< Lampahnah 36 >
1 Joseph ca rhoek kah koca lamloh Manasseh capa, Makir kah a ca, Gilead ca rhoek koca kah a napa boeilu rhoek te capit uh tih Moses mikhmuh neh Israel ca rhoek kah a napa boeilu, khoboei rhoek mikhmuh ah a thui uh.
೧ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,
2 Te vaengah, “Ka boeipa aw, khohmuen he Israel ca rhoek taengah hmulung neh rho la paek ham BOEIPA loh a uen coeng. Ka boeipa aw mah manuca Zelophehad kah rho te a canu rhoek taengah paek ham BOEIPA loh a uen coeng.
೨“ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.
3 Tedae Israel ca kah koca pakhat ca lamkah pakhat taengah khaw a yuu la om uh koinih a pa rhoek kah rho khui lamloh amih kah rho te n'tloek pah ni. Amih a om nah koca kah rho te a thap vetih mamih kah rho he hmulung lamloh a hnop ni.
೩ಹೀಗಿರಲು ಅವರು ಇಸ್ರಾಯೇಲರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವತ್ತು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಆದುದರಿಂದ ನಮ್ಮ ಸ್ವತ್ತಿಗೆ ನಷ್ಟವುಂಟಾಗುವುದು.
4 Israel ca rhoek ham jubilee om bal vaengah khaw amih a om nah koca kah rho ham ni amih kah rho te a thap eh. Te vaengah a pa koca kah rho lamloh amih kah rho la a yueh ni,” a ti uh.
೪ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.
5 Te dongah Moses loh BOEIPA olka bangla Israel ca rhoek te a uen tih, “Joseph ca rhoek kah koca loh a thui tangloeng coeng.
೫ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರಿಗೆ, “ಯೋಸೇಫನ ಕುಲದವರು ಹೇಳುವ ಮಾತು ನ್ಯಾಯವಾಗಿದೆ.
6 Ol he BOEIPA loh Zelophehad canu rhoek ham khaw a uen coeng tih, 'Amih mik ah a then bangla yuu la poeh uh cakhaw a napa koca kah huiko khuikah yuu la om uh saeh.
೬ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ.
7 Te dongah Israel ca rhoek kah rho he koca pakhat lamloh koca a tloe taengla tinghil boel saeh. Israel ca khuikah hlang long tah a napa koca kah rho dongah balak uh saeh.
೭ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು.
8 Israel ca koca khuiah rho aka pang canu boeih tah, a napa cako koca pakhat kah a yuu la om saeh. Te daengah ni a pa rhoek kah rho te Israel ca khuikah hlang loh a pang eh.
೮ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.
9 Rho he koca pakhat lamloh a tloe koca taengla tinghil boel saeh. Hlang he Israel ca, koca khuikah tah amah kah rho dongah balak saeh,’ a ti,” a ti nah.
೯ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಆಜ್ಞಾಪಿಸಿದನು.
10 BOEIPA loh Moses a uen vanbangla Zelophehad canu rhoek loh a saii uh van.
೧೦ಚಲ್ಪಹಾದನ ಹೆಣ್ಣುಮಕ್ಕಳು ಯೆಹೋವನ ಆಜ್ಞಾನುಸಾರವೇ ನಡೆದುಕೊಂಡರು.
11 Zelophehad canu rhoek Mahlah, Tirzah neh Hoglah khaw, Milcah neh Noah khaw a panoe ca rhoek kah a yuu la om uh.
೧೧ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು.
12 Joseph capa Manasseh ca rhoek kah koca khuiah yuu la a om uh dongah amih kah rho a napa huiko kah koca khuiah om van.
೧೨ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸ್ವತ್ತು ತಂದೆಯ ಕುಲದಲ್ಲಿಯೇ ಉಳಿಯಿತು.
13 He kah olpaek neh laitloeknah he BOEIPA loh Jerikho Jordan kaep, Moab kolken ah Israel ca ham Moses kut lamloh a uen.
೧೩ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.