< 2 Timothy 2 >
1 Te dongah ka ca nang Khrih Jesuh ah lungvatnah neh thaphoh uh.
೧ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.
2 Te khaw kai lamloh laipai a yet neh na yaak coeng. He he uepom hlang taengah pae ne. Amih tah a tloe thuituen ham khaw khangmai la om bitni.
೨ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.
3 Jesuh Khrih kah rhalkap then la patang puei.
೩ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.
4 Aka vathoh loh a khosaknah dongkah khosak rhamok neh a tingtong pawt daengah ni caemthoh te kolo la a om eh.
೪ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.
5 Khat khat long khaw a loehlang dae a longim pawt la a loehlang atah rhuisam a khuem moenih.
೫ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ.
6 Thakthae lotawn te lamhma la a thaih a dang ham a kuek.
೬ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.
7 Ka thui te yakming lah. A cungkuem dongah yakmingnah te Boeipa loh nang ham m'paek bitni.
೭ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು.
8 Kaimih kah olthangthen vanbangla David tiingan lamkah neh duek lamkah aka thoo Jesuh Khrih te poek.
೮ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ.
9 Te ham te laihmuh bangla thongtlak hilah ka patang dae Pathen kah Olka tah pinyen hlan.
೯ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
10 Te dongah a coelh rhoek ham te boeih ka ueh. Te daengah ni khangnah te amih loh dungyan thangpomnah neh Khrih Jesuh ah a dang uh van eh. (aiōnios )
೧೦ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ. (aiōnios )
11 He ol he a uepom ta. N'duek atah n'hing puei van ni ta.
೧೧ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು,
12 N'ueh uh atah m'manghai uh van ni ta. N'hnawt uh van atah amah loh mamih he n'hnawt van ni.
೧೨ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
13 Amah a hnawt thai pawt dongah n'hnalval uh cakhaw anih tah uepom la naeh ngawn ta.
೧೩ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”
14 He rhoek he thoelh pah. Pathen hmaiah naenam pawt ham kang uen. A hoeikhang ham pawt he aka ya rhoek kah pocinah ham ni te.
೧೪ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.
15 Oltak olka te aka paekhlae, aka birhih pawh bibikung tih namah te Pathen taengah ueppang koi la pai hamla haam lah.
೧೫ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
16 Tedae a rhonging kah olhong te rhael, hlangrhong khuila muep cungphoek uh ve.
೧೬ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.
17 Amih kah olka te khaw hmapuek manrhaicak bangla cet ni. Te khuiah Hymenaeus neh Philetu om rhoi.
೧೭ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.
18 Amih rhoi loh oltak te a hlihloeh sak rhoi tih thohkoepnah om coeng a ti rhoi. Te vaengah hlangvang kah tangnah te a palet rhoi.
೧೮ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.
19 Tedae Pathen kah khoengim tah khangmai la pai. Hekah kutnoek aka om dongah amah kah la aka om rhoek te Boeipa loh aming. Te dongah Boeipa ming aka phoei boeih long tah boethae lamloh nong saeh.
೧೯ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.
20 Tahae kah im puei ah sui neh caben hnopai bueng pawt tih thing neh diklai umam khaw om. Te dongah a ngen tah thangpomnah ham om dae a tloe te tah yahpohnah la om.
೨೦ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.
21 Te dongah khat khat loh he lamkah amah a cilpoe atah boeikung kah a congpang koi neh bibi then boeih ham a hmoel tih a ciim thangpomnah hnopai la om ni.
೨೧ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.
22 Te dongah cadongcaloe kah hoehhamnah te rhaelrham tak lamtah duengnah, tangnah, lungnah, thinko a caih la Boeipa aka phoei rhoek neh rhoeprhoinah te huul lah.
೨೨ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
23 Tedae aka ang neh angvawk kah olpungnah te hnawt lamtah rhalthohnah ni a saii uh tila ming lah.
೨೩ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
24 Te dongah Boeipa kah sal loh hnueih ham a kuek moenih. Tedae a cungkuem ham kodo la khala neh ueh ham a kuek.
೨೪ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ
25 Thimkalh rhoek muelhtuetnah neh toel mai. Amih te Pathen loh oltak mingnah dongla yutnah khaw a paek khaming.
೨೫ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.
26 Te daengah ni amah loh amah kongaih la a tuuk khaw rhaithae kah thaang lamloh a sae uh eh.
೨೬ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.