< 撒母耳記上 10 >
1 撒慕爾拿出油具,把油倒在他頭上,口吻他說:「不是上主給你傅油,立你作他百姓以色列的首領嗎﹖是你要統治上主的百姓,從四周的仇人手中解救百姓。這是上主給你傅油立你為自己產業首領的先兆:
೧ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
2 今天你離開我以後,在本雅明邊境辣黑耳的墓旁,正午你會遇見兩個人,他們要對你說:你去找的那些母驢,已找到了。為母驢的事,你父親早已忘懷,現在他卻為你們著急說:為我的兒子我該怎麼辦﹖
೨ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು.
3 你從那裏再往前走,來到德波辣的橡樹旁時,要遇見三個上貝特耳去敬禮天主的人:一人牽著三隻小山羊,一人拿著三張餅,一人帶著一皮囊酒。
೩ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.
4 他們要向你請安,給你兩張餅,你要從他們手中接過來。
೪ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.
5 此後,你要往天主的基貝亞去,──在那裏駐有培肋舍特人的官吏,──你一進城,就會遇見一群正從高丘下來的先知,在他們前面有彈弦的、有打鼓的、有吹笛的、有彈琴的、他們正在出神說妙語。
೫ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.
6 這時,上主的神會突然降在你身上,你也要同他們一起出神說妙語;你要變成另一個人。
೬ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.
7 當你遇見這些現象時,你應見機行事,因為天主必與你同在。
೭ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.
8 你要在我以先下到基耳加去;我要下到你那裏去奉獻全燔祭,宰殺和平祭犧牲。你要等候七天,直到我到了你那裏,告訴你當作的事。」
೮ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು.
9 當他轉身離開撒慕爾時,天主就改變了他的心,那一切先兆在當天都實現了。
೯ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು.
10 他從那裏來到基貝亞時,果然有一群先知迎面而來,天主的神突然降在他身上,他就在他們中間出神說起妙語來。
೧೦ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.
11 凡先前認識他的人,見他同先知們一起出神說妙語,就彼此說:「克士的兒子遭遇了什麼事﹖怎麼,連撒烏耳也列在先知之中﹖」
೧೧ಅವನು ಪರವಶನಾಗಿ ಮಾತನಾಡುವುದನ್ನು ಅವನ ಪರಿಚಿತರು ಕಂಡು ತಮ್ಮ ತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೋ?” ಎಂದು ಮಾತನಾಡಿಕೊಳ್ಳುತ್ತಿದ್ದರು.
12 他們中有人回答說:「他們的父親是誰﹖」因此有一句俗話說:「怎麼,連撒烏耳也列在先知中嗎﹖」
೧೨ಆಗ ಆ ಸ್ಥಳದವನೊಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಸಂಗತಿಯಿಂದ “ಸೌಲನು ಪ್ರವಾದಿಗಳಲ್ಲಿದ್ದಾನೆ” ಎಂಬ ವಿಷಯ ಹುಟ್ಟಿತು.
೧೩ಅವನು ಪ್ರವಾದಿಸಿದ ನಂತರ ಬೆಟ್ಟದ ಮೇಲಿದ್ದ ಯಜ್ಞವೇದಿಯ ಬಳಿಗೆ ಬಂದನು.
14 撒烏耳的一個叔父問他和他的僕人說:「你們往那裏去了﹖」撒烏耳回答說:「找母驢去了;我們看沒找著,就到了撒慕爾那裏。」
೧೪ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಲು ಅವನು, “ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದ್ದರಿಂದ ಸಮುವೇಲನ ಬಳಿಗೆ ಹೋದೆವು” ಅಂದನು.
15 撒烏耳的叔父向他說:「請你告訴我,撒慕爾給你說了些什麼﹖」
೧೫“ಸಮುವೇಲನು ಏನು ಹೇಳಿದನು?” ಎಂದು ಚಿಕ್ಕಪ್ಪನು ಕೇಳಲು
16 撒烏耳回答他叔父說:「他告訴我們,母驢的確已經找到了。」但撒慕爾所說有關立君王的話,撒烏耳卻沒有告訴他。
೧೬ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.
೧೭ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು.
18 對以色列子民說:「上主以色列的天主這樣說:是我領以色列出離了埃及,從埃及人和一切壓迫你們的國家中拯救了你們。
೧೮ಆತನು ಅವರಿಗೆ, ಇಸ್ರಾಯೇಲ್ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.
19 然而今天你們拋棄了你們的天主,雖然他從你們一切災難和壓迫中解救了你們,你們卻說:不,你該給我們立一位君王! 現今你們要按照你們的支派和家族到上主面前來。」
೧೯ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.
20 撒慕爾就叫以色列眾支派上前來,本雅明支派中了籤;
೨೦ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು.
21 他叫本雅明支派按照家族上前來,瑪特黎家族中了籤;他叫瑪特黎家族各個男子上前來,克士的兒子撒烏耳中了籤,大家便尋找他,卻沒有找著。
೨೧ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟುಬಿದ್ದಿತು. ಆದರೆ ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.
22 他們再求問上主說:「這人到這裏來了沒有﹖」上主回答說:「看,他隱藏在行李中。」
೨೨ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು.
23 人們就趕快去將他從那裏請出來,他站在百姓當中,高出眾人一肩。
೨೩ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು.
24 撒慕爾就向民眾說:「你們看了上主所揀選的嗎﹖在全人民中,沒有一人可與他相比。」眾百姓就歡呼說:「君王萬歲! 」
೨೪ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.
25 撒慕爾向民眾說明了君王的權利,並寫在書卷上,放在上主面前。然後撒慕爾打發民眾各自回了家。
೨೫ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.
26 撒烏耳也回基貝亞本家去了;有些為天主所感動的勇士也跟他去了,
೨೬ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.
27 但有些無賴漢卻說:「這人怎能拯救我們﹖」就看不起他,也未給他送禮。
೨೭ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.