< Olrhaepnah 6 >
1 Tahae kah olpaek, oltlueh neh laitloeknah he pang ham na muk uh khohmuen ah nangmih cang puei ham neh saii sak ham ni na BOEIPA Pathen loh n'uen.
೧ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.
2 Te dongah na BOEIPA Pathen te na rhih tih a khosing neh a olpaek boeih te namah neh na ca long khaw, na ca kah a ca long khaw, na hing tue khuiah ngaithuen sak ham ni kai loh nang kang uen. Te daengah ni na hinglung a vang eh.
೨ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.
3 Aw Israel na yaak van coeng dongah na ngai ham te ngaithuen lah. Te long ni nang te khophoeng m'pha sak vetih na pa rhoek kah BOEIPA Pathen loh nang taengah a thui vanbangla suktui neh khoitui aka long khohmuen ah muep na ping eh.
೩ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.
4 Israel aw hnatun lah BOEIPA pakhat bueng ni mamih kah BOEIPA Pathen la aka om.
೪ಇಸ್ರಾಯೇಲರೇ, ಕೇಳಿರಿ, ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು;
5 Na BOEIPA Pathen te na thinko boeih, na hinglu boeih, na cungkuem boeih neh lungnah lah.
೫ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.
6 Tihnin ah kai loh nang kang uen olka he nang kah thinko ah rhaehrhong lah saeh.
೬ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು.
7 Na ca rhoek pum dongah pak pah lamtah na im ah na ngol vaengah khaw, long na caeh vaengah khaw, na yalh vaengah khaw, na thoh vaengah khaw thui pah.
೭ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
8 Na kut ah miknoek la cin pah lamtah na mikhmuh ah samtoelrhui bangla om saeh.
೮ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.
9 Na im rhungsut neh na vongka dongah khaw daek pah.
೯ನಿಮ್ಮ ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು.
10 Tedae nang taengah paek ham na pa rhoek Abraham, Isaak neh Jakob taengah a caeng tangtae na thoong mueh khopuei dangka neh aka then,
೧೦ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ
11 Na sang pawt dae thennah cungkuem neh aka khawk im la, na vuet pawt dae a vueh tangtae tuito la, misur neh olive khaw na tue pawt dae na caak tih na hah nah khohmuen ah nang aka thak la na BOEIPA Pathen te om bitni.
೧೧ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ,
12 Namah te ngaithuen, Egypt kho lamkah sal imkhui lamloh nang aka khuen BOEIPA te na hnilh ve.
೧೨ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.
13 Na BOEIPA Pathen te rhih lah. Amah taengah tho na thueng phoeiah ni a ming nen khaw na toemngam eh.
೧೩ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.
14 Na kaepvai pilnam rhoek kah pathen, hlangtloe pathen hnukah cet boeh.
೧೪ಸುತ್ತಮುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.
15 Na khui kah na Pathen BOEIPA tah thatlai Pathen ni. Na BOEIPA Pathen kah a thintoek he nang taengah ha sai vetih nang te diklai maelhmai dong lamloh m'mit sak ve.
೧೫ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು.
16 Massah ah na noemcai uh bangla na BOEIPA Pathen te noemcai uh boeh.
೧೬ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.
17 Na BOEIPA Pathen kah olpaek khaw, a olphong neh a oltlueh nang n'uen te khaw ngaithuen rhoela ngaithuen.
೧೭ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.
18 BOEIPA mikhmuh ah a thuem neh a then la saii. Te daengah ni nang te khophoeng m'pha sak phoeiah na pa rhoek taengah BOEIPA loh a caeng khohmuen then te na paan vetih na pang eh.
೧೮ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
19 BOEIPA loh a thui vanbangla na thunkha boeih te na mikhmuh lamloh a thaek ni.
೧೯ಆತನು ತಾನೇ ನಿಮ್ಮ ಶತ್ರುಗಳನ್ನು ನಿಮ್ಮ ಎದುರಿನಿಂದ ಹೊರಡಿಸುವೆನೆಂದು ಮಾತುಕೊಟ್ಟನಲ್ಲವೇ.
20 Thangvuen ah na ca loh nang n'dawt tih, 'Mamih BOEIPA Pathen kah olphong, oltlueh neh laitloeknah te balae,’ a ti ni.
೨೦ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ
21 Na ca taengah, “Egypt ah Pharaoh sal la n'om uh vaengah BOEIPA loh tlungluen kut neh Egypt lamkah mamih n'doek.
೨೧ನೀವು ಅವರಿಗೆ, “ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆಮಾಡಿದನು.
22 BOEIPA loh mamih mikhmuh ah Egypt soah, Pharaoh neh a imkhui boeih soah miknoek neh kopoekrhai a len koek neh yoethae te a paek.
೨೨ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ,
23 Tedae mamih tah a pa rhoek taengah a caeng sut khohmuen te mamih taengah paek ham ni te lamloh n'loh tih n'khuen.
೨೩ತಾನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವುದಕ್ಕಾಗಿ ಐಗುಪ್ತದೇಶದೊಳಗಿಂದ ಬರಮಾಡಿದನು.
24 Tihnin kah bangla mamih aka hing sak ham mamih ham khohnin takuem a then dongah mamih kah BOEIPA Pathen rhih ham neh he rhoek kah oltlueh boeih he vai sak ham BOEIPA loh mamih n'uen coeng.
೨೪ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.
25 Mamih n'uen vanbangla tahae kah olpaek boeih he mamih kah BOEIPA Pathen mikhmuh ah vai ham n'ngaithuen uh atah mamih ham duengnah la om van ni.
೨೫ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು.