< Hebru 6 >

1 Te dongah Khrih kawng tongnah olka te khueh uh sih. A soepnah la thoeih uh sih. Aka duek bibi lamkah yutnah,
ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. (aiōnios g166)
2 Pathen taengah tangnah, baptisma kawng thuituennah, kut tloengnah, aka duek thohkoepnah neh dungyan laitloeknah, khoengim te koep tloeng uh boel sih. (aiōnios g166)
3 Hekah he Pathen loh ham hmoel atah n'saii uh bitni.
ದೇವರು ಅನುಮತಿಸುವುದಾದರೆ ನಾವು ಇವುಗಳನ್ನು ಮಾಡುವೆವು.
4 Vai khaw kho aka hmuh tih vaan kutdoe khaw aka ten, Mueihla Cim kah pueipo la aka om tangtae neh,
ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,
5 Pathen kah olka then neh aka lo ham tue kah thaomnah a ten phoeiah, (aiōn g165)
ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, (aiōn g165)
6 aka bung tah Pathen capa te amah la koep a tai tih a yan dongah a thai la koep yutnah ham coeng thai pawh.
ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.
7 Diklai loh a soah rhotui aka tla takuem te a ok dae amih aka tawn ham aka hoeikhang toi an a thoeng sak atah Pathen taengah yoethennah a dang.
ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.
8 Tedae hling neh lota a thoeng sak atah lolhmaih tih rhunkhuennah yoei coeng. A hnukkhueng ah tah a hoehnah hamla om coeng.
ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.
9 Tedae thintlo rhoek, nangmih ham n'thui uh tangloeng ngawn koinih khangnah neh aka then ngai hno te om tila n'ngaitang uh.
ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ.
10 Pathen tah nangmih kah bibi neh amah ming ham lungnah na tueng sak uh te khaw, hlangcim rhoek te na bongyong uh coeng tih na bongyong uh li te hmaai ham a halang moenih.
೧೦ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
11 Tedae nangmih khat rhip te a bawt duela na ngaiuepnah dongkah ngaikhueknah dongla thahluenah neh amah la na phoe uh hamla ka ngaih uh.
೧೧ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.
12 Te daengah ni kolhnaw la na om uh pawt vetih tangnah, thinsennah rhangneh olkhueh aka pang rhoek kah mueiloh la na om uh eh.
೧೨ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.
13 Pathen loh Abraham te a caeng vaengah toemngam ham a tanglue a khueh pawt dongah amah neh amah te toemngam uh.
೧೩ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,
14 Te vaengah, “Nang te kang uem rhoela rhep kang uem vetih nang te kam ping rhoela kan ping sak ni,” a ti nah.
೧೪“ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ.
15 Te dongah olkhueh te thinsen neh a dang tangloeng.
೧೫ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.
16 Hlang loh a tanglue la a toemngam dae olhlo a caksaknah ham a bawt ah pakainah la boeih om.
೧೬ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.
17 Te khuiah Pathen loh olkhueh dongkah rhopangkung taengah amah kah mangtaengnah olhlo neh khangmai la rhi a khang te muep tueng a ngaih.
೧೭ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.
18 Te daengah ni hno panit loh a khangmai sak. Te khuiah Pathen te laithae thai pawt dongah ni ngaiuepnah a tawn te tuuk ham aka yong rhoek loh khangmai la thaphohnah n'khueh.
೧೮ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.
19 Te ni hinglu dongkah cumkai la n'khueh uh tih hniyan khui ah khangmai la rhep kun rhenten coeng.
೧೯ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.
20 Te ah mamih yueng puencoe la Jesuh kun tih Melkhizedek kah aitlaeng bangla kumhal ah khosoihham la om coeng. (aiōn g165)
೨೦ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ. (aiōn g165)

< Hebru 6 >