< Titus 2 >

1 I wu u ka hla njaaji ilan.
ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.
2 Gbi bi ciche lila du mba hi he vutu bey vu sunro be toh jaji ni mi kpakyeme ni itere u Irji.
ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.
3 Na ki imba be niko be ka vutu bi bana be tere totona du bana so ima u tehuwa na.
ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.
4 Du ba tsoro imba be tsitsama itere sunko wa balilo.
ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ
5 Du mba hi be mlaya mba komba bata tee naki itere Irji a ni bi kerekereme.
ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.
6 Na ki u ka hla imirize du mba hey be sisuron.
ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.
7 Ko ni konrime u ka zeren dedeme.
ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;
8 Hla tere be dedema. bewa bana toh itere Irji na Ishan ka temba.
ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.
9 I miri ko mba wo tere ni tei komba ni mi kogeh mba na sunyu ni mbana.
ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,
10 Du ba na tee yibi na. Mba ka ji kpakyeme U Irji gbahgbah me.
೧೦ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.
11 U imiri Irji ba toh didima wawumba.
೧೧ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;
12 Ani hla du keh ka memetee u gbu gblu tagah. (aiōn g165)
೧೨ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು, (aiōn g165)
13 Keh ta zere di ta gbey tee lulu ni ze sunro u ye ivere Irji tee bu.
೧೩ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
14 Yesu a kpa hla tere u bu ni gbu gblu da ikheu ubu wawu. na ki khi ka hu hla terema.
೧೪ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
15 U ka tere ni gbe gble de tshoro ba jaji ndah na kpa u tsirina.
೧೫ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.

< Titus 2 >