< Ester 4 >
1 Sa dihang nasayran ni Mordecai ang tanan nga nahimo, gigisi niya ang iyang bisti ug nagbisti ug sako ug nagbutang ug mga abo. Miadto siya taliwala sa siyudad, ug mituaw sa makusog ug nagdangoyngoy.
೧ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು.
2 Mitungas siya hangtod lamang didto sa ganghaan sa hari, tungod kay walay bisan usa ang makasulod niini nga nagbisti ug sako.
೨ಗೋಣಿತಟ್ಟು ಕಟ್ಟಿಕೊಂಡವರು ಅರಮನೆಯ ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು. ಆದುದರಿಂದ ಅವನು ಅರಮನೆಯ ಹೆಬ್ಬಾಗಿಲಿನ ಮುಂದೆ ಬಂದನು.
3 Sa matag probinsya, kung asa man dapit naabot ang mando ug kasugoan sa hari, adunay dakong kasubo sa mga Judio, uban ang pagpuasa, panaghilak ug pagbangotan. Daghan kanila ang nagbisti ug sako ug naglingkod sa mga abo.
೩ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.
4 Sa dihang miadto ug gisuginlan si Ester sa iyang mga dalaga ug sa iyang mga sulugoon, nagmasulob-on pag-ayo ang rayna. Nagpadala siya ug mga bisti aron sul-obon ni Mordecai (aron iyang huboon ang iyang bisti nga sako), apan wala niya kini dawata.
೪ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಈ ವಿಚಾರವನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ, “ಗೋಣಿತಟ್ಟನ್ನು ತೆಗೆದುಬಿಟ್ಟು, ಇವುಗಳನ್ನು ಧರಿಸಿಕೋ” ಎಂದು ಹೇಳಿಕಳುಹಿಸಿದಳು. ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.
5 Unya gipatawag ni Ester si Hatak, usa sa mga opisyal sa hari nga gitagana aron sa pag-alagad kaniya. Gisugo niya siya aron sa pag-adto kang Mordecai aron masayran kung unsa ang nahitabo ug kung unsa ang buot ipasabot niini.
೫ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, “ನೀನು ಮೊರ್ದೆಕೈಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ” ಎಂದು ಹೇಳಿಕಳುಹಿಸಿದಳು.
6 Busa miadto si Hatak kang Mordecai didto sa plasa sa siyudad atubangan sa ganghaan sa hari.
೬ಹತಾಕನು ಅರಮನೆಯ ಬಾಗಿಲಿನ ಮುಂದಿರುವ ಪಟ್ಟಣದ ಬಯಲಿಗೆ ಮೊರ್ದೆಕೈಯ ಹತ್ತಿರ ಹೋದನು.
7 Gibalita ni Mordecai kaniya ang tanan nga nahitabo kaniya, ug ang kinatibuk-ang kantidad sa plata nga gisaad ni Haman nga ibutang ngadto sa panudlanan sa hari aron pagapatyon ang mga Judio.
೭ಮೊರ್ದೆಕೈಯು ತನಗೆ ಸಂಭವಿಸಿದ್ದೆಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡುತ್ತೇನೆಂದು ನಿಗದಿಪಡಿಸಿದ ಬೆಳ್ಳಿಯ ಹಣ ಇಷ್ಟೆಂಬುದನ್ನೂ ಅವನಿಗೆ ತಿಳಿಸಿದನು.
8 Gihatagan usab niya siya ug usa ka kopya sa kasugoan nga gimantala sa Susa alang sa kalaglagan sa mga Judio. Gibuhat niya kini aron mapakita ni Hatak ngadto kang Ester, ug kinahanglan nga ihatag niya kaniya ang katungdanan sa pag-adto sa hari aron sa pagpakiluoy alang sa iyang pabor, ug aron sa magpakitabang kaniya alang sa iyang katawhan.
೮ಅದರೊಂದಿಗೆ ತಮ್ಮನ್ನು ಸಂಹರಿಸುವುದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು, “ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ” ಎಂದು ಹೇಳಿಕಳುಹಿಸಿದನು.
9 Busa miadto ug gisuginlan ni Hatak si Ester kung unsa ang gisulti ni Mordecai.
೯ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು.
10 Unya nakigsulti si Ester kang Hatak ug giingnan niya nga mobalik ngadto kang Mordecai.
೧೦ಎಸ್ತೇರಳು ಅವನನ್ನು ಪುನಃ ಮೊರ್ದೆಕೈಯ ಬಳಿಗೆ ಕಳುಹಿಸಿ,
11 Miingon siya, “nasayod ang tanang sulugoon sa hari ug ang katawhan sa mga probinsya sa hari nga si bisan kinsang lalaki o babaye nga moadto sa sulod nga hawanan nga wala gipatawag sa hari, adunay usa lamang ka balaod: nga kinahanglan siyang patyon—gawas lamang sa tawo nga tunolan sa hari sa bulawang setro aron nga mabuhi siya. Wala na ako gipatawag aron sa pag-adto sa hari sulod sa 30 na ka mga adlaw.”
೧೧“ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು.
12 Busa gisugilon ni Hatak ang mga pulong ni Ester ngadto kang Mordecai.
೧೨ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು.
13 Gipadala pagbalik ni Mordecai kini nga mensahe: “Ayaw hunahunaa nga anaa ka sa palasyo sa hari, makalingkawas ka labaw pa sa ubang mga Judio.
೧೩ಅವನು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವುದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ.
14 Kung magpakahilom ka niining taknaa, kahupayan ug kaluwasan ang mopatigbabaw alang sa mga Judio gikan sa laing dapit, apan ikaw ug ang panimalay sa imong amahan mangamatay. Kinsa man ang nasayod kung moabot ka niining harianon nga katungdanan alang sa panahon nga sama niini?”
೧೪ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.
15 Unya gipadala ni Ester kini nga mensahe ngadto kang Mordecai,
೧೫ಆಗ ಎಸ್ತೇರಳು ಮೊರ್ದೆಕೈಗೆ, “ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು;
16 “Lakaw, tigoma ang tanang mga Judio nga nagpuyo sa Susa, ug pagpuasa alang kanako. Ayaw kamo pagkaon ni moinom sulod sa tulo ka adlaw, sa gabii o sa adlaw. Magapuasa usab ako ug ang akong kadalagahan sa samang paagi. Unya moadto ako sa hari, bisan tuod nga supak kini sa balaod, ug kung mamatay ako, mamatay gayod ako.”
೧೬ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.
17 Miadto si Mordecai ug gibuhat ang tanang gisulti ni Ester nga iyang buhaton.
೧೭ಮೊರ್ದೆಕೈ ಹಿಂದಿರುಗಿ ಹೋಗಿ ಎಸ್ತೇರಳು ಹೇಳಿದಂತೆಯೇ ಮಾಡಿದನು.