< 出埃及記 11 >

1 上主對梅瑟說:「還有一種災禍,我要降在法朗和埃及人身上,以後他必要釋放你們離開此地;他釋放你們的時候,是驅逐你們離開此地。
ಯೆಹೋವನು ಮೋಶೆಗೆ, “ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು.
2 你要講給百姓聽,叫他們男女各向自己的鄰舍要求金銀之物。」
ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು.
3 上主使百姓在埃及人前蒙恩,同時梅瑟在埃及國,在法朗的臣僕和百姓眼中,也成了偉大的人物。
ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.
4 梅瑟說:「上主這樣說:半夜時,我要走遍埃及。
ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.
5 凡埃及國,從坐寶位的法朗的長子,直到推磨的婢女的長子,以及牲畜的一切頭胎,都要死亡。
ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.
6 埃及全國要有大哀號,是從前沒有,以後也不會再有的哀號。
ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ.
7 至於以色列子民,連狗也不敢向他們和他們的牲畜吠叫,為叫你們知道,上主已將以色列子民和埃及人分開,
ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’
8 以後你的這些臣僕全都要到我跟前,跪下哀求我說:你和那跟從你的百姓都去罷! 然後我才離去。」梅瑟氣憤憤地離開法郎出去了。
ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.
9 上主對梅瑟說:「法朗不聽從你們,使我的奇蹟在埃及國多起來。」
ಯೆಹೋವನು ಮೋಶೆಗೆ, “ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು.
10 梅瑟和亞郎在法朗面前行了這些奇蹟;但是上主使法朗的心硬,仍不肯放以色列子民離開自己的國家。
೧೦ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು.

< 出埃及記 11 >