< 傳道書 8 >

1 有誰相似智者,有誰會解釋事理﹖智慧使人的面容煥發,使嚴肅的容貌變為溫和。
ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.
2 為了向天主起的誓,你應遵守君王的命令;
ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ.
3 你不可由他面前倉猝離去,也不可行惡,因為凡他喜歡的事,都可隨意執行。
ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.
4 原來君王的話具有威力,誰敢向他說:「你做什麼﹖」
ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.
5 遵守誡命的,不會遇到災禍;智者的心能辨識時機和審斷。
ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
6 的確,事事都有定時和定案;但重大的負擔仍壓在人身上,
ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.
7 因為人不知道將來要發生什麼事,有誰能告訴他,何時要發生﹖
ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?
8 沒有人有權將生氣保留不失,也沒有人能支配死期,戰場上沒有人能退役,邪惡救不了作惡的人。
ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.
9 我看見了這一切,專心研究在太陽下所行的一切事:有時統治人的人,自受其害;
ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.
10 有時我看見惡人被抬去安葬,而行義的人卻離開聖處,而在城中被人遺忘:這也是虛幻。
೧೦ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ.
11 因為懲惡的定案未有迅速執行,世人因此充滿了行惡的偏向。
೧೧ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.
12 惡人雖百次行惡,仍享長壽,姑且不論;我確實知道,那敬畏天主的人,因他們在天主前起敬起畏,必得幸福;
೧೨ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
13 而惡人必得不到幸福,他的時日如影,決不能久長,因為他不敬畏天主。
೧೩ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.
14 在世上還有一件虛幻的事:就是義人所遭遇的,反如惡人所應得的;而惡人所遭遇的,反如義人所應得的;我遂說:這也是虛幻。
೧೪ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.
15 為此,我稱讚快樂,因為在太陽下,人除了吃喝行樂外,別無幸福;因為這是人在天主賞他在太陽下的一生歲月內,從他的勞苦中,所獲得的幸福。
೧೫ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.
16 當我專心追求智慧,觀察人在世上,連黑夜白日都不能閉目安眠,所行的工作時,
೧೬ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,
17 我面對天主的一切作為,發覺人決不能知道在太陽下所發生的一切事。人雖然努力研究,終歸無法得知;縱然有智者以為知道了,仍是一無所知。
೧೭ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.”

< 傳道書 8 >