< 約翰一書 1 >
1 論到那從起初就有的生命的聖言,就是我們聽見過,我們親眼看見過,瞻仰過,以及我們親手摸過的生命的聖言--
೧ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.
2 這生命已顯示出來,我們看見了,也為他作證,且把這原與父同在,且已顯示給我們的永遠的生命,傳報給你們-- (aiōnios )
೨ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ. (aiōnios )
3 我們將所見所聞的傳報給你們,為使你們也同我們相通;原來我們是同父和他的子耶穌基督相通的。
೩ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.
4 我們給你們寫這些事,是為叫我們的喜樂得以圓滿。
೪ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ.
5 我們由他所聽見,而傳報給你們的,就是這個信息:天主是光,在他內沒有一點黑暗。
೫ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.
6 如果我們說我們與他相通,但仍在黑暗中行走,我們就是說謊,不履行真理。
೬ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.
7 但如果我們在光中行走,如同他在光中一樣,我們就彼此相通,他聖子耶穌的血就會洗淨我們的各種罪過。
೭ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
8 如果我們說我們沒有罪過,就是欺騙自己,真理也不在我們內。
೮ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.
9 但若我們明認我們的罪過,天主既是忠信正義的,必赦免我們的罪過,並洗淨我們的各種不義。
೯ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
10 如果我們說我們沒有犯過罪,我們就是拿他當說謊者,他的話就不在我們內。
೧೦ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.