< 撒母耳記上 8 >

1 撒慕爾年老的時候,立了他的兩個兒子作以色列的民長。
ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.
2 長子名叫約厄耳,次子名叫阿彼雅,同在貝爾舍巴作民長。
ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು.
3 但是他這兩個兒子不走他所走的路,卻貪圖厚利,接受賄賂,歪曲正理。
ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.
4 以色列眾長老便聯合起來,往辣瑪去見撒慕爾,
ಆದ್ದರಿಂದ ಇಸ್ರಾಯೇಲರ ಹಿರಿಯರೆಲ್ಲರೂ ಸೇರಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು
5 對他說:「看,你已經老了,你的兒子們不走你所走的路。如今請你給我們立一位君王治理我們,如同各國一樣。」
ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.
6 撒慕爾聽到他們要求說:「請給我們立一位君王治理我們,」大為不悅,便去祈求上主。
ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು.
7 上主對撒慕爾說:「凡民眾向你所說的話,你都要聽從,因為他們不是拋棄你,而是拋棄我作他們的君王。
ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.
8 自從我領他們出離埃及直到今日,凡他們做的,無非是拋棄我而事奉別的神;他們現在也這樣來對待你。
ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ.
9 好罷! 你就聽從他們的要求,但必須清楚警告他們,要他們明瞭那統治他們的君王所享有的權利。」
ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.
10 撒慕爾把上主的一切話,轉告給那向他要求君王的人民,
೧೦ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ,
11 說:「那要統治你們的君王所享有的權利是:他要徵用你們的兒子,去充當車夫馬夫,在他的車前奔走:
೧೧“ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.
12 委派他們做千夫長、百夫長、五十夫長;令他們耕種他的田地,收割他的莊稼,替他製造作戰的武器和戰車的用具;
೧೨ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.
13 要徵用你們的女兒為他配製香料,烹調食物;
೧೩ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.
14 要拿你們最好的莊田、葡萄園和橄欖林,賜給他的臣僕;
೧೪ನಿಮ್ಮ ಉತ್ತಮವಾದ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.
15 徵收你們莊田和葡萄園出產的十分之一,賜給他的宦官和臣僕;
೧೫ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು.
16 使用你們的僕婢和你們最好的牛驢,替他作工;
೧೬ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು.
17 徵收你們的羊群十分之一;至於你們自己,還應作他的奴隸。
೧೭ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು. ನೀವು ಅವನಿಗೆ ದಾಸರಾಗಿರಬೇಕು.
18 到那一天,你們必要因你們所選的君王發出哀號;但那一天,上主也不理你們了。」
೧೮ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.
19 但是,人民不願聽從撒慕爾的話卻對他說:「不! 我們非要一位君王管理我們不可。
೧೯ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;
20 我們也要像一般異民一樣,有我們的君王來治理我們,率領我們出征作戰。」
೨೦ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು.
21 撒慕爾聽見百姓所說的這一切話,就轉告給上主聽。
೨೧ಸಮುವೇಲನು ಜನರ ಈ ಎಲ್ಲಾ ಮಾತುಗಳನ್ನು ಯೆಹೋವನಿಗೆ ತಿಳಿಸಲಾಗಿ
22 上主對撒慕爾說:「你聽從他們的話,給他們一位君王罷! 」撒慕爾就吩咐以色列人說:「你們各自暫回本城去。」
೨೨ಆತನು ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು” ಎಂದನು. ಆಗ ಸಮುವೇಲನು ಇಸ್ರಾಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ” ಎಂದು ಅಪ್ಪಣೆಕೊಟ್ಟನು.

< 撒母耳記上 8 >