< 耶利米書 28 >
1 同年,即猶大王漆德克雅即位之初第四年五月,基貝紅人阿組爾的兒子哈納尼雅先知,在上主殿裏當著司祭和全體人民對我說:「
೧ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,
2 萬軍的上主,以色列的天主這樣說:我已折斷了巴比倫王的軛。
೨“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.
3 還有兩年,我就要取回巴比倫王拿步高,由這地取去,帶往巴比倫的一切上主殿的器皿,再放在這地方,
೩ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.
4 且領回猶大王約雅金的兒子耶苛尼雅及一切流徙至巴比倫的猶大俘虜,再來到這地方──上主的斷語──因為我要折斷巴比倫王的軛。」
೪“‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”
5 耶肋米亞先知立當著站在上主殿裏的司祭和全體人民,答覆了先知哈納尼雅。
೫ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,
6 耶肋米亞先知說:「盼望是這樣! 惟願上主這樣做! 惟願上主實踐你預言的話,使上主殿宇的器皿和一切俘虜,從巴比倫再回到這地方來!
೬“ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!
7 不過請聽我當面願對你和全體人民要說的這一句話:
೭ಆದರೆ ನಾನು ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು,
8 自古以來,在我和你以前的先知,對多少地區和強盛的王國,曾預言過戰爭,饑饉和瘟疫。
೮ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.
9 至於預言和平的先知,只在這先知的話實現以後,纔可認出這先知確是上主派遣的。
೯ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು.
10 哈納尼雅先知便從耶肋米亞先知頸上取下木軛,折斷了,
೧೦ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ,
11 然後對全體人民說:「上主這樣說:還有兩年,我要這樣從一切民族的頸上,折斷巴比倫王拿步高的軛。」於是耶肋米亞先知只得自行離去。
೧೧“ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.
12 哈納尼雅先知從耶肋米亞先知頸上取下木軛折斷以後,即有上主的話傳給耶肋米亞說:「
೧೨ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
13 你去告訴哈納尼雅說:上主這樣說:;你折斷了木軛,但我必做鐵軛來代替。
೧೩“ನೀನು ಹೋಗಿ ಹನನ್ಯನಿಗೆ, ಯೆಹೋವನು ಹೀಗೆ ಹೇಳುತ್ತಾನೆ, ‘ನೀನು ಮರದ ನೊಗಗಳನ್ನು ಮುರಿದುಬಿಟ್ಟೆ, ಅವುಗಳಿಗೆ ಬದಲಾಗಿ
14 因為萬軍的上主,以色列的天主這樣說:我要將鐵軛放在這一切民族的頸上,使他們服事拿步高巴比倫王;他們該服事他,因為連田野的走獸我也交給了他。」
೧೪ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.
15 耶肋米亞先知於是對哈納尼雅先知說:「哈納尼雅! 請聽,上主並沒有派遣你,你竟使這人民相信謊言。
೧೫ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.
16 為此,上主這樣說:看,我要把你趕出地面;今年你必要死,因為你說了背叛上主的話。」
೧೬ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.
೧೭ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರ್ಷ ಏಳನೆಯ ತಿಂಗಳಲ್ಲಿ ಸತ್ತನು.