< Yoswa 3 >

1 Yoswa ndi Aisraeli onse anadzuka mmamawa nanyamuka ku Sitimu kupita ku Yorodani. Iwo anagona kumeneko asanawoloke mtsinje wa Yorodaniwo.
ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.
2 Patatha masiku atatu, atsogoleri anayendera misasa yonse,
ಮೂರು ದಿನಗಳಾದ ಮೇಲೆ ಜನಾಧಿಪತಿಗಳು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ
3 kulangiza anthu kuti, “Mukaona ansembe a Chilevi atanyamula Bokosi la Chipangano la Yehova Mulungu wanu, inu munyamuke pa malo ano ndi kumalitsatira.
“ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.
4 Potero mudzadziwa njira yoti mudzere, popeza simunayendepo njira ino nʼkale lomwe. Koma musaliyandikire. Pakati pa inu ndi bokosilo pakhale mtunda pafupifupi kilomita imodzi.”
ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು.
5 Yoswa anawuza anthu kuti, “Dzipatuleni tsono pakuti mawa Yehova adzachita zodabwitsa pakati panu.”
ಇದಲ್ಲದೆ ಯೆಹೋಶುವನು ಜನರಿಗೆ “ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು” ಎಂದು ಹೇಳಿದನು.
6 Mmawa mwake Yoswa ananena kwa ansembe kuti, “Nyamulani Bokosi la Chipangano muwoloke ndipo mukhale patsogolo pa anthu.” Motero iwo analinyamula ndi kupita patsogolo pawo.
ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.
7 Ndipo Yehova anati kwa Yoswa, “Lero Ine ndidzayamba kukukweza pamaso pa Aisraeli onse kuti adziwe kuti ndili nawe monga ndinalili ndi Mose.
ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.
8 Ansembe amene akunyamula Bokosi la Chipangano uwalamule kuti, ‘Mukafika ku mtsinje wa Yorodani mulowe mu mtsinjemo ndi kuyima mʼmphepete.’”
ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.
9 Yoswa anati kwa Aisraeli, “Bwerani pano mudzamve mawu a Yehova Mulungu wanu.
ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ” ಎಂದು ಹೇಳಿ,
10 Umu ndi mmene mudzadziwira kuti Mulungu wamoyo ali pakati panu. Inu mukamadzapita patsogolo Iye adzathamangitsa Akanaani, Ahiti, Ahivi, Aperezi, Agirigasi, Aamori ndi Ayebusi.
೧೦“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.
11 Pamenepo, Bokosi la Chipangano la Mbuye wa dziko lonse lapansi lidzawoloka mu Yorodani patsogolo panu.
೧೧ಹೇಗೆಂದರೆ ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯವುದು.
12 Musankhe amuna khumi ndi awiri kuchokera ku fuko lililonse la Israeli.
೧೨ಆಗ ನೀನು ಇಸ್ರಾಯೇಲರ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.
13 Mapazi a ansembe onyamula Bokosi la Yehova, Mbuye wa dziko lapansi, akadzangoponda mu Yorodani, madzi ake onse ochokera ku mtunda adzaleka kuyenda ndipo adzayima ngati chipupa.”
೧೩ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.
14 Tsono Aisraeli anachoka ku misasa yawo kukawoloka mtsinje wa Yorodani. Ansembe onyamula Bokosi la Chipangano ndiwo anatsogolera anthuwo.
೧೪ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.
15 Nyengo imeneyi inali yokolola ndipo mtsinje wa Yorodani umakhala wodzaza. Komabe, ansembe onyamula Bokosi la Chipangano anafika ku Yorodani, ndipo atangoponda mʼmadzimo,
೧೫ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.
16 madzi ochokera ku mtunda anasiya kuyenda. Madzi a Yorodani ochokera ku mtunda anawunjikana pamodzi ngati khoma lalitali pa mtunda wautali ndithu ndi mzinda wa Adama chapafupi ndi mzinda wa Zaretani. Madzi othamangira ku nyanja ya Araba, ngakhalenso amene amachokera kuti Nyanja ya Mchere amathera pamenepo. Choncho anthu anawoloka tsidya lina moyangʼanana ndi Yeriko.
೧೬ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
17 Ansembe onyamula Bokosi la Chipangano la Yehova anali chiyimire powuma, pakati pa Yorodani pamene Aisraeli amawoloka mpaka gulu lonse linamaliza kuwoloka powuma.
೧೭ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.

< Yoswa 3 >