< Jeremiah 47 >
1 Faro ni Gaza a tuk hoehnahlan e Filistinnaw e kong dawk, Profet Jeremiah koe BAWIPA e lawk teh a pha.
೧ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.
2 Atunglah hoi tui kalen teh a lawng han. Ka poum lah a lawng vaiteh, ram hoi a thung kaawm e naw pueng heh a muem han. Khopui hoi athung kaawm e taminaw pueng a khuika awh vaiteh, ram thung kaawm e taminaw pueng a kâhram awh han.
೨ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.
3 A thakasai marang ka yawng thai e hoi tarantuknae rangleng ka sawm e hoi leng a tuen sak e pawlawk dawk napanaw ni a canaw khet mang laipalah a yawng awh han.
೩ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.
4 Filistin taminaw raphoenae hnin, Taire hoi Sidon koehoi kabawmkung kaawm rae raphoenae hnin teh a pha vaiteh, bangkongtetpawiteh, BAWIPA ni kacawie Kaphtor ram koehoi ka tho e Filistinnaw hah a raphoe han.
೪ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
5 Gaza taminaw e lû a ngaw pouh han. Askelon teh a pâmit han. A ram tanghling dawk kacawirae hah, bangkongmaw namahoima na kâbouk han.
೫“ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?
6 Oe! BAWIPA e tahloi na totouh maw duem na o han. Na tabu dawk kâen nateh duem awmh.
೬ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!
7 BAWIPA ni Askelon hoi tuipui teng e ram taranlahoi kâ na poe e na thai nahlangva bangkongmaw duem ao thai han. Hawvah kâroe hanelah hruek e doeh telah ati.
೭ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”