< 歷代志上 20 >
1 [戰敗阿孟]一年復始,正當諸王出征的季節,約阿布統率精兵,蹂躪了阿孟子民的地方,然後去包圍了辣巴,當時達味留在那耶路撒冷。約阿布攻陷了辣巴,加以破壞。
೧ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
2 達味從米耳公的頭上,取下他的冠冕來,發現有一點「塔冷通」重的金子,上面還有一塊寶石。達味將這塊寶石戴在自己頭上;並由城中運走了大批的戰利品。
೨ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು.
3 至於城內的居民,達味將他們帶走,叫他們拉鋸、持鎚、操斧工作。達味如此對待了阿孟子民所有的城市,然後率領全軍回了耶路撒冷。[三敗培肋舍特]
೩ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು.
4 這些事以後,右與培肋舍特人在革則爾發生了戰事。胡沙人息貝開擊殺了辣法巨人的後裔息派,他們便投降歸順了。
೪ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು.
5 以後,又與培肋舍特交戰,雅依爾的兒子厄耳哈難擊殺了加特人哥肋雅的兄弟拉赫米。這人的長矛粗如織布機的橫軸。
೫ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
6 此後,在加特又起了戰事,在那裏有一巨人,兩手各有六指,兩足亦各有六趾,共有二十四個,也是辣法巨人的後裔。
೬ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು.
7 由於他辱罵了以色列,達味的兄弟史默亞的兒子約納堂將他殺死:
೭ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.
8 這些人全是加特城辣法巨人的子孫,都喪身在達味和他的臣僕手裏。
೮ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.