< 何西阿書 11 >
1 當以色列尚在童年時,我就愛了他;從在埃及時,我就召他為我的兒子。
೧ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.
2 可是我越呼喚他們,他們越遠離我,去給巴耳獻祭,向偶像進香。
೨ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.
3 是我教了厄弗辣因邁步,雙臂抱了他們,但他們卻不理會是我照顧了他們。
೩ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.
4 是我用仁慈的繩索,用愛情的帶子牽著他們,對他們有如高舉嬰兒到自己面頰的慈親,俯身喂養他們。
೪ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು.
5 他們卻要返回埃及埃及,要亞述作他們的君王,因為他們拒絕歸依我。
೫ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.
6 刀劍必要在他們的城中橫行,殺絕他們的子女,在他們的堡壘中吞噬他們。
೬ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.
7 我的百姓因著自己的叛逆使我厭煩了;為此上主給他們指定了應負的重軛,因為衪已不再憐惜他們。
೭ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.
8 厄弗辣因! 我怎能捨棄你﹖以色列! 我怎能拋掉你。我怎能仗你如同阿德瑪,待你如同責波殷﹖我的心已轉變,我的五內已感動;
೮ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.
9 我不再按卜憤怒行事,不再毀滅厄弗辣因,因為我是天主而不是人,是在你們中間的聖言,而不是伏於城門的仇敵。
೯ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.
10 的確,他們必要追隨上主,衪要像獅子吼叫;衪一吼叫,衪的子女便要從西方急速歸來,猶如飛鳥由埃及急速飛來,
೧೦ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;
11 猶如鴿子從亞述飛來;我要使他們安居在他們家中──上主的斷語。
೧೧ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.
12 厄弗辣因用,以色列家以詭詐欺騙了我;猶大對天主也是不忠實的證人,他只知忠於迷惑他的人。
೧೨ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.