< Yeremiya 29 >
1 Yeremiya anatumiza kalata kuchokera ku Yerusalemu kupita kwa akuluakulu amene anali ku ukapolo, ndiponso kwa ansembe, aneneri pamodzi ndi anthu onse amene Nebukadinezara anawatenga ku Yerusalemu kupita nawo ku ukapolo ku Babuloni.
೧ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.
2 Zimenezi zinachitika mfumu Yekoniya, amayi a mfumu, nduna za mfumu ndiponso atsogoleri a ku Yuda ndi a ku Yerusalemu, anthu aluso ndi amisiri atatengedwa ku Yerusalemu kupita ku ukapolo.
೨ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು.
3 Yeremiya anapatsira kalatayo Eleasa mwana wa Safani ndi Gemariya mwana wa Hilikiya, amene Zedekiya mfumu ya Yuda anawatumiza kwa Mfumu Nebukadinezara ku Babuloni. Mʼkalatamo analembamo kuti:
೩ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.
4 Anthu onse amene anatengedwa ukapolo kuchokera ku Yerusalemu kupita ku Babuloni, Yehova akuwawuza kuti,
೪ಅದರಲ್ಲಿ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ,
5 “Mangani nyumba ndipo muzikhalamo. Limani minda ndipo mudye zipatso zake.
೫ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ.
6 Kwatirani ndipo mubereke ana aamuna ndi aakazi. Ana anu aamuna muwasankhire akazi ndipo muwasankhire amuna ana anu aakaziwo, kuti nawonso abale ana aamuna ndi aakazi. Muchulukane kumeneko. Chiwerengero chanu chisachepe.
೬ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.
7 Ndiponso muzifunafuna mtendere ndi ubwino wa mzinda umene ndinakupirikitsirani ku ukapoloko. Muzipempherera mzindawo kwa Yehova, kuti zikuyendereni bwino.”
೭ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.
8 Inde, Yehova Wamphamvuzonse, Mulungu wa Israeli akunena kuti, “Musalole kuti aneneri ndi owombeza amene ali pakati panu akunyengeni. Musamvere maloto awo.
೮ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
9 Iwo akunenera zabodza kwa inu mʼdzina langa ngakhale Ine sindinawatume,” akutero Yehova.
೯ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ” ಎಂದು ಬರೆಯಲ್ಪಟ್ಟಿತು.
10 Yehova akuti, “Zaka 70 za ku Babuloni zikadzatha, ndidzabwera kudzakuchitirani zabwino zonse zimene ndinakulonjezani zija, ndipo ndidzakubwezerani ku malo ano.
೧೦ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.
11 Pakuti Ine ndikudziwa zimene ndinakukonzerani,” akutero Yehova, “ndimalingalira zabwino zokhazokha za inu osati zoyipa, ayi. Ndimalingalira zinthu zokupatsani chiyembekezo chenicheni pa za mʼtsogolo.
೧೧ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
12 Nthawi imeneyo mudzandiyitana, ndi kunditama mopemba ndipo ndidzakumverani.
೧೨ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.
13 Mudzandifunafuna ndipo mudzandipeza. Mukadzandifuna ndi mtima wanu wonse
೧೩ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
14 mudzandipezadi,” akutero Yehova, “ndipo ndidzakubwezerani zabwino zanu. Ndidzakusonkhanitsani kuchokera ku mayiko onse ndi kumalo konse kumene munali,” akutero Yehova, “ndipo ndidzakubweretsani kumalo kumene munali ndisanakuchotseni kukupititsani ku ukapolo.”
೧೪ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.
15 Inu mumati, “Yehova watiwutsira aneneri athu ku Babuloni,”
೧೫ನೀವೋ, “ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ” ಅಂದುಕೊಂಡಿದ್ದೀರಿ.
16 koma zimene Yehova akunena za mfumu imene ikukhala pa mpando waufumu wa Davide pamodzi ndi anthu onse amene anatsala mu mzinda muno, abale anu amene sanapite nanu ku ukapolo ndi izi,
೧೬ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,
17 Yehova Wamphamvuzonse akuti, “Ndidzawapha ndi nkhondo, njala ndi mliri ndipo ndidzawasandutsa ngati nkhuyu zowola kwambiri, zosati nʼkudya.
೧೭“ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.
