< Suencuek 49 >
1 Te phoeiah Jakob loh a ca rhoek te a khue tih, “Tun ngol uh lamtah, vuenvai ah nangmih taengah aka thoeng ham te nangmih taengah ka puen pawn ni,” a ti nah.
೧ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.
2 “Jakob ca rhoek loh a yaak uh tih a coi uh thae vaengah, Na pa Israel kah ol te ya uh van lah.
೨ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿ ಬಂದು ಕೇಳಿರಿ. ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ.
3 Reuben nang he ka caming tih, ka thadueng neh, ka thahuem cuek, hlangrhuel boeimang, hlangtlung hlangrhuel la na om dae,
೩ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ, ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.
4 Na pa kah thingkong sola na yoeng tih, ka rhaenghmuen te na poeih phoeiah, tui bangla na soetaenah dongah caknoi khaw na khueh mahpawh.
೪ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!
5 Simeon neh Levi boeina, amih rhoi kah tubael tah kuthlahnah tumca ni.
೫ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು. ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು.
6 Amih rhoi kah tingtunnah dongah ka hinglu naepkhap pawh. Amah rhoi kah thintoek dongah hlang a ngawn rhoi tih, vaito kaprhui haih ham te amih rhoi kah kolonah la a om dongah, ka thangpomnah loh amih rhoi kah a hlangping te bulbo boel saeh.
೬ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.
7 Amih rhoi kah a thinpom khaw a tlung dongah a thintoek te thae a phoei thil. Te dongah a mangkhak te Jakob taengah ka tael vetih Israel taengah khaw ka taekyak ni.
೭ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.
8 Judah nang he na manuca rhoek loh nang n'uem uh ni. Na kut te na thunkha kah a rhawn dongla cu ni. Na pacaboeina te nang taengah bakop uh ni.
೮ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.
9 Judah he sathueng ca ni. Ka ca loh maeh kung lamkah na bal phoeiah, sathueng neh sathuengnu bangla aka yuel tih, aka kol te u long anih a haeng eh.
೯ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?
10 Judah lamkah mancai tah nong boel saeh lamtah, a kho laklo lamloh taem saeh. Shiloh a pha duela anih taengah, pilnam kah boengainah om saeh.
೧೦ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
11 A laaktal, laaktal te misur dongah, a laak ca te cangsawt misur dongah pael saeh. A pueinak te misurtui dongah, a hnipup, hnipup te misur thii dongah til saeh.
೧೧ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.
12 Na mik khaw misurtui lakah ling vetih, na no te suktui lakah bok ni.
೧೨ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿ ಇರುವವು.
13 Zebulun he tuitunli kah langkaeng ah khosa saeh lamtah, langkaeng kah sangpho rhoek bangla a bawtnah loh Sidon due pha saeh.
೧೩ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು. ಅವನಿಗೆ ಹಡಗುಗಳು ಸೇರುವ ಬಂದರು ಇರುವುದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು.
14 Issakhar he laak songrhuh bangla saelvong laklo ah na kol.
೧೪ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.
15 Duemnah then neh khohmuen hlahmae te khaw a hmuh dae, a phueih te a laengpang ah a thueng tih aka thotat saldong la om ni.
೧೫ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು.
16 Dan he Israel koca pakhat vanbangla a pilnam kah lai a thui pah ni.
೧೬ದಾನನು ಇಸ್ರಾಯೇಲರ ಕುಲಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
17 Dan he long taengkah rhul neh marhang dongkah aka ngol te a hnuk la bung saeh tila marhang khomik aka maeng tih, caehlong ah rhulthae bangla om ni.
೧೭ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು ಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು. ಸವಾರನು ಕೆಳಗೆ ಅಂಗಾತವಾಗಿ ಬೀಳುವನು.
18 BOEIPA nang kah khangnah ham ni ka lamtawn he.
೧೮ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.
