< 加拉太书 5 >
1 基督让我们自由,所以我们可以拥有真正的自由。要站稳脚跟,不要再被奴役的枷锁压垮。
೧ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.
2 我保罗在这里直截了当地告诉你:如果你们依靠割礼的方式,基督对你们绝对没有益处。
೨ನೋಡಿರಿ, ಪೌಲನೆಂಬ ನಾನು ನಿಮಗೆ ಹೇಳುತ್ತೇನೆ, ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.
3 让我再说一遍:每个受割礼的人都必须遵守全部律法。
೩ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.
4 如果你们认为自己可以通过律法就能行正义,然后放弃基督——你们已经放弃了恩典。
೪ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.
5 因为我们通过灵表示相信,并满怀期待地等待灵让我们变得正直良善。
೫ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.
6 因为对基督耶稣而言,受割礼或未受割礼都无济于事,只有通过爱表达的信任才最重要。
೬ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.
7 你们过去做得很好!是谁妨碍并阻止你们相信真相?
೭ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು?
೮ಈ ಮನವೊಲಿಕೆಯು ನಿಮ್ಮನ್ನು ಕರೆದಾತನಿಂದ ಹುಟ್ಟಿದ್ದಲ್ಲ.
೯ಸ್ವಲ್ಪ ಹುಳಿಯಿಂದ ಕಣಕವೆಲ್ಲಾ ಹುಳಿಯಾಗುವುದು.
10 我相信主,你们不会改变自己的想法,让你们困惑的那个人,无论他是谁,必会面对后果。
೧೦ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತಾಗಿ ನನಗೆ ಭರವಸೆ ಉಂಟು. ನಿಮ್ಮಲ್ಲಿ ಬೇಧವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ, ಅವನು ದಂಡನೆಯನ್ನು ಅನುಭವಿಸುವನು.
11 兄弟姐妹们,如果我仍然提倡割礼,为什么还要受压迫呢?如果那是真相,就不会再有如此冒犯众人的十字架问题。
೧೧ಸಹೋದರರೇ, ನಾನಾದರೋ ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ನನಗೆ ಹಿಂಸೆಯಾಗುವುದಾದರೂ ಯಾಕೆ? ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ?
12 如果给你们带来麻烦的人能比割礼更进一步,去阉割自己就好了!
೧೨ನಿಮ್ಮನ್ನು ಕಳವಳಪಡಿಸುವವರು ತಮ್ಮನೇ ತಾವು ಅಂಗಚ್ಛೇದನೆಯನ್ನಾದರೂ ಮಾಡಿಕೊಂಡರೆ ಚೆನ್ನಾಗಿತ್ತು.
13 我的兄弟姐妹们,呼唤你们追寻自由!但不要用自由为借口来放纵你们有罪的人性——而是要在爱中互相服务。
೧೩ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
14 因为有一条诫命概括了整个律法:“要爱人如己。”
೧೪“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.
15 但是如果你攻击并相互拉扯,注意不要完全摧毁自己!
೧೫ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.
16 我建议你们跟随灵而行。不要满足你有罪的人性欲望。
೧೬ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.
17 因为有罪的人性欲望与灵对立,灵的愿望与有罪人性相对立。他们相互争斗,所以你们不能做自己想做的事。
೧೭ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.
೧೮ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ಧರ್ಮಶಾಸ್ತ್ರಕ್ಕೆ ಅಧೀನರಲ್ಲ.
೧೯ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,
20 拜偶像、巫术、仇恨、对抗、嫉妒、愤怒、自私的野心、纷争、异端、
೨೦ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,
21 嫉妒、醉酒、大吃大喝等等。我之前警告过你们,现在再次警告:任何做出这种行为的人,都无法继承上帝之国。
೨೧ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
22 但灵会结下善果,比如仁爱、喜乐、和平、忍耐、恩慈、良善、信任、
೨೨ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
23 温柔和克制等,而且没有任何律法禁止这些事情!
೨೩ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
24 那些属于基督耶稣的人,已经将他们有罪的人性以及全部有罪的激情和欲望钉在了十字架上。
೨೪ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.
೨೫ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.
೨೬ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.