< Joshua 16 >

1 Joseph koca rhoek ham hmulung a naan vaengah Jordan khocuk Jerikho kah Jerikho tui kaepah khosoek la luei tih Jerikho lamloh Bethel tlang la,
ಯೋಸೇಫನ ವಂಶದವರಿಗೆ ದೊರಕಿದ ಸ್ವತ್ತಿನ ಮೇರೆಯು: ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ಯೆರಿಕೋವಿನ ಪೂರ್ವದಲ್ಲಿದ್ದ ನದಿ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ ಹಾಗೂ
2 Bethel lamloh Luz la cet tih Arkii Ataroth khorhi la kat.
ಬೇತೇಲ್ ಇವುಗಳ ಮೇಲೆ ಲೂಜಿಗೂ ಹೋಗುತ್ತದೆ. ಅಲ್ಲಿಂದ ಅರ್ಕಿಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ
3 Te phoeiah khotlak kah Japhletee khorhi la suntla tih a dang Bethhoron neh Gezer khorhi, tuili kah a hmoi a hmoi ah om uh.
ಅಲ್ಲಿಂದ ಇಳಿದು ಪಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನ್ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
4 Te tlam te ni Joseph koca Manasseh neh Ephraim te phaeng la om.
ಇದು ಯೋಸೇಫನ ಮಕ್ಕಳಾದ ಮನಸ್ಸೆ, ಎಫ್ರಾಯೀಮ್ ಎಂಬ ಕುಲಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು.
5 Ephraim koca ah amih cako kah khorhi aka om tah khocuk ah Atarothaddar lamkah Bethhoron kholu due te amih kah rho khorhi la om.
ಎಫ್ರಾಯೀಮ್ ಗೋತ್ರಗಳ ದೇಶದ ದಕ್ಷಿಣ ದಿಕ್ಕಿನ ಮೇರೆಯು ಅಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ಬೇತ್ ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
6 Te phoeiah tlangpuei kah Mikmthath tuili rhi te a paan tih khocuk Taanathshiloh rhi la a ken phoeiah khocuk kah Janoah la kat.
ಅದರ ಉತ್ತರ ದಿಕ್ಕಿನ ಮೇರೆಯು ಮಿಕ್ಮೆತಾತ್ ಯಿಂದ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.
7 Te phoeiah Janoah lamkah Ataroth neh Naarah la aka suntla te Jerikho a doo tih Jordan la pawk.
ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಯೆರಿಕೋ ಪ್ರಾಂತ್ಯಕ್ಕೆ ಬಂದು ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
8 Tapuah lamloh tuili rhi ah Kanah soklong la cet tih tuitunli ah a bawtnah om. He Ephraim ca rhoek kah koca rhoek ah amah cako kah rho la om.
ಅದರ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ಹಳ್ಳವನ್ನು ಅನುಸರಿಸಿ ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಾಯೀಮ್ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವುಗಳೇ.
9 Hekah khopuei he Manasseh ca rhoek kah rho la aka om khopuei vangca rhoek boeih khui ah Ephraim ca rhoek ham khotlueh la om.
ಇದಲ್ಲದೆ ಎಫ್ರಾಯೀಮ್ ಕುಲದವರ ಮತ್ತು ಮನಸ್ಸೆ ಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳು ಅವುಗಳಿಗೆ ಸೇರಿದ ಗ್ರಾಮಗಳು ದೊರಕಿದವು.
10 Tedae Gezer kah khosa Kanaani te tah haek uh pawh. Te dongah Kanaani loh Ephraim lakli ah tihnin due kho a sak tih aka thotat saldong la om.
೧೦ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.

< Joshua 16 >