19 Gad he caem loh tloek cakhaw anih loh a khomik a tloek pah ni.
೧೯ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು, ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು.
20 Asher ham caak bae vetih, manghai buhmong a tael ni.
೨೦ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು. ಅವನಲ್ಲಿ ರಾಜಭೋಗ ಪದಾರ್ಥಗಳು ದೊರಕುವವು.
21 Naphtali tah sayukrhuinu bangla khocaeh dangka vetih, ol then a thui ni.
೨೧ನಫ್ತಾಲಿಯು ಸ್ವತಂತ್ರವಾಗಿ ಜಿಂಕೆಯಂತಿದ್ದಾನೆ. ಅವನಿಂದ ಇಂಪಾದ ಮಾತುಗಳುಂಟಾಗುವವು.
22 Joseph tah a ca loh thaihsu tih, a ca loh tuiphuet taengah pungtai. Ngannu ngankhong loh pangbueng dongla luei.
೨೨ಯೋಸೇಫನು ಫಲಭರಿತವಾದ ವೃಕ್ಷವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.
23 Thaltang boei rhoek a konaeh uh dongah, a phaep uh tih a kah uh.
೨೩ಬಿಲ್ಲುಗಾರರು ಅವನನ್ನು ಆಕ್ರಮಿಸುವರು, ಹಗೆತನದಿಂದ ಬಾಣವನ್ನು ಅವನ ಮೇಲೆ ಪ್ರಯೋಗಿಸುವರು.
24 Tedae Jakob kah samrhang kut rhang neh, Israel aka dawn lungnu rhang neh,
೨೪ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.
25 Na pa kah Pathen loh nang m'bom tih Tlungthang loh nang te vaan a sosang kah yoethennah, a laedil kah aka kol yoethennah nen khaw, a rhangsuk dongkah yoethennah nen khaw, a bung khuikah nen khaw yoethen m'paek dongah, a li khaw tangkuek la om tih, a kut bantha khaw caang.
೨೫ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ. ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು, ಆತನು ಮೇಲಣ ಆಕಾಶದಿಂದಲೂ, ಕೆಳಗಣ ಸಾಗರದ ಸೆಲೆಗಳಿಂದಲೂ, ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.
26 Na pa kah yoethennah he kai aka yom kah yoethennah lakah len. Khosuen som ah a saelongnah hil Joseph lu so neh a manuca hlangcoelh luki soah om saeh.
೨೬ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.
27 Benjamin, uithang laihat loh, mincang ah maeh a ngaeh, hlaem ah kutbuem a tael,” a ti nah.
೨೭“ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು.
28 A pum boeih la Israel koca he hlai nit dongah a napa loh amih taengah a thui vaengah amah kah yoethennah neh amih te yoethen rhip a paek.
೨೮ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.
29 Te phoeiah amih te a uen tih, “Kai he ka pilnam taengla ka khum atah a pa rhoek neh Khitti Ephron lo kah lungko ah n'up uh.
೨೯ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.
30 Kanaan kho Mamre hmai, Makpelah lo kah lungko te phuel khohut la Khitti Ephron taeng lamkah Abraham loh a lai khohmuen ni.
೩೦ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.
31 Ti ah te Abraham neh a yuu Sarah a up uh tih Isaak neh a yuu Rebekah te pahoi a up uh coeng. Leah khaw pahoi ka up coeng.
೩೧ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ.
32 Te dongah Kheth ca rhoek taeng lamkah te khohmuen boiva neh a khuikah lungko te,” a ti nah.
೩೨ಹೊಲದೊಂದಿಗೆ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗುಹೆಯೊಳಗೆ ನನಗೂ ಸಮಾಧಿಮಾಡಬೇಕು” ಎಂದನು.
33 Jakob loh a ca rhoek a uen te a khah phoeiah baiphaih dongla a kho a yueh. Te phoeiah pal tih a pilnam taengla khoem uh.
೩೩ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.