be sisairi.”
೨೬ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ.
27 Ishaya a yi kpokpo djur rah nitu Israila. “Mba ta ni tere a de imiri Israila mba bra na kpabru u kosan ba u mbari mba ba nawo.
೨೭ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.
28 U Irji a toh a de wawu a ni kle nyun ma ni gbugbugblu pyipyi me bani wuton mba.
೨೮ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ,
29 Na wa Ishaya a han ni sei u Irji a de na ka grji do ni ta wu na khi de na he na Sadumawa u khi dena kwma ti na Gomarata.
೨೯“ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.
30 U ziza khi tere a de ge? U be kora, be wa bana son tsa-tsara na mba kpa dede ni dedema u kpa kyem.
೩೦ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.
31 U Israila be wa mba na wa ituron u tsa-tsara na u mba na he ni mi turon na.
೩೧ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.
32 Nitu ge? ni tu mba na wa ni njanji na. u a he nitu idu na. Mba za ni tu tita wa ni du yi za ni kbu za.
೩೨ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,
33 Towa ba nhaa, “To Mi ka tita u kbu za sizi ni mi Sihiyona mba ni haan u latre. U wa a kpanyme ni wu'a ana tie shan na.
೩೩ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.