< Genesis 4 >
1 Ang tawo miila kang Eva nga iyang asawa; ug kini nanamkon ug nag-anak kang Cain, ug miingon: Nakabaton ako ug usa ka lalake tungod sa panabang ni Jehova.
೧ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.
2 Ug unya usab nag-anak siya kang Abel nga iyang igsoon. Ug si Abel magbalantay sa mga carnero; apan si Cain mag-uuma sa yuta.
೨ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.
3 Ug sa nagairog ang panahon, nahitabo nga si Cain nagdala gikan sa mga abut sa yuta usa ka halad kang Jehova.
೩ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.
4 Ug si Abel nagdala usab sa mga panganay sa iyang mga carnero ug sa mga matambok niini ug gitamod ni Jehova si Abel, ug ang iyang halad.
೪ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.
5 Apan kang Cain ug sa iyang hatad wala siyay pagtamod. Ug nangisog si Cain sa hilabihan gayud, ug nangil-ad ang iyang panagway.
೫ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
6 Ug si Jehova miingon kang Cain: Nganong nasuko ikaw, ug nganong nagngil-ad ang imong panagway?
೬ಆಗ ಯೆಹೋವನು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ?
7 Kong maayo ang imong gibuhat, kini dili ba pagadayegon? Ug kong dili ka magbuhat ug maayo, ang sala nagahay-ad sa ganghaan; ug kanimo mamao ang iyang tinguha; apan ikaw magabuot niini.
೭ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
8 Ug namulong si Cain kang Abel nga iyang igsoon. Ug nahitabo, nga sa didto sila sa kapatagan, si Cain mitindog batok kang Abel nga iyang igsoon, ug iyang gipatay siya.
೮ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
9 Ug miingon si Jehova kang Cain, Hain si Abel nga imong igsoon? Ug mitubag siya, Ambut: magbalantay ba ako sa akong igsoon?
೯ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.
10 Ug miingon siya, Unsa ang gibuhat mo? Ang tingog sa dugo sa imong igsoon nagatu-aw kanako gikan sa yuta.
೧೦ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
11 Ug karon tinunglo ikaw sa yuta, nga nagbuka sa iyang baba sa pagdawat sa dugo sa imong igsoon gikan sa imong kamot;
೧೧ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.
12 Sa diha nga magauma ikaw sa yuta, dili na kini magahatag kanimo sa iyang kusog; magalaaglaag ug magadumuloong ikaw sa yuta.
೧೨ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
13 Ug miingon si Cain kang Jehova, Ang akong silot labi nang daku kay sa akong mamaantus.
೧೩ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.
14 Ania karon ginaabug mo ako niining adlawa gikan sa nawong sa yuta, ug ako magatago gikan sa imong atubangan; magalaaglaag ug magadumuloong ako sa yuta ug mahitabo nga bisan kinsa ang makakita kanako, mopatay kanako.
೧೪ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
15 Ug si Jehova miingon kaniya: Sa tungod niana bisan kinsa nga magapatay kang Cain, ang panimalus ipahamtang kaniya sa pito ka pilo. Ug gibutangan ni Jehova ug patik si Cain aron siya dili pagapatyon ni bisan kinsa nga makakita kaniya.
೧೫ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
16 Ug mipahawa si Cain sa atubangan ni Jehova, ug mipuyo sa yuta sa Nod sa silangan sa Eden.
೧೬ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.
17 Ug giila ni Cain ang iyang asawa, ug kini siya nanamkon ug nag-anak kang Enoch; ug nagtukod siya ug usa ka lungsod ug gihinganlan niya ang ngalan sa lungsod nga sunod sa ngalan sa iyang anak nga Enoch.
೧೭ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.
18 Ug kang Enoch natawo si Irad, ug si Irad nanganak kang Mehujael, ug si Mehujael nanganak kang Methusael, ug si Methusael nanganak kang Lamech.
೧೮ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು.
19 Ug mikuha si Lamech alang kaniya duruha ka asawa; ang ngalan sa usa mao si Ada, ug ang ngalan sa usa si Zilla.
೧೯ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು.
20 Ug si Ada nanganak kang Jabal, nga mao ang amahan sa mga nagapuyo sa mga balongbalong, ug may mga hayup.
೨೦ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.
21 Ug ang ngalan sa iyang igsoon mao si Jubal, siya mao ang amahan sa tanan nga mga nagatogtog sa alpa ug sa flauta.
೨೧ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.
22 Ug si Zilla usab nanganak kang Tubal-Cain nga magsasalsal sa tanang galamiton nga tumbaga ug puthaw; ug ang igsoon nga babaye ni Tubal-Cain mao si Naama.
೨೨ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
23 Ug si Lamech miingon sa iyang mga asawa: Ada ug Zilla, patalinghugi ninyo ang akong tingog; kamo nga mga asawa ni Lamech, patalinghugi ninyo ang akong pakigpulong; kay gipatay ko ang usa ka tawo tungod sa pagsamad kanako ug usa ka batan-on tungod sa pagbun-og kanako:
೨೩ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
24 Kong sa pito ka pilo pagapanimalusan si Cain, si Lamech sa pagkamatuod pagapanimalusan ug kapitoan ug pito ka pilo.
೨೪ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು.
25 Ug giila pag-usab ni Adam ang iyang asawa, ug kini nanganak ug usa ka anak nga lalake, ug gitawag niya ang iyang ngalan si Seth; kay ang Dios, miingon siya, naga tudlo kanako ug usa ka kaliwat nga ilis ni Abel, nga gipatay ni Cain.
೨೫ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು.
26 Ug kang Seth usab natawo ang usa ka anak nga lalake; ug gitawag niya ang iyang ngalan si Enos. Unya ang mga tawo nanagsugod sa pagtawag sa ngalan ni Jehova.
೨೬ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.