< Псалми 11 >
1 За първия певец. Давидов псалом. На Господа уповавам; Как думате на душата ми: Бягай в гората ваша като птица?
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?
2 Понеже, ето, нечестивите запъват лъка, Приготвят стрелите си на тетивите За да устрелят в тъмно ония, които са с право сърце.
೨ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.
3 Защото основанията се разориха; А праведният що е извършил?
೩ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು?
4 Господ е в светия Си храм, Чиито престол е на небето; Очите му гледат, клепачите Му изпитват човешките чада.
೪ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.
5 Господ изпитва праведния; А душата Му мрази нечестивия и онзи, който обича насилие.
೫ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.
6 Над нечестивите ще направи примки; Огън и сяра и горещ вятър ще бъдат съдържанието на чашата им.
೬ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.
7 Защото праведният Бог обича правдата; Праведният човек ще гледа лицето Му.
೭ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.