< 使徒行傳 20 >

1 動平息後,保祿便派人去叫門徒們來,勸勉一番,就辭別他們,出發往馬其頓去。
ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.
2 他走遍了那一帶地方,多方勸勉信徒後,就到了希臘,
ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.
3 在那裏住了三個月。當他正要乘船去敘利亞時,猶太人卻設計陷害他,他遂決意經馬其頓回去。
ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.
4 伴隨他【到亞細亞】的,有貝洛雅人丕洛的兒子索帕特爾,得撒洛尼人阿黎斯塔苛和色貢多,德爾貝人加約和弟茂德,還有亞細亞人提希苛和特洛斐摩。
ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.
5 這些人先去了,在特洛阿等候我們;
ಅವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾಯುತ್ತಿದ್ದರು
6 至於我們,無酵節後,纔從斐理伯啟航,直到第五天纔抵達特洛阿,到了他們那裏,在那裏住了七天。
ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ‍ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.
7 一週的第一天,我們相聚擘餅時,保祿便向民眾講道,因為他第二天要走,遂把話拖長,直到半夜。
ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.
8 在我們聚會的那座樓上,有許多燈。
ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
9 有個青年名叫厄烏提曷,坐在窗台上,因保祿講道稍長,就沉沉欲睡;及至熟睡後,就從三樓墜下;扶起來時,已經死了。
ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.
10 保祿下來,伏在他身上,抱住他說:「你們不要慌亂,因為他的靈魂還在他身上呢。」
೧೦ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು.
11 遂上去,擘開餅,吃了。又談了很久,直到天亮,這纔出發。
೧೧ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.
12 他們把活了的孩子領去,都非常快慰。
೧೨ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು.
13 我們上船先行,直向阿索航去,要從那裏接保祿上船;因為他這樣規定,自己要走陸路。
೧೩ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.
14 當他在阿索與我們會合時,我們便接他上船,來到米提肋乃。
೧೪ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನೆ ಪಟ್ಟಣಕ್ಕೆ ಹೊರಟೆವು.
15 從那裏航行,次日到了希約對面,次日再向撒摩駛去,次日就到了米肋托。
೧೫ಅಲ್ಲಿಂದ ಹೊರಟು ಮರುದಿನ ಖೀಯೊಸ್‍ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು.
16 因為保祿已決定駛過厄弗所,免得在亞細亞耽擱時間;原來他想趕程前行,假如可能,願在耶路撒冷過五旬節。
೧೬ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
17 保祿從米肋托打發人到厄弗所,請教會的長老來。
೧೭ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.
18 他們到了他那裏,他便向他們說:「你們知道:自從我來到亞細亞的第一天起,與你們在一起,始終怎樣為人,
೧೮ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.
19 怎樣以極度的謙遜,含著眼淚,歷經猶太人為我所設的陰謀,而忠信事奉主。
೧೯ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.
20 你們也知道:凡有益於你們的事,我沒有一樣隱諱而不傳給你們的,我常在公眾前,或挨家教訓你們,
೨೦ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ
21 不論向猶太人或希臘人,我常苦勸你們悔改,歸向天主,並信從吾主耶穌。
೨೧ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
22 看,現在,我為聖神所束縛,必須往耶路撒冷去,在那裏要遇到什麼事,我不知道;
೨೨ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.
23 我只知道聖神在各城中向我指明說:有鎖鏈和患難在等待我。
೨೩ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.
24 可是,只要我完成了我的行程,完成了受自主耶穌叫我給天主恩寵的福音作證的任務,我沒有任何理由,珍惜我的性命。
೨೪ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
25 我曾在你們中往來,宣講了天主的國,但現在,我知道你們眾人以後不得再見我的面了。
೨೫ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.
26 因此,我今天向你們作證:對於眾人的血,我是無罪的,
೨೬ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.
27 因為天主的一切計劃,我都傳告給你們了,毫無隱諱。
೨೭ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.
28 聖神既在全群中立你們為監督,牧養天主用自己的血所取得的教會,所以你們要對你們自己和整個羊群留心。
೨೮ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
29 我知道在我離開之後,將有兇暴的豺狼進到你們中間,不顧惜羊群,
೨೯ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.
30 就是在你們中間,也要有人起來講說謬論,勾引門徒跟隨他們。
೩೦ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
31 因此,你們要警醒,記住我三年之久,日夜不斷地含淚勸勉了你們每一個人。
೩೧ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
32 現在,我把你們托付給天主和他恩寵之道,他能建立你們,並在一切聖徒中,賜給你們嗣業。
೩೨ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.
33 我沒有貪圖過任何人的金銀或衣服。
೩೩ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.
34 你們自己知道:這雙手供應了我,和同我一起的人的需要。
೩೪ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.
35 在各方面我都給你們立了榜樣,『施予比領受更為有福。』」
೩೫ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.
36 說完這些話,便跪下同眾人祈禱。
೩೬ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.
37 眾人都大哭起來,並伏在保祿的頸項上,口親他。
೩೭ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.
38 他們最傷心的,是為了保祿說的這句話:以後他們不得再見他的面了。他們便送他上了船。
೩೮ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.

< 使徒行傳 20 >