< 出埃及記 3 >
1 那時梅瑟為他的岳父,米德楊的司祭耶特洛放羊;一次他趕羊往曠野裏去,到了天主的山曷勒布。
ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
2 上主的使者叢荊棘叢火焰中顯現給他;他遠遠看見那荊棘為火焚燒,而荊棘卻沒有燒毀。
ಆಗ ಯೆಹೋವ ದೇವರ ದೂತನು ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ನೋಡಿದಾಗ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು ಆದಾಗ್ಯೂ ಪೊದೆಯು ಸುಟ್ಟು ಹೋಗಲಿಲ್ಲ.
3 梅瑟心裏說:「我要到那邊看看這個奇異的現象,為什麼荊棘燒不毀﹖」
ಆಗ ಮೋಶೆಯು, “ನಾನು ಹೋಗಿ ಆ ವಿಚಿತ್ರ ನೋಟವನ್ನೂ ಪೊದೆಯು ಏಕೆ ಸುಟ್ಟುಹೋಗಲಿಲ್ಲವೆಂಬುದನ್ನೂ ನೋಡುವೆನು,” ಎಂದುಕೊಂಡನು.
4 上主見他走來觀看,天主便由荊棘叢中叫他說:「梅瑟! 梅瑟! 」他答說:「我在這裏。」
ಅವನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವ ದೇವರು ನೋಡಿದಾಗ, ದೇವರು ಪೊದೆಯೊಳಗಿಂದ ಅವನಿಗೆ, “ಮೋಶೇ, ಮೋಶೇ,” ಎಂದು ಕರೆದರು. ಆಗ ಅವನು, “ನಾನು ಇಲ್ಲಿ ಇದ್ದೇನೆ,” ಎಂದನು.
5 天主說:「不可到這邊來! 將你腳上的鞋脫下,因為你所站的地方是聖地。」
ಆಗ ದೇವರು ಅವನಿಗೆ, “ಇಲ್ಲಿ ಸಮೀಪಕ್ಕೆ ಬರಬೇಡ, ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ,” ಎಂದರು.
6 又說:「我是你父親的天主,亞巴郎的天主,依撒格的天主,雅各伯的天主。」梅瑟因為怕看見天主,就把臉遮起來。
ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
7 上主說:「我看見我的百姓在埃及所受的痛苦,聽見她們因工頭的壓迫而發出的哀號;我以注意到他們的痛苦。
ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
8 所以我要下去整救百姓脫離埃及人的手,領他們離開那地方,到一個美麗寬闊的地方,流奶流蜜的地方,就是客納罕人、赫特人、阿摩黎人、培黎齊人、希威人和耶步斯人的地方。
ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
9 現在以色列子民的哀號已達於我前,我也親自看見埃及人加於他們的壓迫。
ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.
10 所以你來,我要派你到法朗那裏,率領我的百姓以色列出離埃及。」
ಆದ್ದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲರಾದ ನನ್ನ ಜನರನ್ನು ನೀನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಬೇಕು,” ಎಂದರು.
11 梅瑟對天主說:「我是誰,竟敢去見法朗,率領以色列子民出離埃及﹖」
ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗಿ, ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತರುವುದಕ್ಕೆ ನಾನು ಎಷ್ಟರವನು?” ಎಂದನು.
12 上主回答說:「我必與你同在;幾時你將我的百姓由埃及領出來,你們要在這座山上崇拜天主,你要以此作為我派你的憑據。」啟示上主的名字
ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.
13 梅瑟對天主說:「當我到以色列子民那裏,向他們說:你們主先的天主打﹖我到你們這裏來時,他們必要問我:他叫什麼名字﹖我要回答他們什麼呢﹖」
ಅದಕ್ಕೆ ಮೋಶೆಯು ದೇವರಿಗೆ, “ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಹೇಳುವಾಗ ಅವರು ನನಗೆ, ‘ಅವರ ಹೆಸರು ಏನು?’ ಎಂದು ಕೇಳಿದರೆ, ನಾನು ಅವರಿಗೆ ಏನು ಹೇಳಬೇಕು?” ಎಂದನು.
14 天主向梅瑟說:「我是自有者。」又說:「你要這樣對以色列子民說:那「自有者」打發我到你們這裏來。」
ಆಗ ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ. ‘ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು,” ಎಂದರು.
15 天主又對梅瑟說:「你要這樣對以色列子民說:上主,你們祖先的天主,亞巴郎的天主,依撒格的天主和雅各伯的天主,打發我到你們這裏來,這是我的名字,直到永遠;這是我的稱號,直到萬世。
ಮತ್ತೆ ದೇವರು ಮೋಶೆಗೆ, “‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.
16 你去召集以色列的長老,對他們說:上主,你們祖先的天主,亞巴郎的天主,依撒格的天主和雅各伯的天主顯現給我說:我實在注意到你們和你們在埃及所遭遇到的一切。
“ನೀನು ಹೋಗಿ ಇಸ್ರಾಯೇಲ್ ಹಿರಿಯರನ್ನು ಕೂಡಿಸಿ ಅವರಿಗೆ, ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನಗೆ ಕಾಣಿಸಿಕೊಂಡು ಹೀಗೆಂದಿದ್ದಾರೆ: ನಾನು ನಿಮ್ಮನ್ನೂ ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲವನ್ನೂ ನಿಶ್ಚಯವಾಗಿ ನೋಡಿದ್ದೇನೆ.
17 因此我決意領你們擺脫埃及人的壓迫,到客納罕人,赫特人,阿摩黎人,培黎齊人,希威人和耶步斯人的地方,即流奶流蜜的地方。
ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.
18 他們必會聽你的話。你要同以色列的長老去見埃及王,對他說:上主,希伯來人的天主遇見了我們;現今請讓我們走三天的路程,到曠野裏向上主我們的天主舉行祭獻。
“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.
19 但是我知道,若不用強硬的手段,埃及王決不會讓你們走。
ಆದರೂ ಈಜಿಪ್ಟಿನ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂದು ನನಗೆ ನಿಶ್ಚಯವಾಗಿ ತಿಳಿದಿದೆ.
20 因此,我要在埃及顯各種奇蹟,打擊那地;以後他才放你們走。
ಹೀಗಿರುವುದರಿಂದ ನನ್ನ ಕೈಯನ್ನು ಚಾಚಿ ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿ, ನಾನು ಅದನ್ನು ನಾನಾ ವಿಧವಾಗಿ ಬಾಧಿಸುವೆನು. ತರುವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
21 我必要使這百姓在埃及人眼中蒙恩,因此,你們離去時不致空手而走。
“ಇದಲ್ಲದೆ ಈ ಜನರಿಗೆ ಈಜಿಪ್ಟಿನವರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ.
22 各個婦人應向鄰舍的婦女,向住在自己家中的女人索取金鉓、銀飾和 衣服,穿戴在你們子女身上:這樣你們就剝奪人埃及人。」
ಆದರೆ ಪ್ರತಿ ಸ್ತ್ರೀಯು ತನ್ನ ಮನೆಯಲ್ಲಿ ಇಳಿದುಕೊಂಡಿರುವ ಸ್ತ್ರೀಯಿಂದಲೂ ನೆರೆಯವಳಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಮತ್ತು ವಸ್ತ್ರಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಪುತ್ರಪುತ್ರಿಯರ ಮೇಲೆ ಹಾಕಿರಿ. ಹೀಗೆ ನೀವು ಈಜಿಪ್ಟಿನವರನ್ನು ಸೂರೆಮಾಡುವಿರಿ,” ಎಂದರು.