< 哥林多後書 2 >
೧ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.
2 因為如果我使你們憂苦,那麼除了那由我而受憂苦的人外,又有誰可使我歡樂呢﹖
೨ನಾನೇ ನಿಮ್ಮನ್ನು ದುಃಖಪಡಿಸಿದರೆ, ನನ್ನನ್ನು ಸಂತೋಷಪಡಿಸುವವರು ಯಾರು? ನನ್ನಿಂದ ದುಃಖಕ್ಕೆ ಒಳಗಾದ ನೀವೇ ಅಲ್ಲವೇ?
3 為此我寫了那樣的信,正是為避免我來到的時候,那本該叫我喜樂的,反而叫我憂苦,因為我相信你們眾人都我的喜樂為你們眾人的喜樂。
೩ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ.
4 我在萬般的痛心憂苦中,流著許多淚給你們寫了信,並不是為叫你們憂苦,而是為叫你們認清我對你們所有的愛,多麼卓絕。
೪ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ.
5 如果有人使人憂苦,他不是使我憂苦,而是使你們眾人,至少使一部份,免得我說得過火。
೫ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ.
೬ಇಂಥವನಿಗೆ ನಿಮ್ಮಲ್ಲಿ ಬಹುಜನರಿಂದಾದ ಆ ಶಿಕ್ಷೆಯೇ ಸಾಕು.
7 免得你們寬恕勸慰他,反倒更好,免得他一時為過度的憂苦所吞噬。
೭ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು.
೮ಆದ್ದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ತೋರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
9 其實也正是為此我才寫了那信,為要考驗你們,看你們是否在一切事上都服從命令﹖
೯ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಹೀಗೆ ಬರೆದೆನು.
10 你們寬恕誰什麼,我也寬恕,因為我所寬恕的──如果我曾寬恕過什麼──是為你們的緣故,當著基督的面而寬恕的,
೧೦ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.
11 免得我們讓撒殫佔了便宜,因為我們不是不知道衪的心意。
೧೧ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.
12 當我為宣講基督福音來列特洛阿時,雖然給我開了為主工作的大門,
೧೨ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು.
13 但沒有遇到我的弟兄弟鐸,我的心神得不到安寧,遂辭別他們,到馬其頓去了。
೧೩ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.
14 感謝天主時常使我們在基督內參與凱旋的行列,並藉我們在各處播揚認識基督的芬芳;
೧೪ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.
15 因為我們就是獻與天主的基督馨香,在得救的人中是,在喪亡的人中也是;
೧೫ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.
16 但為後者,是由死入死的的芬芳;為前者,卻是由生入生的芬芳。對這樣的工作,誰夠資格呢﹖
೧೬ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?
17 至少我們不像許多人為利而混亂了天主的道理;我們宣講乃是出於真誠,出於天主,當著天主的面,在基督內。
೧೭ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.