< Левит 11 >
1 И Господ говори на Моисея и Аарона, като им каза:
ಯೆಹೋವ ದೇವರು ಮೋಶೆ ಆರೋನರಿಗೆ ಹೀಗೆ ಹೇಳಿದರು,
2 Говорете на израилтяните, казвайки: Ето животните, които можете да ядете измежду всичките животни, които са по земята.
“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು: ‘ಭೂಮಿಯ ಮೇಲೆ ಇರುವ ಎಲ್ಲಾ ನೀವು ತಿನ್ನತಕ್ಕ ಪ್ರಾಣಿಗಳು ಯಾವವಂದರೆ:
3 Измежду животните всяко що има раздвоени копита и е с разцепени копита, и преживя, него да ядете.
ಪ್ರಾಣಿಗಳಲ್ಲಿ ಕಾಲ್ಗೊರಸು ಸೀಳಿದ ಮತ್ತು ಮೇವನ್ನು ಮೆಲುಕಾಡಿಸುವುದನ್ನೂ ನೀವು ತಿನ್ನಬಹುದು.
4 Обаче от ония, които преживят, или от ония, които имат раздвоени копита, да не ядете следните: камилата, защото преживя, но няма раздвоени копита; тя е нечиста за вас;
“‘ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವುದಾದರೂ ಅದಕ್ಕೆ ಸೀಳುಗೊರಸು ಇಲ್ಲ. ಅದು ನಿಮಗೆ ಅಶುದ್ಧ.
5 питомния заек, защото преживя, но няма раздвоени копита; той е нечист за вас;
ಬೆಟ್ಟದ ಕುಣಿ ಮೊಲವು ಮೇವನ್ನು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.
6 дивия заек, защото преживя, но няма раздвоени копита; той е нечист за вас;
ಮೊಲವು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.
7 и свинята, защото има раздвоени копита, и е с разцепени копита, но не преживя; тя е нечиста за вас;
ಹಂದಿಯ ಗೊರಸು ಸೀಳಿದ್ದರೂ ಅದು ಮೇವನ್ನು ಮೆಲುಕು ಹಾಕುವುದಿಲ್ಲ, ಅದು ನಿಮಗೆ ಅಶುದ್ಧವಾಗಿರುವುದು.
8 От тяхното месо да не ядете, и до мършата им да не се допирате; те са нечисти за вас.
ಅವುಗಳ ಮಾಂಸವನ್ನು ನೀವು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು. ಅವು ನಿಮಗೆ ಅಶುದ್ಧವಾಗಿವೆ.
9 Измежду всичките, които са във водите, да ядете следните: всички във водите, които имат перки и люспи, в моретата и в реките, тях да ядете.
“‘ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ಸಮುದ್ರದಲ್ಲಿ ಮತ್ತು ನದಿಯಲ್ಲಿ ಇರುವ ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು.
10 А измежду всичко, което се движи във водите, и измежду всяко одушевено животно, което е във водите, всички в моретата и в реките, които нямат перки и люспи, те са отвратителни за вас.
ಸಮುದ್ರಗಳಲ್ಲಿಯೂ, ನದಿಗಳಲ್ಲಿಯೂ ನೀರೊಳಗೆ ಚಲಿಸುವ ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜುರೆಕ್ಕೆ ಮತ್ತು ಪೊರೆಯಿಲ್ಲದವುಗಳು ನಿಮಗೆ ನಿಷಿದ್ಧವಾಗಿವೆ.
11 Непременно да бъдат отвратителни за вас; от месото им да не ядете, и от мършата им да се отвращавате.
ಅವು ನಿಮಗೆ ಅಶುದ್ಧವಾಗಿಯೇ ಇರುವವು. ನೀವು ಅವುಗಳ ಮಾಂಸವನ್ನು ತಿನ್ನಬಾರದು ಮತ್ತು ಅವುಗಳ ಶವಗಳು ನಿಮಗೆ ಹೇಯವಾಗಿರಬೇಕು.
12 Всичко във водите, което няма ни перки, ни люспи, да бъде отвратително за вас.
ನೀರಲ್ಲಿ ಯಾವುದಕ್ಕೆ ಈಜುರೆಕ್ಕೆ ಮತ್ತು ಪೊರೆಗಳಿಲ್ಲವೋ ಅವು ನಿಮಗೆ ಹೇಯವಾಗಿರಬೇಕು.
