< Thothuengnah 21 >
1 BOEIPA loh Moses te a voek tih, “Aaron koca khosoih te voek lamtah thui pah. Amih loh a hinglu te a pilnam taengah poeih boel saeh.
೧ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
2 amah pumsa, amah huiko rhep ham, a manu ham, a napa ham, a capa ham, a canu ham, a manuca ham,
೨ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಮತ್ತು ಅಣ್ಣತಮ್ಮಂದಿರು ಇವರಿಗೋಸ್ಕರ ಈ ನಿಯಮ ಇರುವುದಿಲ್ಲ.
3 a ngannu a va om pawt tih anih dongah oila la aka hangdang ham atah poeih uh mai saeh.
೩ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.
4 Amah aka poeih ham a pilnam khuikah boei nen khaw poeih uh boel saeh.
೪ಅವನು ಕುಲದಲ್ಲಿ ನಾಯಕನಾಗಿರುವುದರಿಂದ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು, ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.
5 A lu te lungawng la kuet rhoe kuet uh boel saeh. A baengpae neh a baengki khaw vo uh boel saeh. A pumsa te a boenah neh boe uh boel saeh.
೫ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.
6 A Pathen ham a cim la om uh saeh lamtah a Pathen ming te poeih uh boel saeh. Te dongah BOEIPA kah hmaihlutnah, Pathen kah buh aka nawn amih khaw a cim la om uh saeh.
೬ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.
7 Pumyoi neh huta rhong te lo uh boel saeh. A va aka ma huta khaw lo uh boel saeh. Te dongah a Pathen ham a cim la om saeh.
೭ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
8 Khosoih long tah na Pathen kah buh a nawn dongah amah te ciim uh saeh. Nangmih aka ciim BOEIPA kamah he ka cim dongah khosoih khaw nang taengah a cim la om saeh.
೮ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.
9 Khosoih tongpa kah a canu khaw a cuk a halh loh a poeih atah a napa ni a poeih. Te dongah anih te hmai neh hoeh uh saeh.
೯ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
10 A manuca khui lamkah a lu dongah koelhnah situi a suep pah tih himbai bai ham a kut a tloeng thil khosoih a ham long tah a lu dongkah lupong te dul boel saeh lamtah a himbai te phen boel saeh.
೧೦“‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.
11 Aka duek hinglu boeih taengah khaw cet boel saeh. A napa ham neh a manu ham khaw poeih uh boel saeh.
೧೧ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
12 Rhokso lamkah khaw nong boel saeh. Anih soah a Pathen kah koelhnah situi rhuisam a om coeng dongah a Pathen kah rhokso te poeih boel saeh. Kai tah BOEIPA ni.
೧೨ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.
13 A yuu khaw a cuemnah neh lo saeh.
೧೩ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು.
14 Nuhmai, vama, pumyoi hlang rhong khaw lo boel saeh. A pilnam khuikah oila bueng te a yuu la lo saeh.
೧೪ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
15 Anih te BOEIPA kamah loh ka ciim coeng dongah a pilnam khuikah a tii a ngan long khaw poeih boel saeh,” a ti nah.
೧೫ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
16 Te phoeiah BOEIPA loh Moses a voek tih,
೧೬ಯೆಹೋವನು ಮೋಶೆಯೊಂದಿಗೆ ಮಾತನಾಡಿ,
17 “Aaron te voek lamtah a cadilcahma ham khaw, ‘Na tii na ngan taengah rhip thui pah,’ ti nah. U khaw a pum dongah a lolhmaih a om atah a Pathen kah buh aka nawn ham ha moe boel saeh.
೧೭“ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.
18 A pum dongah a lolh a maih aka om hlang boeih, mikdael neh aka khaem khaw, a sa aka vawt neh a sa aka hoei hlang khaw,
೧೮ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,
19 A pum dongah kut tlawt, kho tlawt aka om hlang te khaw,
೧೯ವಿಪರೀತ ಅವಯವಗಳುಳ್ಳವನಾಗಲಿ, ಕೈಕಾಲು ಮುರಿದವನಾಗಲಿ,
20 tingkhun khaw, merheh khaw, mik haeh khaw, phaikawk neh vinhna khaw, til hi khaw ha mop boel saeh.
೨೦ಗೂನು ಇಲ್ಲವೇ ಕುಬ್ಜರಾಗಲಿ, ಹೂಗಣ್ಣ ಅಥವಾ ಕಾಯಿಗಣ್ಣನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ,
21 Khosoih Aaron tiingan khuikah hlang khat khat te a pum dongah a lolh a maih atah BOEIPA kah hmaihlutnah nawn ham ha mop boel saeh. A Pathen kah buh te nawn ham ha mop boel saeh.
೨೧ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.
22 A Pathen kah buh tah a cim uet ah cim tih aka cim van loh ca saeh.
೨೨ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.
23 Te dongah a pum dongah a lolh a maih aka om loh hniyan khuila kun boel saeh lamtah hmueihtuk taengla mop boel saeh. Te daengah ni ka rhokso te a poeih pawt eh. Amih te BOEIPA kamah long ni ka ciim,” a ti nah.
೨೩ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
24 Te dongah Moses loh Aaron neh anih koca rhoek taengah, Israel ca boeih taengah a thui pah.
೨೪ಮೋಶೆಯು ಆರೋನನಿಗೂ, ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.