< 以斯拉記 1 >

1 波斯王居魯士元年,為應驗上主藉耶肋米亞的口所說的話,上主感動波斯王居魯士的心,叫他出一道號令,並向全國頒發上諭說:
ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:
2 「波斯王居魯士這樣說:上天的神「雅威」將地上萬國交給了我,囑咐我在猶大的耶路撒冷,為衪建築一座殿宇。
“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.
3 你們中間凡作衪子民的,願他的神與他同在,上赫特4的耶路撒冷,建築以色列的神「雅威」的──是在耶路撒冷的神。
ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ!
4 所有的遺民,無論僑居在地方,那地方的人都應捐獻金銀、貨財、牲畜,以及自願的獻儀,為那在耶路撒冷的神修建殿宇」。
ಯೆಹೂದ್ಯರಲ್ಲಿ ಬದುಕುಳಿದವರು ಈಗ ವಾಸಿಸುತ್ತಿರುವ ಯಾವುದೇ ಪ್ರದೇಶದಲ್ಲಿ, ಜನರು ಅವರಿಗೆ ಬೆಳ್ಳಿ ಮತ್ತು ಬಂಗಾರ, ಸರಕುಗಳು ಮತ್ತು ಪ್ರಾಣಿಪಶುಗಳನ್ನು ಮತ್ತು ಯೆರೂಸಲೇಮಿನ ದೇವಾಲಯಕ್ಕೆ ಉಚಿತ ಕಾಣಿಕೆಗಳನ್ನು ಒದಗಿಸಬೇಕು.’”
5 於是,猶大和本雅明的族長、司祭、肋未人,以及那些受天主感動了心的人,就起身上去,要建築耶路撒冷的上主的殿宇;
ಆಗ ಯೆಹೂದ ಹಾಗೂ ಬೆನ್ಯಾಮೀನ್ ಕುಟುಂಬಗಳ ಮುಖ್ಯಸ್ಥರೂ, ಯಾಜಕರೂ, ಲೇವಿಯರೂ, ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಹೋಗಲು ಯೆಹೋವ ದೇವರಿಂದ ಪ್ರೇರಿತರಾದವರೆಲ್ಲರೂ ಎದ್ದರು.
6 四鄰八舍都拿出a的金銀、貨財、牲畜和珠實來協助他們,另外還有各種自願的獻儀。
ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು.
7 居魯士王也將上主殿內的器皿,即先前拿步高從耶路撒冷掠奪而放在他神殿裏的器皿,
ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು, ತನ್ನ ದೇವರುಗಳ ಮಂದಿರಗಳಲ್ಲಿ ಇರಿಸಿದ್ದ ಯೆಹೋವ ದೇವರ ಆಲಯದ ಸಲಕರಣೆಗಳನ್ನು ಪಾರಸಿಯ ಅರಸನಾದ ಕೋರೆಷನು ತರಿಸಿದನು.
8 波斯王居魯士司庫官米特達特,將那些東西拿出,點交給猶太人的首領舍士巴匝,
ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು.
9 共計金盆三十,銀盆一千,刀子二十九,
ಅವುಗಳ ಲೆಕ್ಕವು ಹೀಗಿವೆ: ಬಂಗಾರದ 30 ತಟ್ಟೆಗಳು. ಬೆಳ್ಳಿಯ 1,000 ತಟ್ಟೆಗಳು. ಬೆಳ್ಳಿಯ 29 ಪಾತ್ರೆಗಳು.
10 金碗三十,次等銀碗四百一十,其他器皿一千:
ಬಂಗಾರದ 30 ಬಟ್ಟಲುಗಳು. ಬೆಳ್ಳಿಯ 410 ಬಟ್ಟಲುಗಳು. ಇನ್ನಿತರು 1,000 ವಸ್ತುಗಳು.
11 一切金銀器皿,共五千四百件。舍市巴匝就帶著這一切與充軍的人,從巴比倫回了耶路撒冷。
ಒಟ್ಟು 5,400 ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳು. ಇವುಗಳನ್ನೆಲ್ಲಾ ಬಾಬಿಲೋನಿನಿಂದ ಯೆರೂಸಲೇಮಿಗೆ ಪ್ರಯಾಣಮಾಡಿದವರ ಸಂಗಡ ಶೆಷ್ಬಚ್ಚರನು ತೆಗೆದುಕೊಂಡು ಹೋದನು.

< 以斯拉記 1 >