< Евреи 9 >

1 А даже при първия завет имаше постановления за богослужение, имаше и земно светилище.
ಮೊದಲನೆಯ ಒಡಂಬಡಿಕೆಯಲ್ಲಿ ದೈವಿಕ ಆರಾಧನೆಯ ಕ್ರಮಗಳಿದ್ದವು. ಮಾತ್ರವಲ್ಲದೆ ಮಾನವ ನಿರ್ಮಿತ ಪವಿತ್ರ ಸ್ಥಳವೂ ಇತ್ತು.
2 Защото беше приготвена скиния, в първата част на която бяха светилникът, трапезата и присъствените хлябове; която част се казва светото място;
ಅದರೊಳಗೆ ಒಂದು ಗುಡಾರವು ಕಟ್ಟಲಾಗಿತ್ತು. ಅದರ ಪ್ರಥಮ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು. ಅದು ಪವಿತ್ರ ಸ್ಥಳ ಎಂದು ಕರೆಯಲಾಗಿತ್ತು.
3 а зад втората завеса беше оная част от скинията, която се казваше пресветото място,
ಎರಡನೆಯ ತೆರೆಯ ಆಚೆ ಅತಿ ಪವಿತ್ರ ಸ್ಥಳ ಎಂದು ಕರೆಯಲಾದ ಗುಡಾರವಿತ್ತು.
4 гдето бяха златната кандилница и ковчегът на завета, отвсякъде обкован със злато, в който бяха златната стомна, съдържаща манната, Аароновият жезъл, който процъфтя, и плочите на завета;
ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.
5 и над него бяха херувимите на Божията слава, които осеняваха умилистивилището; за които не е сега време да говорим подробно.
ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು.
6 И когато тия неща бяха така приготвени, в първата част на скинията свещениците влизаха постоянно да извършват богослужението;
ಇವುಗಳು ಹೀಗೆ ಸಿದ್ಧವಾದ ಬಳಿಕ ಯಾಜಕರು ಯಾವಾಗಲೂ ಹೊರಗಿನ ಗುಡಾರವನ್ನು ಪ್ರವೇಶಿಸಿ ದೈವಿಕ ಆರಾಧನೆಯನ್ನು ನಡೆಸುತ್ತಿದ್ದರು.
7 А във втората еднаж в годината влизаше само първосвещеникът, и то не без кръв, която принасяше за себе си и за греховете на людете, сторени от незнание.
ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.
8 С това Светият Дух показваше, че пътят за в светилището не е бил открит, докато е стояла още първата част на скинията,
ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ
9 която е образ на сегашното време, съгласно с което се принасят дарове и жертви, които не могат да направят поклонника, колкото за съвестта му, съвършено чист,
ಈ ಗುಡಾರವು ಈ ಕಾಲವನ್ನು ಸೂಚಿಸುವ ಒಂದು ಮಾದರಿಯಾಗಿದೆ. ಆಗ ಆರಾಧಿಸುವವರ ಮನಸ್ಸಾಕ್ಷಿಯನ್ನು ಪರಿಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲಾಗುತ್ತಿದ್ದವು.
10 понеже се състоят само в ядене, пиене и разни омивания,
ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.
11 А понеже Христос дойде като първосвещеник на бъдещите добрини, Той влезе през по-голямата и по-съвършена скиния, не с ръка направена, сиреч, не от настоящето творение,
ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.
12 еднаж завинаги в светилището, и то не с кръв от козли и от телци, но със Собствената Си кръв, и придоби за нас вечно изкупление. (aiōnios g166)
ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು. (aiōnios g166)
13 Защото, ако кръвта от козли и от юнци и пепелта от юница, с които се поръсваха осквернените, освещава за очистването на тялото,
ಹೋತ ಹೋರಿಗಳ ರಕ್ತವನ್ನೂ ಅಶುದ್ಧರಾದವರ ಮೇಲೆ ಚಿಮುಕಿಸಲಾಯಿತು. ಯಜ್ಞಪಶುಗಳ ಬೂದಿಯನ್ನೂ ಅವರ ಮೇಲೆ ತೂರಲಾಯಿತು. ಇದು ಅವರ ದೇಹವನ್ನು ಶುದ್ಧೀಕರಿಸಿತು.
