< Galati 3 >
1 Galati hlangang rhoek aw, a tai tangtae Jesuh Khrih te mik hmuh ah a tueng lalah unim nangmih aka hloih.
೧ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?
2 Nangmih lamkah tah he bueng ni ming ka ngaih. Olkhueng kah khoboe nen nim, na dang uh mueihla neh tangnah hnavue nen nim?
೨ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?
3 Hlangang la na om uh tangloeng. Mueihla ah hma aka pai loh pumsa ah na khah uh coeng.
೩ನೀವು ಇಷ್ಟು ಬುದ್ಧಿಯಿಲ್ಲದವರೋ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ?
4 A hoeihae lam nim heyet na patang uh? Te koinih a hoeihae pawn ni te.
೪ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು?
5 Te dongah nangmih te mueihla aka pae tih nangmih ah thaomnah a tueng sak tah olkhueng kah khoboe nen nim? Thangnah kah hnavue nen dae nim?
೫ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?
6 Te vanbangla Abraham loh Pathen te a tangnah tih amah te duengnah la a nawt.
೬ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ.
7 Te dongah tangnah dongkah rhoek tah Abraham kah a ca rhoek ni tila ming uh.
೭ಆದ್ದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.
8 Namtom rhoek he tangnah loh a tang sak te cacim loh ana hmaitang coeng. Pathen loh Abraham te, “Nang lamloh namtom boeih a yoethen ni,” tila olthangthen a thui.
೮ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
9 Te dongah tangnah kah hlang rhoek te tah uepom Abraham rhangneh a yoethen uh.
೯ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.
10 Olkhueng kah bibi lamloh aka om boeih tah rhunkhuennah hmuiah om uh. A saii uh ham te olkhueng cabu khuiah a daek. Te rhoek boeih dongah aka ngolpai pawt rhoek te rhunkhuen thil saeh,” tila a daek coeng.
೧೦ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
11 Tedae olkhueng lamloh Pathen taengah a tang pawt te mingpha coeng dongah aka dueng tah tangnah nen ni a hing eh.
೧೧ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.
12 Te dongah olkhueng tah tangnah dongah om pawt dae te te aka vai tah te nen te hing ni.
೧೨ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.
13 Khrih loh mamih he olkhueng kah rhunkhuennah lamloh n'tlan tih mamih yueng la rhunkhuennah a yook. “Rhunkhuen boeih tah thing dongah a hoei,” tila a daek pai.
೧೩ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
14 Te daengah ni Abraham kah yoethennah tah Khrih Jesuh lamloh namtom taengah a pha eh. Te daengah ni Mueihla kah olkhueh te tangnah lamloh n'dang eh.
೧೪ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.
15 Manuca rhoek hlang vanbangla ka thui. Hlang loh a cak sak paipi pataeng hnawt pawt tih a thap bal moenih.
೧೫ಸಹೋದರರೇ, ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.
16 Te dongah Abraham neh a tiingan ham olkhueh a thui uh vaengah a yet ham bangla, “Tiingan rhoek te,” a ti moenih. Tedae pakhat ham bangla, “Na tiingan taengah,” a ti nah. Te tah Khrih dae ni.
೧೬ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.
17 Te dongah he he ka thui. Pathen loh a cak sak phoeikah kum yali sawmthum ah aka thoeng olkhueng loh paipi a hmil moenih. Te vanbangla olkhueh te khaw a phae moenih.
೧೭ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.
18 Rho tah olkhueng lamloh om koinih olkhueh dongah om mahpawh. Tedae Pathen loh olkhueh nen ni Abraham te a rhen.
೧೮ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
19 Te koinih olkhueng te ta? A caeng tangtae tiingan te ha pawk duela boekoeknah rhoek te a thap. Tekah te rhikhangkung kut longah puencawn lamloh a uen coeng.
೧೯ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
20 Rhikhangkung tah pakhat kah la om pawh. Tedae Pathen tah pakhat la om.
೨೦ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ. ದೇವರಾದರೋ ಒಬ್ಬನೇ.
21 Te koinih olkhueng loh Pathen kah olkhueh te a kingkalh a? Tlam te om mahpawh. Olkhueng a paek loh hing sak thai koinih olkhueng dongah duengnah rhep n'dang ni.
೨೧ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.
22 Tedae a cungkuem he cacim loh tholhnah hmuiah a up coeng. Te daengah ni olkhueh tah Jesuh Khrih kah tangnah lamloh aka tangnah rhoek taengah a paek eh.
೨೨ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.
23 Tedae tangnah ha pawk hlan lamloh tangnah a pumphoe tom duela olkhueng hmuiah a uup tih n'khoembael.
೨೩ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು.
24 Te dongah mamih kah cakhoem olkhueng loh Khrih taengla n'om sak. Te daengah ni tangnah lamloh n'tang sak.
೨೪ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.
25 Tedae tangnah ha pawk vaengah tah cakhoem kut hmuiah om uh voel pawh.
೨೫ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ.
26 Jesuh Khrih dongkah tangnah lamloh Pathen ca rhoek la boeih na om uh.
೨೬ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
27 Khrih ah naka nuem boeih loh Khrih te na bai uh.
೨೭ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
28 Judah khaw Greek khaw om pawh. Sal khaw hlang loeih khaw om pawh. Tongpa neh huta om pawh. Nangmih tah Jesuh Khrih ah pakhat la boeih na om uh.
೨೮ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
29 Nangmih khaw Khrih kah coeng atah rhopangnah olkhueh vanbangla Abraham kah tiingan la na om uh van.
೨೯ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.