13 Измежду птиците да се отвращавате от следните; да се не ядат, понеже са отвратителни: орелът, грифата, морският орел,
“‘ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವಾಗಿವೆ. ಇವುಗಳು ನಿಮಗೆ ಅಸಹ್ಯಕರವಾದ ಮತ್ತು ತಿನ್ನಲು ನಿಷೇಧಿಸಲಾದ ಪಕ್ಷಿಗಳು ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ರಣಹದ್ದು, ಕಪ್ಪು ರಣಹದ್ದು.
14 пилякът, соколът по видовете му,
ಕ್ರೌಂಚ, ಅದರ ಜಾತಿಯ ಹದ್ದು,
15 всяка врана по видовете й,
ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,
16 камилоптицата, бухалът, кукувицата, ястребът по видовете му
ಉಷ್ಟ್ರಪಕ್ಷಿ, ಚೀರು ಗೂಬೆ, ಕಡಲ ಹಕ್ಕಿ ಮತ್ತು ಅದರ ಪ್ರತಿಯೊಂದು ಜಾತಿಯ ಗಿಡುಗ.
17 малкият бухал, рибарят, ибисът
ಸಣ್ಣ ಗೂಬೆ, ನೀರುಕಾಗೆ, ದೊಡ್ಡ ಗೂಬೆ,
18 лебедът, пеликанът, лешоядът,
ಬಿಳಿಗೂಬೆ, ಮರಳುಗಾಡು ಗೂಬೆ, ರಣಹದ್ದು,
19 щъркът, цаплята по видовете й, папунякът и прилепът.
ನೀರು ಕೋಳಿ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ.
20 Всички крилати пълзящи, които ходят на четири нозе, да бъдат отвратителни за вас.
“‘ನಾಲ್ಕು ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳು ನಿಮಗೆ ಹೇಯವಾಗಿರಬೇಕು.
21 Обаче измежду всичките пълзящи крилати, можете да ядете ония, които като ходят на четири нозе, имат пищяли над нозете си за да скачат с тях по земята.
ಆದರೂ ಹಾರಾಡುವ, ಹರಿದಾಡುವ ನಾಲ್ಕು ಕಾಲುಗಳ ಮೇಲೆ ಹೋಗುವ, ತಮ್ಮ ಪಾದಗಳ ಮೇಲೆ ಕಾಲುಗಳಿದ್ದು, ಭೂಮಿಯ ಮೇಲೆ ದುಮುಕುವವುಗಳನ್ನೂ ನೀವು ತಿನ್ನಬಹುದು.
22 Измежду тях можете да ядете следните: скакалеца по видовете му, солама по видовете му, харгола по видовете му, и акридата по видовете й.
ಮಿಡತೆಗಳನ್ನು ಜುಟ್ಟೆ ಮಿಡತೆಗಳನ್ನು ಅವುಗಳ ಜಾತಿಗನುಸಾರವಾಗಿ ತಿನ್ನಬಹುದು.
23 А всички други крилати пълзящи, които имат четири нозе, да бъдат отвратителни за вас.
ಆದರೆ ನಾಲ್ಕು ಪಾದವಿರುವ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳು ನಿಮಗೆ ಹೇಯವಾಗಿರಬೇಕು.
24 От тях ще бъдат нечисти: всеки, който се допира до мършата им, ще бъде нечист до вечерта;
“‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.
25 и всеки, който понесе нещо от мършата им, да изпере дрехите си, и да бъде нечист до вечерта.
ಯಾರಾದರೂ ಅವುಗಳ ಶವವನ್ನು ಹೊತ್ತರೂ, ಅವರು ಬಟ್ಟೆಗಳನ್ನು ಒಗೆದುಕೊಂಡು ಸಂಜೆಯವರೆಗೂ ಅಶುದ್ಧರಾಗಿರುವರು.
26 Всяко животно що има раздвоени копита, но не е с разцепени копита нито преживя, е нечисто за вас; всеки, който се допира до такова, ще бъде нечист.
“‘ಯಾವ ಪ್ರಾಣಿಯ ಗೊರಸು ಸ್ವಲ್ಪ ಸೀಳಿದ್ದರೂ, ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳ ಶವವನ್ನು ಮುಟ್ಟುವವರು ಅಶುದ್ಧರಾಗಿರುವರು.
27 И измежду всичките четвероноги животни, ония, които ходят на лапите си, ще бъдат нечисти за вас; всеки, който се допира до мършата им, ще бъде нечист до вечерта.
ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವುದೆಲ್ಲವೂ ನಿಮಗೆ ಅಶುದ್ಧವಾಗಿರುವುವು. ಯಾರಾದರೂ ಅವುಗಳ ಶವವನ್ನು ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.
28 И който понесе мършата им нека изпере дрехите си, и да бъде нечист до вечерта; те са нечисти за вас.
ಅವುಗಳ ಶವವನ್ನು ಹೊರುವವರು ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೂ ಅಶುದ್ಧರಾಗಿರುವರು. ಈ ಪ್ರಾಣಿಗಳು ನಿಮಗೆ ಅಶುದ್ಧವಾದವುಗಳು.
29 Измежду пълзящите, които пълзят по земята, следните да бъдат нечисти за вас: невестулката, мишката, гущерът по видовете му,
“‘ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಇವು ಸಹ ನಿಮಗೆ ಅಶುದ್ಧವಾಗಿರಬೇಕು: ಮುಂಗುಲಿ, ಇಲಿ, ಸಕಲವಿಧವಾದ ಉಡ,
30 ящерът, ящерицата, саврата, самиамитът, и хамелионът.
ಅರೆ ಪಳಗಿಸಿದ ಪ್ರಾಣಿ, ಹಾವುರಾಣಿ, ಊಸುರುವಳ್ಳಿ, ಹಲ್ಲಿ, ಬಸವನ ಹುಳು ಮತ್ತು ಚಿಟ್ಟಿಲಿ.
31 Тия са, които са нечисти за вас измежду всичките пълзящи; всеки, който се допира до мършата им, ще бъде нечист до вечерта.
ನೆಲದ ಮೇಲೆ ಹರಿದಾಡುವ ಇವು ನಿಮಗೆ ಅಶುದ್ಧ. ಸತ್ತಿರುವಾಗ ಅವುಗಳನ್ನು ಯಾರಾದರೂ ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.
32 И всяко нещо, върху което те биха паднали мъртви, ще бъде нечисто: било дървен съд, дреха, кожа, вретище, или какъв да е съд, който се употребява в работа, всеки трябва да тури във вода, и ще бъде нечист до вечерта; тогава ще бъде чист.
ಅವು ಸತ್ತು ಹೋಗಿ, ಯಾವುದರ ಮೇಲೆ ಬೀಳುವವೋ ಅವೆಲ್ಲಾ ಅಶುದ್ಧವಾಗಿರುವುದು. ಅದು ಮರದ ಪಾತ್ರೆಯೇ ಆಗಿರಲಿ, ಉಡುಪೇ ಆಗಿರಲಿ, ಚೀಲವೇ ಆಗಿರಲಿ, ಕೆಲಸ ಮಾಡುವ ಯಾವ ವಸ್ತುವಾಗಲಿ, ಅದು ಏನೇ ಆಗಿರಲಿ ಸಂಜೆಯವರೆಗೆ ನೀರಲ್ಲಿ ಇಡುವವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.
33 И ако някое от тях падне в някой пръстен съд, то всичко що е вътре в него ще бъде нечисто; а него да строшите
ಪ್ರತಿಯೊಂದು ಮಣ್ಣಿನ ಪಾತ್ರೆಯಲ್ಲಿ ಅವುಗಳಲ್ಲಿ ಯಾವುದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವುದು ಮತ್ತು ನೀವು ಅದನ್ನು ಒಡೆದುಹಾಕಬೇಕು.
34 Всяка храна в него, която се яде, върху която се сипва вода, когато се сготви, ще бъде нечиста; и всяко питие, което се пие, във всеки такъв съд ще бъде нечисто.
ಅದರಲ್ಲಿರುವ ಆಹಾರ ಪದಾರ್ಥವೆಲ್ಲಾ ನೀರಿನಿಂದ ನೆನೆದಿದ್ದರೆ ಅದು ಅಶುದ್ಧವಾಗಿರುವುದು. ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವುದು.
35 Каквото и да било нещо, върху което би паднало нещо от мършата им, ще бъде нечисто; било пещ или огнище, трябва да се строшат; нечисти са и нечисти ще бъдат за вас.
ಅವುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಅದು ಅಶುದ್ಧವಾಗಿರುವುದು. ಅದು ಹರಿವಾಣವಾಗಿದ್ದರೂ, ಮಣ್ಣುಗಳ ಒಲೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಏಕೆಂದರೆ ಅವು ಅಶುದ್ಧವಾಗಿವೆ. ಅವು ನಿಮಗೆ ಅಶುದ್ಧವೇ.
