< 2 Setouknae 3 >

1 Solomon ni BAWIPA e im teh Jerusalem kho a na pa Devit koe BAWIPA ni a kamnuenae, Moriah mon dawk sak a kamtawng. Hote hmuen teh Jebusit tami Ornan e cangkatinnae hmuen, Devit ni sut a rakueng pouh e hmuen dawk a sak.
ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.
2 A bawinae kum 4, thapa ayung pahni, apâhni hnin vah sak a kamtawng.
ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಅದನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು.
3 Hahoi Solomon ni Cathut im sak a kamtawngnae teh, asaw dong 60, akaw dong 20 touh a pha.
ಸೊಲೊಮೋನನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮೊದಲಿದ್ದ ಮೊಳದ ಪ್ರಕಾರ ಅರುವತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವು ಆಗಿತ್ತು.
4 Hmuen Kathoung a hmalah, im alawilae khom hoi akaw a kâvan teh asaw dong 20, a rasang dong 120 touh a pha. Athung lae teh kathounge suituici hoi a hluk.
ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು.
5 Kalenhnawn lae imrakhan teh hmaica hoi a tapang teh suikathoung hoi a hluk hnukkhu, samtuenaw, sumbawtaruinaw hoi a sak.
ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಆದರ ಹಲಗೆಗಳ ಮೇಲೆ ಖರ್ಜೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಣಿಗಳನ್ನು ಕೆತ್ತಿಸಿದನು.
6 Im a meihawi nahanelah, talung aphu kaawm poung e a bet teh sui hai Parvaim ram e sui hoi a hluk.
ಅಮೂಲ್ಯವಾದ ರತ್ನದ ಕಲ್ಲುಗಳಿಂದ ಅಲಯವನ್ನು ಅಲಂಕರಿಸಿದನು. ಆದರ ಬಂಗಾರವು ಪರ್ವಯಿಮ್ ದೇಶದ ಬಂಗಾರವಾಗಿತ್ತು.
7 Im dawk e pangkheknaw khom, tapang, takhangnaw teh sui hoi a hluk. Tapang dawk cherubim mei a thuk.
ಹೀಗೆ ಆಲಯದಲ್ಲಿನ ತೊಲೆಗಳನ್ನೂ, ಹೊಸ್ತಿಲುಗಳನ್ನು, ಗೋಡೆಗಳನ್ನೂ, ಬಾಗಿಲುಗಳನ್ನೂ ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.
8 Hahoi, hmuen kathoung poung a sak teh, im ayung hoi adangka reikâvan lah asaw dong 20, akaw dong 20 touh hoi a sak teh suituici talen 600 touh hoi a hluk.
ಇದಲ್ಲದೆ ಅವನು ಮಹಾಪರಿಶುದ್ಧ ಸ್ಥಳವನ್ನು ಕಟ್ಟಿಸಿದನು. ಅದರ ಉದ್ದವು, ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳವಾಗಿತ್ತು. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದಿಂದ ಹೊದಿಸಿದನು.
9 A hetnae sum teh sui shekel 50 touh a pha. Imvan e naw hai sui hoi a hluk.
ಬಂಗಾರದ ಮೊಳೆಗಳ ತೂಕ ಐವತ್ತು ತೊಲವಾಗಿತ್ತು. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.
10 Hmuen kathoung poung dawk cherubim mei kahni touh a thuk teh sui hoi a hluk.
೧೦ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿದನು; ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.
11 Cherubim e a ratheinaw teh dong 20 touh asaw. Cherubim e avanglae rathei dong 5 touh a pha teh cherubim kahni touh hoi a rathei hmo rekkâbet roi teh rathei avangvanglae ni tapang rek a kâbet.
೧೧ಕೆರೂಬಿಗಳ ರೆಕ್ಕೆಗಳು ಒಟ್ಟು ಇಪ್ಪತ್ತು ಮೊಳ ಉದ್ದವಾಗಿದ್ದವು. ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು; ಐದು ಮೊಳ ಉದ್ದವಾದ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.
12 Cherubim buet touh e a rathei teh dong 5 touh a pha teh, tapang dawk rek a kâpha, a rathei avanglae buet touh hai dong 5 touh a pha teh, cherubim buet touh e rathei rek a kâbet.
೧೨ಅದರಂತೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳ ಉದ್ದವಾಗಿದ್ದು, ಅದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು.; ಇನ್ನೊಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.
13 Cherubim roi teh imthungkhu lah a kangvawi laihoi a kangdue. A rathei a kadai e dong 20 touh akaw.
೧೩ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿಕೊಂಡಿದ್ದವು. ಕೆರೂಬಿಗಳು ತಮ್ಮ ಕಾಲುಗಳ ಮೇಲೆ ನಿಂತುಕೊಂಡು, ಪರಿಶುದ್ಧ ಸ್ಥಳದ ಕಡೆಗೆ ಮುಖಮಾಡಿದ್ದವು.
14 Hni opaou, âthi hni, kamthim hni loukloukkaang hoi a kawng tangcoung e cherubim mei hoi sak e lukkarei pangaw e hai a sak.
೧೪ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು.
15 Khom dong 35 touh kasawe kahni touh imhmalah a ung teh, khom dawnghmo dawk luhuem, dong 5 touh kasawe a kâmuk sak.
೧೫ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು.
16 Lahuen dawk awi e patetlah sumbawtaruinaw a sak teh, khom dawnghmo dawk a hruek. Talepaw 100 touh a sak teh hote sumbawtarui dawk a pâthit.
೧೬ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು.
17 Bawkim e hmalah khom, aranglah buet touh, avoilah buet touh a ung teh, aranglae teh Jakhin telah min a phung teh, avoilae teh Boaz telah min a phung.
೧೭ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ “ಯಾಕೀನ್” ಎಂದೂ ಎಡಗಡೆಯಿದ್ದ ಕಂಬಕ್ಕೆ “ಬೋವಜ್” ಎಂದೂ ಹೆಸರಿಟ್ಟನು.

< 2 Setouknae 3 >