< Амос 7 >
1 Това е, което Госпо Иеова ми показа: - Ето, той образува скакалци, когато отавата почна да никне; и, ето, беше отавата подир царевата коситба.
೧ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು.
2 И когато скакалците изядоха тревата на земята, тогава рекох: - Господи Иеова, бъди милостив, моля ти се! Как да се издигне Яков? защото е малък.
೨ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.
3 Господ се разкая за това: Няма да бъде, казва Господ.
೩ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.
4 Това е, което Господ Иеова ми показа: - Ето Господ Иеова вика на съд чрез огън; и огънят изпояде голямата бездна, и щеше да изпояде и Израилевият дял.
೪ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.
5 Тогава рекох: - Господи Иеова, престани, моля ти се! Как да се издигне Яков? защото е малък.
೫ಆಗ ನಾನು, “ಕರ್ತನಾದ ಯೆಹೋವನೇ, ಲಾಲಿಸು. ಇದನ್ನು ನಿಲ್ಲಿಸಿಬಿಡು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗವಾಗಿದೆ” ಎಂದು ಆಜ್ಞಾಪಿಸಲು
6 Господ се разкая за това: И това няма да бъде, казва Господ Иеова.
೬ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.
7 Това е, което ми показа: - Ето, Господ стоеше при стена съградена с отвес, като държеше отвес в ръката си.
೭ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.
8 И Господ ми рече: Що виждаш, Амосе? И рекох - Отвес. Тогава рече Господ: Ето, аз ще туря отвес всред людете си Израиля; Занапред няма вече да ги щадя.
೮ಯೆಹೋವನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು ನಾನು, “ಒಂದು ನೂಲುಗುಂಡು” ಎಂದು ಉತ್ತರ ಕೊಟ್ಟೆನು. ಆಗ ಕರ್ತನು, “ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಅವರನ್ನು ಕಂಡುಕಾಣದಂತೆ ದಂಡಿಸುವೆನು.
9 Високите Исаакови места ще запустеят, И Израилевите светилища ще се съсипят; И аз ще стана с меч против Израилевия дом.
೯ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಪಾಳುಬೀಳುವವು, ಮತ್ತು ನಾನು ಕತ್ತಿ ಹಿಡಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು” ಅಂದನು.
10 Тогава свещеникът на Ветил Амасия прати до Израилевия цар Иеровоама да кажат: Амос направи заговор против тебе всред Израилевия дом; земята не може да търпи многото му думи.
೧೦ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.
11 Защото Амос така казва: Иеровоам ще умре от меч, А Израил непременно ще бъде закаран пленник от земята си.
೧೧ಅದಕ್ಕೆ ಆಮೋಸನು, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಾಯೇಲರು ಖಂಡಿತವಾಗಿ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರು” ಎಂದು ಹೇಳಿಕಳುಹಿಸಿದನು.
12 При това, Амасия, рече на Амоса: О, ти гледачо, иди, бягай в Юдовата земя, там яж хляб, и там пророкувай;
೧೨ಅನಂತರ ಅಮಚ್ಯನು ಆಮೋಸನಿಗೆ, “ಕಣಿ ಹೇಳುವವನೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿಯೇ ರೊಟ್ಟಿತಿಂದು ಪ್ರವಾದಿಸು.
13 а във Ветил вече да не пророкуваш пак, защото е царево светилище, и е царски дворец.
೧೩ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ” ಎಂದು ಹೇಳಿದನು.
14 Тогава Амос рече в отговор на Амасия: Не бях аз пророк, нито син на пророк, но бях говедар, и берях черници;
೧೪ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
15 а Господ ме взе отподир стадото, и Господ ми рече: Иди пророкувай на людете ми Израиля,
೧೫ಯೆಹೋವನು ನನ್ನನ್ನು ಮಂದೆ ಕಾಯುವವರಿಂದ ತಪ್ಪಿಸಿ, ‘ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದನೆ ಮಾಡು’ ಎಂದು ನನಗೆ ಅಪ್ಪಣೆ ಕೊಟ್ಟನು.
16 Сега прочее слушай Господнето слово: Ти казваш - Не пророкувай против Израиля, и да не капне от тебе дума против Исааковия дом.
೧೬“ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,
17 За това, така казва Господ: - Жена ти ще бъде блудница в града, Синовете ти и дъщерите ти ще паднат от меч, И земята ти ще се раздели с въже; А сам ти ще умреш в нечиста земя, И Израил непременно ще бъде закаран пленник от земята си.
೧೭‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು.