< 以賽亞書 4 >
1 那一日,七個女人要抓住一個男人說:「我們吃自己的食糧,穿自己的衣服,只要你容許我們歸於你名下,除去我們的恥辱。」
೧ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.
2 那一日,由上主所發出的苗芽,必成為以色列遺民的光輝與榮耀;地上的果實必成為他們的誇耀與光彩。
೨ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.
3 凡留在熙雍的,遺在耶路撒冷的,即凡錄在耶路撒冷的生命冊上的,都必將稱為聖者。
೩ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.
4 當吾主以懲治的神和毀滅的神,洗淨熙雍女子的污穢,滌除耶路撒冷中間的血漬時,
೪ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು.
5 上主將顯現在熙雍山整個地盤與其集會之上:白日藉著雲煙,黑夜藉光亮的火燄;因為在一切之上,有上主的榮耀,有如天蓋和帳棚,
೫ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.
6 白日作蔭影以免炎暑,又可作庇護,以避狂風暴雨。
೬ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು.