< Eksodo 17 >

1 Gulu lonse la Aisraeli linachoka ku chipululu cha Sini, ndi kumayenda malo ndi malo monga momwe anawalamulira Yehova. Iwo anamanga misasa yawo ku Refidimu koma kunalibe madzi woti anthu onse ndi kumwa.
ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.
2 Kotero iwo anakangana ndi Mose nati, “Tipatse madzi akumwa.” Mose anayankha kuti, “Chifukwa chiyani mukukangana ndi ine? Chifukwa chiyani mukumuyesa Yehova?”
ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.
3 Koma anthu anali ndi ludzu pamenepo ndipo anangʼungʼudza pamaso pa Mose namufunsa kuti, “Kodi nʼchifukwa chiyani unatitulutsa mʼdziko la Igupto kuti ife, ana athu pamodzi ndi ziweto zathu tife ndi ludzu?”
ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.
4 Ndipo Mose anapemphera kwa Yehova, “Kodi ndichite chiyani ndi anthu awa? Iwo atsala pangʼono kundigenda ndi miyala.”
ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು.
5 Yehova anati kwa Mose, “Pita patsogolo pa anthuwo. Tenga ndodo imene unamenyera nyanja ya Nailo pamodzi ndi akuluakulu ena a Israeli ndi kunyamuka.
ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.
6 Ine ndidzayima patsogolo pako pafupi ndi thanthwe la ku Horebu. Ukamenye thanthwelo, madzi adzatuluka kuti anthu amwe.” Motero Mose anachita zimenezi pamaso pa akuluakulu a Israeli.
ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
7 Ndipo iye anatcha malowo Masa ndi Meriba chifukwa Aisraeli anakangana ndi kuyesa Yehova ponena kuti, “Kodi pakati pathu pali Yehova kapena palibe?”
ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.
8 Amaleki anabwera ku Refidimu kudzamenyana ndi Aisraeli.
ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.
9 Mose anati kwa Yoswa, “Sankha amuna amphamvu ndipo upite ukamenyane ndi Amaleki. Mawa ndidzayima pamwamba pa phiri nditagwira ndodo ya Mulungu.”
ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು.
10 Ndipo Yoswa anachitadi monga Mose anamulamulira. Iye anapita kukamenyana ndi Aamaleki ndipo Mose, Aaroni ndi Huri anapita pamwamba pa phiri.
೧೦ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಏರಿ ಹೋದರು.
11 Mose ankati akakweza manja ake, Aisraeli amapambana, koma akatsitsa manja akewo Amaleki amapambana.
೧೧ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.
12 Manja a Mose atatopa, Aaroni ndi Huri anatenga mwala ndi kuyika pansi ndipo Mose anakhalapo. Aaroni ndi Huri anagwirizitsa manja a Mose wina mbali ina winanso mbali ina. Choncho manja a Mose analimba mpaka kulowa kwa dzuwa.
೧೨ಮೋಶೆಯ ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿಸದೆ ಇದ್ದರು.
13 Kotero Yoswa anagonjetsa asilikali ankhondo a Amaleki ndi lupanga.
೧೩ಯೆಹೋಶುವನು ಅಮಾಲೇಕ್ಯರನ್ನು ಮತ್ತು ಅವರ ಭಟರನ್ನು ಖಡ್ಗದಿಂದ ಸೋಲಿಸಿದನು.
14 Kenaka Yehova anati kwa Mose, “Lemba izi mʼbuku kuti zidzakumbukirike ndipo uwonetsetse kuti Yoswa amve zimenezi, chifukwa Ine ndidzafafaniziratu Amaleki pa dziko lapansi, kotero kuti palibe amene adzawakumbukire.”
೧೪ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.
15 Mose anamanga guwa lansembe ndipo analitcha Yehova Chipambano Changa (Yehova Nisi).
೧೫ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.
16 Ndipo anati, “Kwezani mbendera ya Yehova. Yehova adzachitabe nkhondo ndi mibado yonse ya Aamaleki.”
೧೬ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.

< Eksodo 17 >