< Исая 19 >

1 Наложеното за Египет пророчество: - Ето, Господ язди на лек облак И ще дойде в Египет; Египетските идоли ще потреперят от пристигането Му, И сърцето на Египет ще се разтопи всред самия него.
ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.
2 И Аз ще подигна египтяни против египтяни; Всеки ще се бие против брата си И всеки против ближния си, - Град против град, царство против царство.
“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.
3 И духът на Египет ще изчезне вътре в него; И ще осуетя намеренията му; И ще се допитат до идолите и чародеите До запитвачите на зли духове и врачовете
ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.
4 И ще затворя египтяните в ръката на жесток господар И свиреп цар ще ги владее, Казва Господ Иеова на Силите.
ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.
5 И водите ще изчезнат из морето, Нил ще пресекне и ще пресъхне;
ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.
6 Реките ще смърдят, И египетските канали ще спаднат и ще изсъхнат, И рогозът и тръстиката ще повехнат,
ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.
7 Ливадите при Нил, по бреговете на Нил, И всичко посято при Нил, Ще изсъхне, ще се разпилее, и ще се изгуби.
ನೈಲ್ ನದಿಯ ತೀರ, ನೈಲ್ ನದಿಯ ತೀರದಲ್ಲಿ ಇರುವ ಬಯಲುಗಳು, ನೈಲ್ ನದಿಯ ತೀರದಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ, ಗಾಳಿಗೆ ಸಿಕ್ಕಿ ಮಾಯವಾಗುವವು.
8 Рибарите тоже ще охкат, Всички, които хвърлят въдица в Нил, ще ридаят. И ония, които мятат мрежи във водата, ще жалеят.
ಬೆಸ್ತರು ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.
9 Също и ония, които работят тънък лен, И които тъкат висон, ще се посрамят.
ನಯವಾದ ಸೆಣಬಿನ ಕೆಲಸದವರೂ, ಬಿಳಿ ಬಟ್ಟೆಯನ್ನು ನೇಯುವವರೂ ಹತಾಶರಾಗುವರು.
10 И всичките негови стълбове ще се строшат, И всички надничари ще се оскърбят духом.
೧೦ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು.
11 Първенците на Танис са крайно безумни; Съветът на мъдрите Фараонови съветници стана животински; Как, прочее, казвате всеки на Фараона: Аз съм син на мъдри, син на древни царе?
೧೧ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
12 Тогава, где са твоите мъдреци? Нека ти открият сега, и нека дадат да се разбира Какво е решил Господ на Силите за Египет!
೧೨ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.
13 Първенците на Танис избезумяха, Първенците на Мемфис се заблудиха. И ония, които са подпорка на племената му, измамиха Египет.
೧೩ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.
14 Господ смеси всред него дух на извращение; И те заблудиха Египет във всичките му дела, Както пиян полита в бълването си,
೧೪ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.
15 И не ще има дело, което главата или опашката, Палмовият клон, или тръстиката, да може да извърши.
೧೫ಐಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ.
16 В оня ден Египет ще бъде като жени, И ще трепери и ще се бои От замахването на ръката на Господа на Силите, С която Той замаха върху него.
೧೬ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.
17 И Юдовата земя ще стане ужас за Египет: Всеки, който си припомнюва за нея, ще се ужасява Поради решението на Господа на Силите, Което взе против него.
೧೭ಐಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.
18 В оня ден ще има пет града в Египетската земя, Които ще говорят ханаански език И ще се кълнат в Господа на Силите; Единият ще се нарича град Херес
೧೮ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”
19 В оня ден ще има олтар на Господа Всред Египетската земя, И стълб на Господа при границата й.
೧೯ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.
20 И той ще бъде за знамение и свидетелство На Господа на Силите в Египетската земя; Защото ще извикат към Господа Поради притеснителите, И Той ще им изпрати спасител и поборник, Който ще ги избави.
೨೦ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
21 И Господ ще стане познат на Египет; И египтяните ще познаят Господа в оня ден; Да! ще се покланят принасят жертви и принос, И ще направят обрек Господу, който ще изпълнят.
೨೧ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.
22 И Господ ще удари Египет, А като удари ще изцели; Защото те ще се обърнат към Господа, И Той ще бъде молен от тях и ще ги изцели.
೨೨ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.
23 В оня ден ще има друм От Египет за Асирия; И асирийците ще дойдат в Египет, И египтяните в Асирия, И египтяните с асирийците ще служат Господу.
೨೩ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.
24 В оня ден Израил ще бъде С Египет и с Асирия; Трето благословение всред земята:
೨೪ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.
25 Защото Господ на Силите ще ги благослови, като ще рече: Благословен да бъде Египет, Мои люде, И Асирия, делото на ръцете Ми, И Израил, наследството Ми.
೨೫“ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.

< Исая 19 >