14 то колко повече кръвта на Христа, Който чрез вечния Дух принесе Себе Си без недостатък на Бога, ще очисти съвестта ви от мъртвите дела, за да служите на живия Бог! (aiōnios g166)
ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ? (aiōnios g166)
15 Той е посредник на нов завет по тая причина, щото призваните да получават обещаното вечно наследство чрез смъртта, станала за изкупване престъпленията, извършени при първия завет. (aiōnios g166)
ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ. (aiōnios g166)
16 Защото гдето има завещание, трябва, за изпълнението му, да се докаже и смъртта на завещателя.
ಮರಣ ಶಾಸನವು ಎಲ್ಲಿದೆಯೋ ಅಲ್ಲಿ ಅದನ್ನು ಮಾಡಿಕೊಂಡಾತನ ಮರಣ ಅವಶ್ಯ ಎಂಬುದನ್ನು ರುಜುಪಡಿಸಬೇಕು.
17 Защото завещанието влиза в сила, само гдето се е случила смърт, понеже никога няма сила, докле е жив завещателя.
ಮರಣ ಶಾಸನವು ಬರೆದವನು ಜೀವದಿಂದಿರುವವರೆಗೂ ಅದು ಎಂದಿಗೂ ಜಾರಿಗೆ ಬರುವುದಿಲ್ಲ.
18 Затова нито първият завет бе утвърден без кръв;
ಆದ್ದರಿಂದ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಪ್ರತಿಷ್ಠಾಪನೆ ಆಗಲಿಲ್ಲ.
19 Защото, след като Моисей изговори всяка заповед от закона пред всичките люде, взе кръвта на телците и на козлите, с вода и с червена вълна и исоп, та поръси и самата книга и всичките люде, и казваше:
ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು.
20 "Това е кръвта, проляна при завета, който Бог е заръчал спрямо вас".
ಹಾಗೆ ಚಿಮುಕಿಸುವಾಗ ಮೋಶೆಯು, “ಇದು ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯ ರಕ್ತ,” ಎಂದು ಹೇಳಿದನು.
21 При това, Той по същия начин поръси с кръвта и скинията и всичките служебни съдове.
ಅದೇ ರೀತಿಯಾಗಿ ಮೋಶೆಯು ಗುಡಾರದ ಮೇಲೆಯೂ ಸೇವೆಯ ಎಲ್ಲಾ ಉಪ ಪಾತ್ರೆಗಳ ಮೇಲೆಯೂ ರಕ್ತವನ್ನು ಚಿಮುಕಿಸಿದನು.
22 И почти мога да кажа, че по закона всичко с кръв се очистя; и без проливането на кръв няма прощение.
ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.
23 И тъй, необходимо беше образите на небесните неща да се очистват с тия жертви, а самите небесни
ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತೆ ಇರುವ ವಸ್ತುಗಳನ್ನು ಈ ಯಜ್ಞಗಳಿಂದ ಶುದ್ಧಿಮಾಡುವುದು ಅವಶ್ಯವಾಗಿದೆ. ಹಾಗಾದರೆ ಪರಲೋಕದ ನಿಜ ವಸ್ತುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯಕವಾಗಿವೆ.
24 Защото Христос влезе не в ръкотворено светилище, образ на истинското, но в самите небеса, да се яви вече пред Божието лице за нас;
ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.
25 и не за да принася Себе Си много пъти, както първосвещеникът влиза в светилището всяка година с чужда кръв,
ಇದಲ್ಲದೆ ಮಹಾಯಾಜಕನು ಪ್ರತಿವರ್ಷವೂ ತನ್ನ ಸ್ವಂತದ್ದಾಗಿರದ ರಕ್ತವನ್ನು ತೆಗದುಕೊಂಡು ಅತಿ ಪವಿತ್ರ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಯೇಸು ತಮ್ಮನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಪ್ರವೇಶಿಸಲಿಲ್ಲ.
26 (иначе Той трябва да е страдал много пъти от създанието на света); а на дело в края на вековете се яви еднаж да отмахне греха, като принесе Себе Си в жертва. (aiōn g165)
ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು. (aiōn g165)
27 И тъй като е определено на човеците еднаж да умрат, а след това настава съд,
ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.
28 така и Христос, като биде принесен еднаж, за да понесе греховете на мнозина, ще се яви втори път, без да има работа с грях, за спасението на ония, които Го очакват.
ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.

< Евреи 9 >