< Mikah 7 >
1 Kai teh ka yawthoe. Kompawi tue nah khi e thaibunglung paw hoi rakhun e misur paw kacawie patetlah ka o. Ca hane kawi misur paw awm hoeh. Thaibunglung paw aluepaw hah ka doun toe.
೧ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.
2 Cathutlae naw kahmakata awh toe. Tami kalan buet touh hai awm hoeh. Tami pueng teh tami thei hanlah a pawp awh toe. Buet touh hoi buet touh tangkam dawk a ka man awh.
೨ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.
3 Yonnae sak hanelah coungkacoe lah ao awh. Bawinaw ni poehno a hei awh. Lawkcengkungnaw ni tadawngnae a ca awh. Ayâ hlak kalen e tami ni teh hounlounnae a kamnue sak. Hottelah, a kâsanu nahanlah a sak awh.
೩ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.
4 Tami kahawipoung hai pâkhingkung patetlah doeh ao. Tami kalan poung hai pâkhing takha hlak a ru. Nang ramvengnaw ni kâhruetcuet poenae hnin, nang rektapnae na poenae hnin lah a pha, hothateh, lungpuennae lah ao han.
೪ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.
5 Na imri yuem hanh. Lam ka patue e hah kâuep hanh. Na lungtabue dawk ka ip e na yu hah yuem hanh. Na kâko takhang hah cakuep lawih.
೫ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.
6 Bangkongtetpawiteh, ca ni a na pa e min a mathoe sak. Canu ni a manu thoseh, a langa ni a mani thoseh, a taran han. Ma e imthungkhunaw teh mae taran lah ao han.
೬ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.
7 Hatei, kai teh BAWIPA ka ngaihawi han. Ka rungngangnae Cathut hah ka kângue han. Cathut ni ka lawk a thai han.
೭ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.
8 Ka taran nang, kaie lathueng vah kâoupnae, lunghawinae tawn hanh. Ka rawm nakunghai bout kathâw han. A hmonae koe ka tahung nakunghai, Cathut teh kaie angnae lah ao han.
೮ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.
9 Kai teh BAWIPA koe ka yon dawkvah, na racing hoehnahlan totouh a lungkhueknae ka khang han. Kai hah angnae koe na rasa vaiteh, lannae hmuen na poe e hah ka hmu han.
೯ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು. ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ, ನನಗೆ ನ್ಯಾಯವನ್ನು ತೀರಿಸುವನು. ನನ್ನನ್ನು ಬೆಳಕಿಗೆ ತರುವನು. ಆತನ ರಕ್ಷಣಾಧರ್ಮವನ್ನು ನೋಡುವೆನು.
10 Na Cathut nâne ao telah na ka pacei e ka taran ni hote hno a hmu torei teh yeirai a po han. Ahni koe ka lung a roum han. Ahni teh lam dawk e tangdong coungroe e patetlah ao han.
೧೦“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.
11 Nange khopui rapan saknae tueng a pha han. Kâtawnnae apout han.
೧೧ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವುದು. ಆ ದಿನದಲ್ಲಿ ನಿನ್ನ ಮೇರೆಯು ದೂರದ ತನಕ ವಿಸ್ತರಿಸಿಕೊಂಡಿರುವುದು.
12 Hatnae tueng dawk, Assiria ram hoi Izip khopui hai thoseh, Izip ram hoi tuipui rahak hai thoseh, tuipui tengpam, monnaw tangkuem koehoi hai thoseh, nang koevah a tho awh han.
೧೨ಅದೇ ದಿನದಲ್ಲಿ ನಿನ್ನ ಜನರು ಅಶ್ಶೂರದಿಂದಲೂ, ಐಗುಪ್ತದ ಪಟ್ಟಣಗಳಿಂದಲೂ ನಿನ್ನ ಬಳಿಗೆ ಕೂಡಿ ಬರುವರು. ಸಮುದ್ರದಿಂದ ಸಮುದ್ರದವರೆಗೆ, ಪರ್ವತದಿಂದ ಪರ್ವತದವರೆಗೆ ಅಂತು ಐಗುಪ್ತದಿಂದ ಯೂಫ್ರೆಟಿಸ್ ನದಿಯವರೆಗೂ ಚದುರಿರುವ ನಿನ್ನ ಸಕಲ ಜನರು ನಿನ್ನನ್ನು ಸೇರುವರು.
13 Hottelah, ao hoehnahlan khoca ramca naw e yonnae kecu dawk ram teh tami kingkadi lah ao han.
೧೩ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.
14 BAWIPA e tami tie a huiko awm laipalah Karmel mon dawk kaawm e râw tuhu hah tukhoumnae sonron hoi khoum la, ayan e patetlah Bashan ram hoi Gilead ram dawk pawngpa sak haw.
೧೪ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.
15 Izip ram hoi na tâconae hnin dawk na hmu e patetlah kângairu hnonaw bout na patue han.
೧೫ನೀನು ಐಗುಪ್ತದೇಶದೊಳಗಿಂದ ಪಾರಾಗಿ ಬಂದ ಕಾಲದಲ್ಲಿ ನಾನು ತೋರಿಸಿದಂತೆ ಅದ್ಭುತಗಳನ್ನು ತೋರಿಸುವೆನು.
16 Miphunnaw ni ka taminaw dawk kaawm e bahu a hmu awh teh, lungpuen laihoi amamae pahni hah kut hoi a tabuem awh vaiteh a hnâtâdeng awh han.
೧೬ಜನಾಂಗಗಳವರು ನೋಡಿ ತಮ್ಮ ಮಹಾ ಶಕ್ತಿಗೂ ನಾಚಿಕೆಪಡುವರು. ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವರು. ಅವರ ಕಿವಿ ಕೇಳದಿರುವುದು.
17 Tahrun patetlah vaiphu a palem teh, tangraet patetlah a khu dawk hoi pâyaw laihoi a tâco awh han. Maimae BAWIPA Cathut hai thoseh, nang hai thoseh a taki awh han.
೧೭ಹಾವಿನಂತೆ ಧೂಳನ್ನು ನೆಕ್ಕುವರು. ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು.
18 Yon dawk hoi hlout sak e, kacawie râw, taminaw e sakpayon e hah ka ngaithoum e, pahrennae hoi ka kawi ni teh lung pou ka khuek hoeh e Cathut patetlah apimaw kaawm.
೧೮ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.
19 BAWIPA ni maimanaw hah bout na pahren teh, maimae yonnae pueng hah rep a coungroe han. Maimae yonnae pueng kadung poung e tuipui dawk koung a tâkhawng han.
೧೯ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. ನಮ್ಮ ಅಪರಾಧಗಳನ್ನು ಅಣಗಿಸುವವನು. ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ.
20 Ayan hoi mintoenaw koe thoe na bo e patetlah, Jakop koe lawkkatanag, Abraham koe pahren lungmanae teh na poe han.
೨೦ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.