36 Обаче извор или кладенец, гдето има събрана вода, ще си бъде чист; но каквото се допре до мършата на тия животни ще бъде нечисто.
ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ, ಹಳ್ಳವಾಗಲಿ ಶುದ್ಧವಾಗಿರುವುದು. ಅವುಗಳೊಳಗಿಂದ ಹೆಣಗಳನ್ನು ಎತ್ತಿದವರು ಅಶುದ್ಧರಾಗುವರು.
37 Но ако падне нещо от мършата им върху някое семе за сеене, което ще се посее, то си е чисто
ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೂ ಶುದ್ಧವಾಗಿರುವುದು.
38 Обаче, ако са полели семето с вода, и падне нещо от мършата им на него, тогава е нечисто за вас.
ಆದರೆ ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣವು ಬಿದ್ದರೆ, ಅದು ನಿಮಗೆ ಅಶುದ್ಧವಾಗಿರುವುದು.
39 Ако умре някое от животните, които бива да ядете, който се допре до мършата му, ще бъде нечист до вечерта.
“‘ನೀವು ತಿನ್ನುವ ಯಾವುದಾದರೂ ಪ್ರಾಣಿ ಸತ್ತಿದ್ದರೆ, ಅದರ ಶವವನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.
40 И който яде от мършата му трябва да изпере дрехите си, и ще бъде нечист до вечерта; и който понесе мършата му нека изпере дрехите си, и ще бъде нечист до вечерта.
ಯಾರಾದರೂ ಅದರ ಮಾಂಸವನ್ನು ತಿಂದಲ್ಲಿ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅದರ ಶವವನ್ನು ಹೊರುವವರೂ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
41 Всяка гадина, която пълзи по земята, е отвратителна; да ги не ядете.
“‘ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಹೇಯವಾಗಿದೆ. ಅದನ್ನು ತಿನ್ನಬಾರದು.
42 Всичко, което се влачи по корема си, и всичко, което ходи на четири нозе, или всичко, което има много нозе, сиреч, всички гадини, които пълзят по земята, - тях да не ядете, защото са отвратителни.
ಹೊಟ್ಟೆಯಿಂದ ಹರಿದಾಡುವ ಯಾವುದನ್ನೂ, ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವುದನ್ನೂ, ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವುದನ್ನು ನೀವು ತಿನ್ನಬಾರದು. ಏಕೆಂದರೆ ಅವು ಹೇಯವಾಗಿವೆ.
43 Да се не омърсите с никакви пълзящи гадини, нито да се оскверните с тях, та да бъдете нечисти чрез тях.
ಯಾವುದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು, ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಅವುಗಳಿಂದ ಮಲಿನರಾಗಬಾರದು.
44 Защото Аз съм Иеова вашият Бог; осветете се, прочее, и бъдете свети, понеже Аз съм свет; и да се не оскверните с никаква гадина пълзяща по земята.
ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಾನೇ. ನೀವು ನಿಮ್ಮನ್ನು ಪ್ರತಿಷ್ಠಿಸಿಕೊಳ್ಳಿರಿ. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಇದಲ್ಲದೆ ಭೂಮಿಯ ಮೇಲೆ ಹರಿದಾಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.
45 Защото Аз съм Господ, който ви изведох из Египетската земя за да ви бъда Бог; бъдете, прочее, свети, защото Аз съм свет.
ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು.
46 Това е законът за животните, за птиците, за всяко одушевено, което се движи във водите, и за всяко одушевено, което пълзи по земята,
“‘ಪ್ರಾಣಿಗಳು, ಪಕ್ಷಿಗಳು, ನೀರಿನಲ್ಲಿರುವ ಮತ್ತು ನೆಲದ ಮೇಲೆ ತೆವಳುವ ಪ್ರತಿಯೊಂದು ಜೀವಿಗಳಿಗೆ ಕುರಿತಾದ ನಿಯಮವು ಇದೇ.
47 за да правите разлика между чистото и нечистото, и между одушевеното, което бива да се яде, и одушевеното, което не бива да се яде.
ಅಶುದ್ಧ ಮತ್ತು ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನಲರ್ಹವಾದ ಮೃಗ ಮತ್ತು ತಿನ್ನಬಾರದ ಮೃಗಗಳ ನಡುವಿನ ವ್ಯತ್ಯಾಸವನ್ನು ಹೀಗೆ ತಿಳಿದುಕೊಳ್ಳುವಿರಿ.’”