< Tâconae 17 >
1 Isarel rangpuinaw ni BAWIPA e kâ patetlah Sin kahrawng dawk hoi a tâco awh teh kahlawng bout a cei awh nah Rephidim vah rim a tuk awh. Hote hmuen koe taminaw nei hanelah tui awm hoeh.
೧ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.
2 Hatdawkvah, taminaw ni Mosi koe nei hane tui na poe telah a titeh Mosi a yue awh. Mosi ni bangkongmaw kai koe thoenae na tawng awh. BAWIPA hah bangkongmaw na tanouk awh vaw telah atipouh.
೨ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.
3 Taminaw tui a kahran dawkvah, Mosi yon a pen awh teh a phuenang awh. Kamamouh khue hoi ka canaw, saringnaw pueng tui kahran sak hanelah, Izip ram hoi bangkongmaw na hrawi telah atipouh awh.
೩ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.
4 Hat navah, Mosi ni BAWIPA hah a kaw teh, hete taminaw heh kai ni bangtelamaw ka ti han. Talung hoi kai dêi hanelah meimei coungkacoe ao awh toe telah atipouh.
೪ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು.
5 BAWIPA ni hai taminaw e hmalah cet nateh, Isarel tami kacuenaw hah kaw. Tuipui na hemnae sonron hah sin nateh Horeb mon lah cet.
೫ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.
6 Hote hmuen koe kaawm e lungsong van vah kai ka kangdue han. Nang ni hote lungsong hah na hem han. Taminaw ni a nei hane tui hote lungsong dawk hoi a tâco han telah Mosi koe atipouh. Mosi ni Isarel kacuenaw e hmalah hottelah a sak.
೬ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
7 Isarelnaw ni BAWIPA teh kaimouh koe ao hoi ao hoeh e a tanouk awh dawkvah, hote hmuen teh Massah hoi Meribah telah ati awh.
೭ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.
8 Hat navah, Amaleknaw ni a tho awh teh Isarelnaw Refidim vah a tuk awh.
೮ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.
9 Mosi ni taminaw hah a rawi teh Amaleknaw tuk hanelah cet awh. Tangtho vah, Cathut e sonron ka sin vaiteh, mon vah ka kangdue han telah Joshua koe atipouh.
೯ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು.
10 Mosi ni a dei pouh e patetlah Joshua ni a sak teh Amaleknaw hah a tuk. Mosi, Aron hoi Hur tinaw mon vah a luen awh.
೧೦ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಏರಿ ಹೋದರು.
11 Mosi ni a kut a dâw nah, Isarelnaw ni a tâ awh. A kut a pabo nah, Amaleknaw ni a tâ awh.
೧೧ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.
12 Hatei, Mosi e kut tha a tawn dawkvah, ahnimouh ni talung a la awh teh, Mosi talung van a tahung sak hnukkhu, Aron hoi Hur ni avoivang lahoi a kut a tawm pouh roi. Hatdawkvah, Kanîloum totouh a kut teh ama paroup lah ao.
೧೨ಮೋಶೆಯ ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿಸದೆ ಇದ್ದರು.
13 Joshua ni hai Amalek bawinaw hoi a taminaw hah tahloi hoi a thei.
೧೩ಯೆಹೋಶುವನು ಅಮಾಲೇಕ್ಯರನ್ನು ಮತ್ತು ಅವರ ಭಟರನ್ನು ಖಡ್ಗದಿಂದ ಸೋಲಿಸಿದನು.
14 BAWIPA ni hai hete hno dawk pahnim hoeh nahanlah ca thut nateh touk telah Joshua koe atipouh. Bangkongtetpawiteh, kalvan rahim vah Amalek pahnimhoehnae hah kai ni ka takhoe han telah Mosi koe atipouh.
೧೪ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.
15 Mosi ni khoungroe a sak teh BAWIPA teh ka tânae (Jehovah-nissi) doeh telah ati.
೧೫ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.
16 Bangkongtetpawiteh, Amaleknaw e kut ni BAWIPA e khoungroe e taran lah ao dawkvah, BAWIPA ni Amaleknaw teh a yungyoe hoi taran lah a tuk han telah ati.
೧೬ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.