< 耶利米書 20 >

1 依默爾的兒子帕市胡爾司祭,上主殿宇的總監督,聽見了耶肋米亞預言這些事,
ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.
2 帕市胡爾便打了耶肋米亞先知,給他加上腳鐐,把他囚在上主殿內本雅明上門的監牢裏。
ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.
3 次日,帕市胡爾給耶肋米亞去了腳鐐;耶肋米亞便對他說:「上主不再稱你為「帕市胡爾」,卻稱你為「驚慌四起」。
ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್ ಎಂದು ಹೇಳಿದ್ದಾನೆ.
4 因為上主這樣說:看,我必使你和你的一切友人遭受慌;他們必倒在敵人的刀下,而且你要親眼看見這事;我將全猶大人交在巴比倫王的手中,他要將他們擄到巴比倫去,用刀擊殺。
ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.
5 這城的一切財物,一切積蓄,一切珍寶,以及猶大列王的一切寶藏,我都要交在他們敵人的手中,讓他們搶劫掠奪,運到巴比倫去。
ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.
6 至於你,帕市胡爾! 以及凡住在你家中的人,都要被擄去充軍;你和你向他們講假預言的一切友人,都要到巴比倫去,死在那裏,埋在那裏。」
ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.
7 上主,你引誘了我,我讓我自己受了你的引誘;你確實比我強,你戰勝了。我終日成為笑柄,人都嘲笑我。
ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.
8 因為我每次發言,必得叫喊,必得高呼:「暴虐! 破壞! 」實在,上主的話,為我日日成為受侮辱和譏笑的因由。
ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.
9 假使我說:我不再想念他,不再以他的名發言;在我心中就像有火在焚燒,蘊藏在我的骨髓內;我竭力抑制,亦不可能。
“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.
10 實在,我聽到了多少人私相耳語:「驚慌四起! 你們揭發,我們就必對他提出控訴。」甚至我一切的友好都在偵察我的破綻:「也許他會入彀,那我們必能制勝他,對他施行報復。」
೧೦“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.
11 但是與我同在的上主,好像是一位孔武有力的戰士,為此迫害我的人只有失敗,決不能制勝;由於謀事不成,必蒙受極大的恥辱,永不可磨滅的羞辱。
೧೧ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.
12 噫萬軍的上主! 你考驗義人,洞察人的肝膽肺腑;我既給你訴說了我的案情,你使我見到你對他們的報復。
೧೨ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.
13 你們應歌頌上主,讚揚上主,因為他從惡人的手中,救出了窮苦人的性命。
೧೩ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.
14 願我誕生的那一天,是可咒罵的;願我母親生我的那一天,不蒙受祝福!
೧೪ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!
15 願那給我父親報信說:「給你生了一個男孩,」叫他異常高興的人,是可詛咒的!
೧೫“ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ!
16 願這人像上主不顧惜消滅的城市:早晨聽到哀號,正午聽到警報;
೧೬ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!
17 因為他沒有叫我死在母胎,使我的母親成為我的墳墓,叫她永遠不分娩生我!
೧೭ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.
18 為什麼我要從母胎裏出來,眼見辛酸痛苦,在羞辱中消磨我的歲月﹖
೧೮ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?

< 耶利米書 20 >