18 Ndidzawalondola ndi lupanga, njala ndi mliri ndipo ndidzawasandutsa chinthu chonyansa kwa anthu amayiko onse a pa dziko lapansi. Adzakhala otembereredwa, ochititsa mantha, onyozeka ndiponso ochitidwa chipongwe pakati pa anthu a mitundu yonse kumene ndawapirikitsirako.
೧೮ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.
19 Zidzatero chifukwa sanamvere mawu anga amene ndinkawatumizira kudzera mwa atumiki anga, aneneri. Ngakhale inu amene muli ku ukapolo simunamverenso,” akutero Yehova.
೧೯ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”
20 Choncho, imvani mawu a Yehova, inu akapolo nonse amene ndinakuchotsani mu Yerusalemu ndi kukupititsani ku Babuloni.
೨೦ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ.
21 Yehova Wamphamvuzonse, Mulungu wa Israeli akuti zokhudza Ahabu mwana wa Kolaya ndi Zedekiya mwana wa Maseya, amene akulosera zabodza kwa inu mʼdzina langa: “Taonani ndidzawapereka kwa Nebukadinezara mfumu ya ku Babuloni, ndipo adzawapha inu mukupenya.
೨೧ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.
22 Chifukwa cha anthu awiriwo, akapolo onse ochokera ku Yuda amene ali ku Babuloni adzagwiritsa ntchito mawu awa potemberera: ‘Yehova achite nawe monga mmene anachitira ndi Zedekiya ndi Ahabu, amene mfumu ya ku Babuloni inawatentha.’
೨೨ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ‘ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ’ ಎಂದು ಶಪಿಸುವರು.
23 Pakuti anthu amenewa achita zoyipa kwambiri mu Israeli; achita chigololo ndi akazi a eni ake ndipo mʼdzina langa ankayankhula zabodza zimene sindinawawuze kuti atero. Ine ndikuzidziwa ndipo ndine mboni ya zimenezi,” akutero Yehova.
೨೩ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.
24 Ukamuwuze Semaya wa ku Nehelamu kuti,
೨೪ಆಮೇಲೆ ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು, ನೀನು ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕು,
25 “Yehova Wamphamvuzonse, Mulungu wa Israeli akuti: Iwe unatumiza kalata mʼdzina lako kwa anthu onse a mu Yerusalemu, kwa Zefaniya mwana wa wansembe Maseya, ndi kwa ansembe onse. Unalemba mu kalatayo kuti,
೨೫ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,
26 ‘Yehova wakusankha kukhala wansembe mʼmalo mwa Yehoyada kuti ukhale wamkulu woyangʼanira Nyumba ya Yehova. Munthu aliyense wamisala amene akudziyesa kuti ndi mneneri uzimuponya mʼndende ndi kumuveka goli lachitsulo.
೨೬“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.
27 Nanga tsono chifukwa chiyani simunamuchitire zimenezi Yeremiya wa ku Anatoti, amene amakhala ngati mneneri pakati panu?
೨೭ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?
28 Yeremiyayo watitumizira uthenga uwu kuno ku Babuloni: Ukapolo wanu ukhala wa nthawi yayitali. Choncho mangani nyumba ndipo muzikhalamo; limani minda ndipo mudye zipatso zake.’”
೨೮ಇವನು, ‘ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.”
29 Koma wansembe Zefaniya anayiwerenga kalatayo pamaso pa mneneri Yeremiya.
೨೯ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.
30 Ndipo Yehova anawuza Yeremiya kuti,
೩೦ಅನಂತರ ಯೆರೆಮೀಯನಿಗೆ ಯೆಹೋವನು ಈ ಮಾತುಗಳನ್ನು ತಿಳಿಸಿದನು.
31 “Tumiza uthenga uwu kwa akapolo onse: ‘Yehova akuti zokhudza Semaya wa ku Nehelamu: Semaya wakuloserani, ngakhale kuti Ine sindinamutume, ndipo wakunyengani kuti muzikhulupirira bodza.
೩೧ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,
32 Nʼchifukwa chake Ine Yehova ndikuti: Mʼbanja lakelo sipadzakhala munthu pakati pa mtundu uno wa anthu amene adzaone zinthu zabwino zimene ndidzachitira anthu anga chifukwa analalika zondiwukira,’” akutero Yehova.
೩೨ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.