< 撒母耳記上 5 >
1 培肋舍特人劫走了天主的約櫃,從厄本厄則爾運到阿市多得,
೧ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ
೨ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.
3 第二天清早,阿市多得人起來,見達貢傾倒了,在上主的約櫃面前,俯伏在地;他們把達貢豎起安置在原處。
೩ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.
4 但第二天清早人們起來,見達貢又傾倒了,仍在上主的約櫃面前,俯伏在地,達貢的頭和雙手都斷在門檻上,只留下了他的魚身。──
೪ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;
5 因此,達貢的司祭和進達貢廟的人,都不敢踏阿市多得的廟的門檻,直到今天。
೫ಆದ್ದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ಮತ್ತು ದಾಗೋನನ ಮನೆಗೆ ಬರುವವರೆಲ್ಲರೂ ಅಷ್ಡೋದಿನ ಗುಡಿಯ ಹೊಸ್ತಿಲನ್ನು ಇಂದಿಗೂ ತುಳಿಯದಿರುವುದಕ್ಕೆ ಇದೇ ಕಾರಣ.
6 上主的手重重地壓制了阿市多得人,威嚇他們,使阿市多得和附近的人都生了毒瘡。
೬ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.
7 阿市多得人一見這樣,就說:「別讓以色列天主的約櫃留在我們這裏,因他的手重重地壓制了我們的神達貢。」
೭ಅಷ್ಡೋದಿನ ಜನರು ಅದನ್ನು ನೋಡಿ, “ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ” ಎಂದು ಹೇಳಿ
8 遂打發人召集了培肋舍特人所有的酋長來到他們那裏,向他們說:「對以色列天主的約櫃我們該怎麼辦﹖」他們就回答說:「把以色列天主的約櫃送到加特去! 」他們遂把以色列天主的約櫃送到加特去了。
೮ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.
9 他們把約櫃送去以後,上主的手又壓制那座城,使他們發生了很大的恐慌,因為上主打擊了城中的人,無論老幼,都患了毒瘡。
೯ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.
10 於是加特人又把天主的約櫃送到厄刻龍;天主的約櫃一到了厄刻龍,厄刻龍人就喊說:「人把以色列天主的約櫃送到我們這裏,是為殺害我們和我們的百姓! 」
೧೦ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.
11 遂立刻派人召集培肋舍特所有的酋長來,向他們說,「你們把以色列天主的約櫃送走,送回原處,免得殺害我們和我們的百姓。」因為全城的人死的太多了,天主的手重重地壓制了那地方。
೧೧ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.
12 凡沒有死的人,都患了毒瘡,因此城中哀號之聲,上達於天。
೧೨ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.