< 以賽亞書 60 >

1 耶路撒冷啊!起來炫耀罷!因為你的光明已經來到,上主的榮耀已經照耀在你身上。
ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
2 看啊!黑暗籠罩著大地,陰雲遮蔽著萬民;但上主卻照耀著你,他的榮耀要彰顯在你的身上。
ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.
3 萬民要奔赴你的光明,眾王要投奔你升起的光輝。
ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.
4 舉起你的眼向四方觀望罷!他們都聚集來到你這裏:你的眾子要從遠方而來,你的女兒要被抱回來。
ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.
5 那時,你見到這情形,必要喜形於色,你的心靈必要激動而舒暢,因為海洋的珍寶都要歸於你,萬民的財富都要歸你所有。
ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.
6 成群結隊的駱駝,以及米德楊和厄法的獨峰駝要遮蔽你,牠們都是由舍巴滿載黃金和乳香而來,宣揚上主的榮耀。
ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.
7 刻達爾的一切羊群都要聚在你前,乃巴約特的公羊都要供你使用;牠們要登上我的祭壇作為我歡悅的祭品,以光榮我榮耀的處所。
ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.
8 那些像雲彩飛來,像鴿子回籠的是誰﹖
ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು?
9 那是為我集合起來的船隻,塔爾史士的船隻為首,從遠處帶來了你的子女,以及他們的金銀;這都是為了上主你的天主的名,為了那光榮你的以色列的聖者的緣故。
ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.
10 外邦的子民要修建你的城垣,他們的君王要來事奉你,因為我在怒氣中打擊了你,但我在慈悲中又憐憫了你。
೧೦ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.
11 你的門要時常敞開,白天黑夜都不要關閉,好讓萬民的財富,在他們的君王領導下,運到你這裏來。
೧೧ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.
12 因為凡不肯事奉你的民族和國家,必要滅亡,這樣的民族必要完全滅絕。
೧೨ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.
13 黎巴嫩的光榮要歸於你;柏樹、榆樹和松樹都要聚在一起,裝飾我的聖所,因為我要光榮我立足之地。
೧೩ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.
14 曾經欺壓過你者的子孫,要來向你屈服;凡輕視過你的人,都要在你腳前下拜;他們要稱呼你為「上主的城,」「以色列聖者的熙雍。」
೧೪ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.
15 我要使你成為萬世的尊榮,萬代的喜悅,以代你從前所受的遺棄、惱恨,與無人經過的痛苦。
೧೫ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.
16 你要吸萬國的奶,吮眾王的乳房,這樣你將知道我,上主,是你的拯救者,你的救主,雅各伯的強有力者。
೧೬ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.
17 我要以金子來代替黃銅,以銀子代替鐵,以黃銅代替木頭,以鐵代替石頭;我要立「和平」為你的官長,立「正義」為你的政要。
೧೭ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.
18 在你的地域裏再聽不到強暴的事情;你要稱你的城垣為「救恩,」你的城門為「讚揚。」
೧೮ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.
19 太陽不再是你白天的光明,月亮也不再照耀你,上主要作你永久的光明,你的天主要作你的光輝。
೧೯ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.
20 你的太陽再不降落,你的月亮再不虧缺,因為上主要作你永久的光明,你悲哀的日子已經終結。
೨೦ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.
21 你的人民都要成為義人,要永遠繼承地業,因為他們是我所栽植的嫩芽,是我手中的工程,使我得到榮耀。
೨೧ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.
22 渺小的要成為千人村,微弱的要成為強大的民族:我是上主,我要在定期中迅速完成此事。
೨೨ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.

< 以賽亞書 60 >