< Taga Efeso 5 >
1 Busa sundoga ninyo ang Dios, ingon nga mga anak nga iyang hinigugma,
೧ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.
2 ug magkinabuhi sa gugma sama nga gihigugma kamo ni Cristo ug gihatag niya ang iyang kaugalingon alang kanato ingon nga usa ka humot nga halad ug sakripisyo nga makapahimuot sa Dios.
೨ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
3 Ang lawasnong imoralidad o ang tanang kahugaw o kahakog ayaw gyud ninyo hunahunaa, kay dili angayan sa mga gigahin sa Dios.
೩ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
4 Bisan ang pagkabastos, binuang nga pag-istorya, o yagayaga nga dili angay, kondili magmapasalamaton kamo.
೪ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
5 Kay kamo nakasigurado nga walay lawasnong imoral, dili putli, o hakog nga tawo, nga naghimaya sa diosdiosan, ang makabaton ug pamana sa gingharian ni Cristo ug sa Dios.
೫ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
6 Ayaw kamo pagpalimbong sa mga pulong nga walay pulos. Kay tungod niining mga butanga ang kasuko sa Dios moabot sa mga anak nga dili matinumanon.
೬ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
7 Busa dili kamo makig-uban kanila.
೭ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.
8 Kay kaniadto diha kamo sa kangitngit, apan karon kamo mao ang kahayag sa Ginoo.
೮ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.
9 Busa maglakaw kamo ingon nga mga anak sa kahayag - kay ang bunga sa kahayag tanan maayo, matarong ug kamatuoran,
೯ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
10 — nga nagpakita kung unsay makapahimuot sa Ginoo.
೧೦ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.
11 Dili kamo pag apil-apil sa pagbuhat sa walay pulos nga buluhaton diha sa kangitngit, kondili ipadayag ninyo sila,
೧೧ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.
12 kay ang mga butang nabuhat nila sa tago labihan nga makauulaw kung ihulagway.
೧೨ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.
13 Ang tanan gipadayag sa kahayag,
೧೩ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.
14 kay ang kahayag nagasidlak sa tanan. Busa niini adunay nag-ingon, “Pagmata, kamo nga nakatulog, ug mobangon gikan sa kamatayon, ug si Cristo maghayag kaninyo.”
೧೪ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.
15 Busa ampingi ninyo ang inyong kinabuhi, nga dili sama sa mga dili maalamon kondili sama sa mga maalamon.
೧೫ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.
16 Pahimusli ang panahon kay ang mga adlaw dautan.
೧೬ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.
17 Dili kamo magpakabuang, kondili sabton ninyo kung unsa ang kabubut-on sa Ginoo.
೧೭ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.
18 Ug dili kamo magpakahubog sa bino, kay kini magdala kaninyo sa kalaglagan, apan hinuon mapuno kamo sa Balaang Espiritu,
೧೮ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
19 magsinultihay kamo sa salmo ug mga awit, ug mga alawiton nga espirituhanon, nga mag-awit ug maghimaya nga kinasingkasing ngadto sa Ginoo,
೧೯ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.
20 magpasalamat kanunay sa tanang mga butang sa ngalan sa atong Ginoong Jesu Cristo sa Dios nga Amahan;
೨೦ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
21 magpasakop kamo sa usa'g usa alang sa pagtahod kang Cristo.
೨೧ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
22 Mga asawa kinahanglan magpasakop kamo sa inyong kaugalingong mga bana, sama sa Ginoo.
೨೨ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
23 Kay ang bana mao ang ulo sa asawa sama nga si Cristo usab ang ulo sa Iglesia, ug siya ang Manluluwas sa atong lawas.
೨೩ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.
24 Apan ingon nga ang Iglesia nagpasakop kang Cristo, ingon nga kinahanglan sad ang mga asawa sa ilang mga bana sa tanang butang.
೨೪ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
25 Mga bana, higugmaa ang inyong mga asawa sama kang Cristo nga naghigugma sa Iglesia ug naghatag sa iyang kaugalingon alang kaniya,
೨೫ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
26 aron mahimo niyang balaan siya kay gihinluan kita niya sa paghugas sa tubig pinaagi sa pulong,
೨೬ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
27 aron mapresentar niya sa iyang kaugalingon ang Iglesia nga mahimayaon, nga walay mantsa o kunot o bisan unsa nga sama niini, apan hinuon balaan ug walay sayop.
೨೭ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.
28 Sa sama nga pamaagi, mga bana kinahanglan higugmaa gyud ninyo ang iyong kaugalingong asawa sama sa inyong kaugalingong lawas. Ang naghigugma sa iyang kaugalingong asawa naghigugma sad sa iyang kaugalingon.
೨೮ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
29 Walay bisan kinsa nga magdumot sa iyang kaugalingong lawas, apan iya kining gimatuto ug gihigugma, sama kang Cristo sad nga naghigugma sa Iglesia,
೨೯ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.
30 tungod kay membro kita sa iyang lawas.
೩೦ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.
31 Tungod niini nga hinungdan ang lalaki mobiya sa iyang amahan ug inahan ug siya makig-usa sa iyang asawa; ug ang duha mahimong usa ka unod.
೩೧“ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.
32 Kini dakung kamatuoran nga tinago, apan ako nagsulti bahin kang Cristo ug sa iyang Iglesia.
೩೨ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.
33 Bisan pa niini, ang matag usa kaninyo kinahanglan higugmaon niya ang iyang kaugalingong asawa sama sa iyang kaugalingon, ug ang asawa kinahanglan motahod sa iyang bana.
೩೩ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.